SSLC, PUC ವಿದ್ಯಾರ್ಥಿಗಳಿಗೆ ಜಾಕ್‌ಪಾಟ್: ಪಾಸಿಂಗ್ ಮಾರ್ಕ್ಸ್ ಕಡಿತ: ಸಂಪೂರ್ಣ ಮಾಹಿತಿ ಇಲ್ಲಿದೆ
ಬೆಂಗಳೂರು, ಅಕ್ಟೋಬರ್ 15: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಉತ್ತೀರ್ಣ ಕನಿಷ್ಠ ಅಂಕ ಕಡಿತಗೊಳಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಗುಡ್ ನ್ಯೂಸ್ ನೀಡಿದ್ದಾರೆ. ಪ್ರತಿಯೊಬ್ಬ ವಿದ್ಯಾರ್ಥಿ ಜೀವನದಲ್ಲಿ 10ನೇ ತರಗತಿ (ಎಸ್‌ಎಸ್‌ಎಲ್‌ಸಿ) ಹಾಗೂ 12ನೇ ತರಗತಿ (ಪಿಯುಸಿ) ಅತ್ಯಂತ ಮಹತ್ವದ ಘಟ್ಟವಾಗಿರುತ್ತದೆ. ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿಯಲ್ಲಿ ಫೇಲ್ ಆದರೂ ತಮ್ಮ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನ ಮೊಟಕುಗೊಳಿಸುತ್ತಾರೆ.
ಇಂತಹ ಘಟನೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ವಿದ್ಯಾಭ್ಯಾಸಗಳಿಗೆ ಅನುಕೂಲವಾಗುವಂತೆ ಮಾಡಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಉತ್ತೀರ್ಣರಾಗಲು ಅಗತ್ಯವಿರುವ ಕನಿಷ್ಠ ಪಾಸಿಂಗ್ ಅಂಕವನ್ನು ಕಡಿತಗೊಳಿಸಿದೆ. 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ರಾಜ್ಯ ಶಿಕ್ಷಣ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ.

ತೇರ್ಗಡೆ ಅಂಕದಲ್ಲಿ ಕಡಿತ ಮಾಡಲಾಗಿದ್ದು, ಪ್ರಸಕ್ತ ವರ್ಷದಿಂದಲೇ ಈ ನಿಯಮ ಜಾರಿಗೆ ಬರಲಿದೆ. ಪಾಸಿಂಗ್ ಮಾರ್ಕ್ಸ್ ಕಡಿತದ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಿಯೇ ನಿರ್ಧಾರ ಮಾಡಲಾಗಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇನ್ಮುಂದೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.33ರಷ್ಟು ಅಂಕ ಪಡೆದರೂ ಪಾಸ್ ಎಂಬುದಾಗಿ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಇನ್ಮುಂದೆ ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳು 600 ಕ್ಕೆ 198 ಅಂಕ ಪಡೆದರೆ ಪಾಸ್. ಕನಿಷ್ಠ 30 ಅಂಕ ಪಡೆಯುವುದು ಕಡ್ಡಾಯವಾಗಿದೆ ಲಿಖಿತ ಹಾಗೂ ಆಂತರಿಕ ಅಂಕ ಸೇರಿದಂತೆ 30 ಅಂಕ ಪಡೆದು 198 ಅಂಕ ಪಡೆದರೆ ಪಾಸ್ ಆಗಲಿದ್ದಾರೆ ಎಂದು ಮಧು ಬಂಗಾರಪ್ಪ ಅವರು ಹೇಳಿದರು.
ವಿದ್ಯಾರ್ಥಿಗಳು ಪ್ರತಿಯೊಂದು ವಿಷಯದಲ್ಲಿ ಕನಿಷ್ಠ 30 ಅಂಕಗಳನ್ನು ಪಡೆಯಬೇಕು. ಪಾಸಿಂಗ್ ಮಾರ್ಕ್ಸ್ ಕಡಿತ ವಿಚಾರವಾಗಿ ಪಬ್ಲಿಕ್ ಅಭಿಪ್ರಾಯ ಹಾಕಿದ್ದೆವು. ಶೇಕಡ 33 ರಷ್ಟು ಪರವಾಗಿ 701 ಪತ್ರಗಳು ಬಂದಿದ್ದವು. ಶೇಕಡ 35ರಷ್ಟು ಪರವಾಗಿ 8 ಪತ್ರಗಳು ಬಂದಿದ್ದವು. ಹೀಗಾಗಿ 2025 ಮತ್ತು 26 ನೇ ಸಾಲಿನಿಂದ 33% ಜಾರಿಗೆ ತರುತ್ತಿದ್ದೇವೆ. 2025 ಮತ್ತು 26ನೇ ಸಾಲಿನಿಂದ ಎಸ್ ಎಸ್ ಎಲ್ ಸಿ ಯಲ್ಲಿ ಶೇಕಡ 33% ರಷ್ಟು ಅಂಕ ಪಡೆದರೆ ಪಾಸ್ ಎಂದು ಮಧು ಬಂಗಾರಪ್ಪ ತಿಳಿಸಿದರು.
2025 ಮತ್ತು 26ನೇ ಸಾಲಿನಿಂದ ಪರೀಕ್ಷಾ ಪಾಸಿಂಗ್ ಅಂಕ ಕಡಿತ ಅಗಲಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಈ ನೂತನ ನಿಯಮವು ಜಾರಿಗೆ ಬರಲಿದೆ. ಪರೀಕ್ಷೆಗೆ ಹಾಜರಾಗುವ ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾಥಿಗಳಿಬ್ಬರಿಗೂ ಅನ್ವಯವಾಗಲಿದ್ದು, ವಿದ್ಯಾರ್ಥಿಗಳ ತೇರ್ಗಡೆ ಪ್ರಮಾಣ ಹೆಚ್ಚಿಸುವ ದೃಷ್ಟಿಯಿಂದ ಮತ್ತು ಸಿಬಿಎಸ್ ಸಿ ಹಾಗೂ ನೆರೆ ರಾಜ್ಯಗಳಲ್ಲಿರುವ ಮಾನದಂಡಗಳನ್ನು ನಮ್ಮಲ್ಲೂ ಜಾರಿಗೆ ತರುವ ಉದ್ದೇಶದ ಹಿನ್ನಲೆ ಈ ಹೊಸ ನಿಯಮ ಜಾರಿಗೆ ತರಲಾಗುತ್ತಿದೆ. ಅಲ್ಲದೇ ಹೊಸ ನಿಯಮದಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಮತ್ತು SSLC ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.












Click it and Unblock the Notifications