ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರಿ ಬಸ್‌ಗಳಲ್ಲಿ ಮೊಬೈಲ್‌ನಲ್ಲಿ ಮಾತನಾಡಿದ್ರೆ ಬೀಳುತ್ತೆ ದಂಡ

|
Google Oneindia Kannada News

ಬೆಂಗಳೂರು, ನ.12: ಸರ್ಕಾರಿ ಬಸ್ ಪ್ರಯಾಣದ ವೇಳೆ ಮೊಬೈಲ್ ಬಳಸಿ ಜೋರಾಗಿ ಮಾತನಾಡುವಂತಿಲ್ಲ. ಬಸ್ ಪ್ರಯಾಣದ ವೇಳೆ ಮೊಬೈಲ್‌ನಲ್ಲಿ ಜೋರಾಗಿ ಮಾತನಾಡಿ ಕಿರಿಕಿರಿ ಉಂಟು ಮಾಡಿದರೆ ದಂಡ ಬೀಳೋದು ಗ್ಯಾರೆಂಟಿ!.

ಸರ್ಕಾರಿ ಬಸ್ ಪ್ರಯಾಣದ ವೇಳೆ ಮೊಬೈಲ್ ಫೋನ್ ಬಳಿಸಿ ಪ್ರಯಾಣಿಕರು ಮಾತನಾಡುವುದನ್ನು ನಿಷೇಧಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಆದೇಶ ಹೊರಡಿಸಿದ್ದಾರೆ. ಅಚ್ಚರಿ ಏನೆಂದರೆ, ಪ್ರಯಾಣದ ವೇಳೆ ಹಾಡು, ಸಿನಿಮಾ ಮುಂತಾದವುಗಳನ್ನು ಜೋರಾಗಿ ಹಾಕುವಂತಿಲ್ಲ. ಒಂದು ವೇಳೆ ಹಾಕಿದರೆ ಮೊದಲು ಬಸ್ ನಿರ್ವಾಹಕ ಪ್ರಯಾಣಕನಲ್ಲಿ ಮನವಿ ಮಾಡಿಕೊಳ್ಳಬೇಕು. ಮನವಿ ಕಡೆಗಣಿಸಿದರೆ ಬಸ್ ಅರ್ಧಕ್ಕೆ ನಿಲ್ಲಿಸಿ ಪ್ರಯಾಣಿಕರನ್ನು ಅಲ್ಲೇ ಇಳಿಸಿ ಮುಂದುವರೆಯ ಬೇಕು.

ಈ ಬಗ್ಗೆ ಏನಾದರು ಸಮಸ್ಯೆಗಳು ಎದುರಾದರೆ ತಕ್ಷಣವೇ ಸ್ಥಳೀಯ ಪೊಲೀಸ್ ಠಾಣೆಗೆ ವಿಷಯ ತಿಳಿಸಬೇಕು. ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1989ರ ನಿಯಮ 94(1)V ಪ್ರಕಾರ ಇದು ಕಾನೂನು ಬಾಹಿರವಾಗಿರುವುದರಿಂದ ಬಸ್‌ಗಳಲ್ಲಿ ಜೋರಾಗಿ ಶಬ್ದ ಉಂಟು ಮಾಡಿ ಮೊಬೈಲ್ ಬಳಸುವುದಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದರಿಂದ ಶಬ್ದಮಾಲಿನ್ಯ ಉಂಟಾಗುವದರ ಜೊತೆ ಪ್ರಯಾಣಿಕರಿಗೂ ಕಿರಿಕಿರಿ ಉಂಟಾಗುತ್ತಿರುವ ಬಗ್ಗೆ ಹಲವು ದೂರಗಳ ಹಿನ್ನೆಲೆ, ಕೆಎಸ್ಆರ್ಟಿಸಿ ಈ ಬಗ್ಗೆ ಸುತ್ತೋಲೆ ಹೊರಡಿಸಿ ಆದೇಶಿಸಿದೆ.

 Passengers banned from talking in mobile loudspeakers in KSRTC buses

ಒಂದು ಕೋಟಿಗೂ ಹೆಚ್ಚು ದಂಡ ವಸೂಲಿ: ಟ್ರಾಫಿಕ್ ಪೊಲೀಸರು ವಾಹನಗಳಿಂದ ದಂಡ ವಸೂಲಿ ಮಾಡುವುದು ಸಾಮಾನ್ಯ. ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿ ಬಸ್ ಗಳಿಂದಲೂ ದಂಡ ವಸೂಲಿ ಮಾಡುವಲ್ಲಿ ಟ್ರಾಫಿಕ್ ಪೋಲಿಸರು ಹಿಂದೆ ಬಿದ್ದಿಲ್ಲ.

2021 ರ ಇಂದಿನವರೆಗೂ 1, 11, 87,500 ರೂಪಾಯಿ ದಂಡ ವಿಧಿಸಲಾಗಿದೆ. ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿ ಬಸ್‌ಗಳಿಂದ 14,601 ಕೇಸ್‌ಗಳನ್ನು ದಾಖಲಿಸಲಾಗಿದೆ.

ಇದುವರೆಗೂ ಹತ್ತು ಲಕ್ಷಕ್ಕೂ ಹೆಚ್ಚು ರೂಪಾಯಿ ದಂಡ ವಸೂಲಿ ಮಾಡಲಾಗಿದೆ ಆದರೆ ಇನ್ನೂ ಬಾಕಿ ಒಂದು ಕೋಟಿ ರೂಪಾಯಿ ಇದೆ ಎನ್ನುತ್ತಾರೆ ಟ್ರಾಫಿಕ್ ಪೊಲೀಸರು. ಹಾಗೆಯೇ ಇಷ್ಟು ಹಣವನ್ನು ವಸೂಲಿ ಮಾಡುವ ಭರವಸೆಯನ್ನು ಪೊಲೀಸರು ಹೊಂದಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿ ಬಸ್‌ಗಳಿಂದ ಲಕ್ಷಾಂತರ ರೂಪಾಯಿ ದಂಡ ವಿಧಿಸಿ ವಸೂಲಿ ಮಾಡಲಾಗಿದೆ. ಕಳೆದ ವರ್ಷ ಅಂದರೆ 2019ರಲ್ಲಿ 20,933 ಕೇಸ್‌ಗಳನ್ನು ಹಾಕಿ 48,26,300 ರೂಪಾಯಿ ದಂಡ ವಿಧಿಸಲಾಗಿತ್ತು. ಬಸ್ ಡ್ರೈವರ್‌ಗಳಿಂದ ಸ್ಥಳದಲ್ಲಿಯೇ ದಂಡ ವಸೂಲಿ ಮಾಡಲು ಪೊಲೀಸರು ಮುಂದಾಗುತ್ತಾರೆ ಆದರೆ ಆ ಸಮಯದಲ್ಲಿ ಟ್ರಾಫಿಕ್ ಜಾಮ್ ಉಂಟಾಗಬಹುದು ಅಥವಾ ಚಾಲಕರ ಬಳಿ ದುಡ್ಡು ಇಲ್ಲದೆ ಇರಬಹುದು. ಹೀಗಾಗಿ, ನೇರವಾಗಿ ಸಂಸ್ಥೆಗೆ ಕಳುಹಿಸಲಾಗುವುದು ಎಂದು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.

ಬಿಎಂಟಿಸಿ ಹಾಗೂ ಕೆಎಸ್ಆರ್‌ಟಿಸಿ ಬಸ್ ಚಾಲಕರು ನಿರ್ಲಕ್ಷ್ಯ ಚಾಲನೆ ಮಾಡುತ್ತಾರೆ. ನಿಷೇಧಿತ ಪ್ರದೇಶದಲ್ಲಿ ಕರ್ಕಶ ಶಬ್ದ ಮಾಡುವುದು, ಸಂಚಾರ ನಿಯಮ ಉಲ್ಲಂಘನೆ ಮಾಡಿ ಚಾಲನೆ ಮಡುವುದರಲ್ಲೂ ಮುಂದಿವೆ. ಬೆಂಗಳೂರಿನ ಬಹುತೇಕ ಸಿಗ್ನಲ್‌ಗಳಲ್ಲಿ ಸಂಚಾರ ಪೊಲೀಸರು ಸ್ವಯಂ ಚಾಲಿತ ಕ್ಯಾಮರಾಗಳನ್ನು ಅಳವಡಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ಸ್ವಯಂ ಚಾಲಿತ ಕ್ಯಾಮರಾಗಳು ಸಾಕ್ಷಿ ಸಮೇತ ಸೆರೆ ಹಿಡಿಯುತ್ತವೆ. ಇದನ್ನು ಆಧರಿಸಿ ಸಂಚಾರ ಪೊಲೀಸರು ದಂಡವನ್ನು ವಿಧಿಸುತ್ತಾರೆ. ಇದರ ಜತೆಗೆ ಸಿಗ್ನಲ್ ಗಳಲ್ಲಿಕಾರ್ಯ ನಿರ್ವಹಿಸುವ ಸಂಚಾರ ಪೊಲೀಸರು ನಿಯಮ ಉಲ್ಲಂಘನೆ ಬಗ್ಗೆ ಮೊಬೈಲ್‌ನಲ್ಲಿ ಚಿತ್ರ ತೆಗೆದುಕೊಂಡು ಕೇಸು ದಾಖಲಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಹೀಗಾಗಿ ನಿಯಮ ಉಲ್ಲಂಘನೆ ಮಾಡುವ ವಾಹನಗಳ ವಿರುದ್ಧ ಸದ್ದಿಲ್ಲದೇ ಕೇಸುಗಳು ಬೀಳುತ್ತಿವೆ.

English summary
KSRTC MD Shivayogi Kalasad said the corporation should take steps to restrict passengers traveling on the company’s vehicles to talking in mobiles on loudspeakers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X