Pavithra Gowda: ಪವಿತ್ರಗೌಡ ಜಾಮೀನು ಅರ್ಜಿ ವಿಚಾರ ಏನಾಯ್ತು ?
Pavithra Gowda: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ (ಎ1) ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಗುರುವಾರ ನಡೆಯಿತು. ನಟ ದರ್ಶನ್‌ಗೆ ಆರೋಗ್ಯ ಸಮಸ್ಯೆ ಇರುವುದರಿಂದ ಇದೇ ಪ್ರಕರಣದಲ್ಲಿ ಮಧ್ಯಂತರ ಜಾಮೀನು ನೀಡಲಾಗಿದೆ. ಈಗ ಪವಿತ್ರಾಗೌಡ ಜಾಮೀನು ಅರ್ಜಿ ವಿಚಾರಣೆ ಸಹ ನಡೆದಿದೆ. ಈ ಕೇಸ್‌ನಲ್ಲಿ ಈಗಾಗಲೇ ನಾಲ್ಕು ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಪ್ರಕರಣದ ಆರೋಪಿಯಾಗಿರುವ ಪವಿತ್ರಾ ಸಹ ನಿರಂತರವಾಗಿ ಜಾಮೀನಿಗಾಗಿ ಪ್ರಯತ್ನಿಸುತ್ತಿದ್ದಾರೆ. ಆದರೆ...
ಈ ಬಾರಿಯೂ ಪವಿತ್ರಾಗೌಡಗೆ ನಿರಾಸೆಯಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ಗೆ ಹೈಕೋರ್ಟ್ ಆರು ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅಲ್ಲದೇ ನಾಲ್ಕು ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ಈ ಹಿಂದೆ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ಪವಿತ್ರಾಗೌಡ ಜಾಮೀನು ಅರ್ಜಿ ವಜಾ ಆಗಿತ್ತು. ಹೀಗಾಗಿ, ಮತ್ತೆ ಹೈಕೋರ್ಟ್ನಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ನಲ್ಲಿ ಗುರುವಾರ (ನವೆಂಬರ್ 07) ಪವಿತ್ರಾಗೌಡ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಮುಂದಿನ ವಿಚಾರಣೆಯನ್ನು ನವೆಂಬರ್ 21ಕ್ಕೆ ಮುಂದೂಡಲಾಗಿದೆ.

ಪರಪ್ಪನ ಅಗ್ರಹಾರದಲ್ಲಿ ಪವಿತ್ರಾ: ಇನ್ನು ನಟ ದರ್ಶನ್ ಅವರ ಗೆಳತಿ ಹಾಗೂ ರೇಣುಕಾಸ್ವಾಮಿ ಕೊಲೆ ಕೇಸ್‌ನ ಪ್ರಮುಖ ಆರೋಪಿಯಾಗಿರುವ ಪವಿತ್ರಾಗೌಡ ಅವರು ಇದೀಗ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.
ದರ್ಶನ್ ಆರೋಗ್ಯ ವರದಿ ಹೈಕೋರ್ಟ್‌ಗೆ: ನಟ ಹಾಗೂ ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿಯಾಗಿರುವ ದರ್ಶನ್ ಆರೋಗ್ಯ ವರದಿಯನ್ನು ಹೈಕೋರ್ಟ್‌ಗೆ ಸಲ್ಲಿಸಲಾಗಿದೆ. ವೈದ್ಯಕೀಯ ಅಂಶಗಳನ್ನು ಹೈಕೋರ್ಟ್‌ಗೆ ಸಲ್ಲಿಸಲಾಗಿದೆ. ದರ್ಶನ್ ಬೆನ್ನುನೋವಿನ ಸಮಸ್ಯೆಯಿಂದ ತೀವ್ರ ಬಳಲುತ್ತಿದ್ದಾರೆ.
ಅವರಿಗೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಮುಂದುವರಿದಿದೆ. ಬಳ್ಳಾರಿ ಜೈಲಿನಿಂದ ಮಧ್ಯಂತರ ಜಾಮೀನಿನ ಮೇಲೆ ಹೊರಗೆ ಬಂದಿರುವ ಅವರು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಸಮಸ್ಯೆ ಇರುವುದರಿಂದ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಲಾಗಿದೆ. ಈ ನಡುವೆ ಅವರ ಆರೋಗ್ಯ ಸಮಸ್ಯೆಗೆ ಸಂಬಂಧಿಸಿ, ಸರಣಿ ಪರೀಕ್ಷೆಗಳನ್ನು ನಡೆಸಲಾಗಿದೆ. ಇನ್ನು ಕೋರ್ಟ್ ಸಹ ದರ್ಶನ್‌ಗೆ ಮಧ್ಯಂತ ಜಾಮೀನು ನೀಡುವಾಗ ಕೆಲವು ಪ್ರಮುಖ ಷರತ್ತುಗಳನ್ನು ವಿಧಿಸಿತ್ತು. ಅದರಲ್ಲಿ ಅವರ ಆರೋಗ್ಯ ವರದಿ ಸಲ್ಲಿಸಬೇಕು ಎನ್ನುವುದು ಸಹ ಪ್ರಮುಖವಾಗಿತ್ತು.
ಜೈಲಿನಿಂದ ಬಿಡುಗಡೆಯಾದ ಒಂದು ವಾರದ ಒಳಗೆ ದರ್ಶನ್ ಆರೋಗ್ಯ ವರದಿಯನ್ನು ಕೋರ್ಟ್‌ಗೆ ಸಲ್ಲಿಸುವಂತೆ ಸೂಚನೆ ನೀಡಲಾಗಿತ್ತು. ದರ್ಶನ್ ತೂಗುದೀಪ್ ಆರೋಗ್ಯ ವರದಿಯನ್ನು ಬುಧವಾರ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ. ಆರೋಗ್ಯ ವರದಿಯಯಲ್ಲಿ ವೈದ್ಯರು ಈಗಾಗಲೇ ಮಾಧ್ಯಮಗಳಿಗೆ ತಿಳಿಸಿರುವ ಮಾಹಿತಿಗಳು ಇದೆ. ಇದರೊಂದಿಗೆ ದರ್ಶನ್ ಆಪರೇಷನ್‌ಗೆ ಒಪ್ಪಿಗೆ ಸೂಚಿಸಿಲ್ಲ ಎನ್ನಲಾಗಿರುವ ಅಂಶವೂ ಇದೆ ಎಂದು ವರದಿಯಾಗಿದೆ.
ದರ್ಶನ್‌ಗೆ ಶಸ್ತ್ರಚಿಕಿತ್ಸೆ ಮಾಡುವ ಬಗ್ಗೆ ಇಲ್ಲಿಯವರೆಗೆ ಅಂತಿಮ ತೀರ್ಮಾನ ತೆಗೆದುಕೊಂಡಿಲ್ಲ ಎಂದು ಕೋರ್ಟ್‌ಗೆ ಕೊಟ್ಟಿರುವ ವೈದ್ಯಕೀಯ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ.












Click it and Unblock the Notifications