MUDA Scam: ಸಿದ್ದರಾಮಯ್ಯ ಪತ್ನಿ ಎ2 ಆರೋಪಿ ಪಾರ್ವತಿ ಪಾತ್ರವೇನು?-ಇಲ್ಲಿದೆ ಮಾಹಿತಿ
Parvathi Siddaramaiah: ಇಂದು (ಸೆಪ್ಟೆಂಬರ್ 27) ಮುಡಾ ಹಗರಣ ಆರೋಪ ಪ್ರಕರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತದಲ್ಲಿ ಎಫ್‌ಐಆರ್ ದಾಖಲಾಗಿದೆ. ಇನ್ನು ಸಿಎಂ ಸಿದ್ದರಾಮಯ್ಯ ಎ1 ಆರೋಪಿಯಾಗಿದ್ದು, ಎ2 ಆರೋಪಿ ಪತ್ನಿ ಪಾರ್ವತಿ ಆಗಿದ್ದಾರೆ. ಹಾಗಾದರೆ ಪಾರ್ವತಿ ಸಿದ್ದರಾಮಯ್ಯ ಅವರು ಹೆಸರು ಬಂದಿದ್ದಾದ್ರು ಹೇಗೆ ಹಾಗೂ ಆರೋಪಗಳೇನು ಎಂದು ಇಲ್ಲಿ ತಿಳಿಯಿರಿ.
ಇಷ್ಟು ದಿನ ಬೆಳಕಿಗೆ ಬರದ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ಕಳೆದ ತಿಂಗಳಿನಿಂದ ಸುದ್ದಿಯಲಿದ್ದಾರೆ. ಇದಕ್ಕೆ ಪ್ರಮುಖ ಕಾರಣವೇ ಮುಡಾ ಹಗರಣ ಪ್ರಕರಣ ಆರೋಪ. ಮೈಸೂರಿನ ಮುಡಾ ಹಗರಣದಲ್ಲಿ ಪರ್ಯಾಯ ನಿವೇಶನಗಳ ಹಂಚಿಕೆಯ ಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರ ಹೆಸರು ಕೇಳಿಬರುತ್ತಲೇ ಇತ್ತು.

ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು. ಈ ಸಂಬಂಧ ಜನಪ್ರತಿನಿಧಿಗಳ ಕೋರ್ಟ್ ಕೂಡ ಸಿಎಂ ಸಿದ್ಧರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿತ್ತು. ಕೋರ್ಟ್ ಆದೇಶದಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಎ1 ಆರೋಪಿಯಾಗಿ ಮುಡಾ ಹಗರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಅವರ ಪತ್ನಿ ಪಾರ್ವತಿ ಎ 2 ಆರೋಪಿಯಾಗಿದ್ದಾರೆ.
ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜನ ಸ್ವಾಮಿ ಎ3 ಆರೋಪಿಯಾದರೇ, ಎ4 ಆರೋಪಿಯನ್ನಾಗಿ ಭೂ ಮಾಲೀಕ ದೇವರಾಜು ಹಾಗೂ ಇತರರು ಎ5 ಆರೋಪಿಯನ್ನಾಗಿ ಮಾಡಿ ಮೈಸೂರಿನ ಲೋಕಾಯುಕ್ತ ಎಸ್ಪಿ ಕಚೇರಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ಸಂಕಷ್ಟ ಎದುರಾದಂತಾಗಿದೆ.
ಇನ್ನು ಇದುವರೆಗಿನ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಪಾರ್ವತಿ ಅವರು ಬಹಿರಂಗವಾಗಿ ಕಾಣಿಸಿಕೊಂಡೇ ಇಲ್ಲ. ಸಿದ್ದರಾಮಯ್ಯ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲೂ ಕೂಡ ಅವರು ಕಾಣಿಸಿಕೊಂಡಿರಲಿಲ್ಲ.
ಅಷ್ಟೇ ಅಲ್ಲದೆ, ಅವರು ಖಾಸಗಿ ಸಭೆ ಸಮಾರಂಭಗಳಲ್ಲೂ ಕಾಣಿಸಿಕೊಂಡಿರುವುದು ತುಂಬಾ ಕಡಿಮೆ ಎಂದು ಹೇಳಬಹುದಾಗಿದೆ. ಸಿದ್ದರಾಮಯ್ಯನವರ ಜೊತೆಯಲ್ಲೂ ಯಾವ ವೇದಿಕೆ ಕಾರ್ಯಕ್ರಮಗಳಲ್ಲೂ ಕಾಣಿಸಿಕೊಂಡಿಲ್ಲ. ಹಬ್ಬ-ಹರಿದಿನ ಚುನಾವಣೆ ಸಂದರ್ಭಗಳಲ್ಲೂ ಪಾರ್ವತಿ ಸಿದ್ದರಾಮಯ್ಯ ಅವರು ಮಾಧ್ಯಮಗಳ ಕಾಣಿಸಿಕೊಂಡಿರುವ ಉದಾಹರಣೆಗಳಿಲ್ಲ.
ಆದರೆ ಅನೇಕ ರಾಜಕೀಯ ನಿರ್ಧಾರಗಳನ್ನು ಬಗ್ಗೆ ತಮ್ಮ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಮತ್ತು ಪುತ್ರ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುತ್ತಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆದರೆ ಇದೀಗ ಕಳೆದ ಒಂದು ತಿಂಗಳಿನಿಂದಲೂ ಮುಡಾ ಹಗರಣ ಪ್ರಕರಣ ಸದ್ದು ಮಾಡುತ್ತಿದ್ದು, ಇಂದು ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರನ್ನು ಈ ಪ್ರಕರಣದಲ್ಲಿ ಎ2 ಆರೋಪಿಯನ್ನಾಗಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದ್ದಾರೆ.
ಸೆಕ್ಷನ್‌ಗಳ ವಿವರ: ಸಿಆರ್‌ಪಿಸಿ ಸೆಕ್ಷನ್‌ನಡಿ 156(3)ರ ಅಡಿ ಎಫ್ಐಆರ್ ದಾಖಲಾಗಿದ್ದು, ಐಪಿಸಿ ಸೆಕ್ಷನ್ 120B, 166, 403, 406, 420, 426, 465, 468, 340, 351ರ ಅಡಿ ಕೇಸ್ ದಾಖಲಾಗಿದೆ. ಅಷ್ಟೇ ಅಲ್ಲದೇ, ಭ್ರಷ್ಟಾಚಾರ ನಿಗ್ರಹ ಕಾಯ್ದೆ ಸೆಕ್ಷನ್ 9, 13ರ ಅಡಿ ಎಫ್ಐಆರ್ ಆಗಿದೆ. ಇನ್ನು ಬೇನಾಮಿ ಆಸ್ತಿ ನಿಷೇಧ ಕಾಯ್ಡೆ ಸೆಕ್ಷನ್ 53 ಮತ್ತು 54, ಕರ್ನಾಟಕ ಭೂಕಬಳಿಕೆ ನಿಷೇಧ ಕಾಯ್ದೆ ಸೆಕ್ಷನ್ 3, 4ರ ಅಡಿ ಎಫ್ಐಆರ್ ದಾಖಲಿಸಲಾಗಿದೆ.
1988ರ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 9 ಮತ್ತು 13ರ ಅಡಿಯಲ್ಲಿ ಮತ್ತು ಬೇನಾಮಿ ಆಸ್ತಿ ವಹಿವಾಟು ನಿಷೇಧ ಕಾಯಿದೆ, 1988 ರ ಸೆ.3, 53 ಮತ್ತು 54 ರ ಅಡಿಯಲ್ಲಿ ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯಿದೆ, 2011 ರ 3, 4 ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಗಳನ್ನು ನ್ಯಾಯಾಲಯವು ಪಟ್ಟಿ ಮಾಡಿದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಎ1, ಅವರ ಪತ್ನಿ ಪಾರ್ವತಿ ಎ2 ಆರೋಪಿ ಆಗಿದ್ದಾರೆ. ಅವರ ಬಾಮೈದಾ ಮಲ್ಲಿಕಾರ್ಜುನ ಎ3, ಭೂಮಾಲಿಕ ದೇವರಾಜು ಎ4 ಹಾಗೂ ಎ5 ಇತರರು ಎಂದು ಎಫ್‌ಐಆರ್‌ನಲ್ಲಿ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದಾರೆ.












Click it and Unblock the Notifications