ಪೇಮೆಂಟ್ ಸೀಟ್ ಬಿ.ವೈ ವಿಜಯೇಂದ್ರ ಯತ್ನಾಳ್ ಮುಂದೆ ತಾಕತ್ ತೋರಿಸಲಿ: ಸಿಎಂ!

ಬಿಜೆಪಿ ರಾಜ್ಯದಲ್ಲಿ ಜನಾಕ್ರೋಶ ಯಾತ್ರೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಸೋಷಿಯಲ್‌ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿರುವ ಅವರು ಬಿಜೆಪಿ ನಾಯಕರ ಬಗ್ಗೆ ವ್ಯಂಗ್ಯವಾಡಿದ್ದಾರೆ. ಬಿಜೆಪಿಯು ರಾಜ್ಯ ಕಾಂಗ್ರೆಸ್‌ ಸರ್ಕಾರ ಆಡಳಿತದಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಹಾಗೂ ಬೆಲೆ ಏರಿಕೆಯ ವಿರುದ್ಧ ಜನಾಕ್ರೋಶಕ್ಕೆ ಮುಂದಾಗಿದೆ. ಇದಕ್ಕೆ ಸಿ.ಎಂ ಸಿದ್ದರಾಮಯ್ಯ ಅವರು ರಿಯಾಕ್ಟ್‌ ಮಾಡಿದ್ದಾರೆ. ಅದೇನು ಎನ್ನುವ ವಿವರ ಇಲ್ಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನಾಕ್ರೋಶ ಯಾತ್ರೆಯ ಬಗ್ಗೆ ರಿಯಾಕ್ಟ್‌ ಮಾಡಿದ್ದಾರೆ. ಜನಾಕ್ರೋಶ ಯಾತ್ರೆ ಕೈಗೊಂಡಿರುವ ರಾಜ್ಯ BJP Karnataka ನಾಯಕರಿಗೆ ನಾನು ಶುಭ ಕೋರುತ್ತೇನೆ. ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆ ಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು ಈ ಯಾತ್ರೆ ನೆರವಾಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

Payment Seat BY Vijayendra Should Show His Strength to Basanagouda Patil Yatnal CM

ಕರ್ನಾಟಕದಲ್ಲಿ ಇಷ್ಟೊಂದು ಅಸಮರ್ಥವಾಗಿ, ನಿರ್ಲಜ್ಜ ಮತ್ತು ಜನವಿರೋಧಿ ವಿರೋಧ ಪಕ್ಷವನ್ನು ಎಂದೂ ಕಂಡಿಲ್ಲ. ಸ್ವಪಕ್ಷೀಯರೇ ಆರೋಪಿಸುವಂತೆ ''ಪೇಮೆಂಟ್ ಸೀಟ್'' ನಲ್ಲಿ ಕೂತಿರುವ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರಿಗೆ ರಾಜ್ಯ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆ ಇದೆಯೇ. ನಮ್ಮನ್ನು ಪ್ರಶ್ನಿಸುವ ಮೊದಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಅವರ ಶಾಸಕ ಮಿತ್ರರು ಕಳೆದೆ ಎರಡು ವರ್ಷಗಳಿಂದ ಮಾಡುತ್ತಿರುವ ಗಂಭೀರ ಸ್ವರೂಪದ ಆರೋಪಗಳಿಗೆ ಉತ್ತರಿಸುವ ಧಮ್ಮು ತಾಕತ್ ತೋರಿಸಲಿ ಎಂದು ಸವಾಲು ಹಾಕಿದ್ದಾರೆ.

ವಿಜಯೇಂದ್ರ ವಿರುದ್ಧ ಸ್ವಪಕ್ಷೀಯರು ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳು ಅವರ ಪಕ್ಷದ ಹೈಕಮಾಂಡಿಗೂ ಮನವರಿಕೆಯಾದಂತಿದೆ. ಪಕ್ಷದೊಳಗಿದ್ದು ಮಾಡುವ ಆರೋಪಗಳಿಂದ ಆಗುವ ಮುಜುಗರದಿಂದ ತಪ್ಪಿಸಿಕೊಳ್ಳಲು Bharatiya Janata Party (BJP) ಹೈಕಮಾಂಡ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗೆ ಹಾಕಿ, ಅವರಿಂದ ಈಗ ಇನ್ನಷ್ಟು ಆರೋಪಗಳನ್ನು ಮಾಡಿಸುತ್ತಿದೆ. ಅಂತಿಮವಾಗಿ ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗೆ ಇಳಿಸುವುದೇ ಬಿಜೆಪಿ ಹೈಕಮಾಂಡ್ ಉದ್ದೇಶವಾಗಿದೆ ಎಂದಿದ್ದಾರೆ.

Payment Seat BY Vijayendra Should Show His Strength to Basanagouda Patil Yatnal CM

ಇದಕ್ಕಾಗಿ ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆಯೇ ಹೊರತು ಬೇರೆ ಯಾವ ಸಾರ್ವಜನಿಕ ಹಿತಾಸಕ್ತಿಯ ಸದುದ್ದೇಶ ಖಂಡಿತ ಈ ಯಾತ್ರೆಗೆ ಇಲ್ಲ. ವಿಜಯೇಂದ್ರ ಅವರು ತಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರದ್ದು ಮಾತ್ರವಲ್ಲ ರಾಜ್ಯದ ಜನತೆಯ ವಿಶ್ವಾಸವನ್ನೂ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಬಜೆಟ್‌ನ 51,000 ಕೋಟಿ ರೂಪಾಯಿ ಹಣ ನೇರವಾಗಿ ಫಲಾನುಭವಿಗಳನ್ನು ತಲುಪುತ್ತಿದೆ. ಅವರೆಲ್ಲರೂ ಸಂತುಷ್ಠರಾಗಿದ್ದಾರೆ. ಈಗ ಅವರು ಬೀದಿಗೆ ಬಂದು ನಮ್ಮ ಪರ ಘೋಷಣೆ ಹಾಕದೆ ಇರಬಹುದು, ಆದರೆ ಅವರೆಲ್ಲರ ಆಶೀರ್ವಾದ ನಮ್ಮ ಸರ್ಕಾರದ ಪರವಾಗಿದೆ. ಮೊದಲ ದಿನದಿಂದಲೂ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಬಂದಿರುವ ಭಾರತೀಯ ಜನತಾ ಪಕ್ಷದ ಬಡವರು ಮತ್ತು ಮಹಿಳಾ ವಿರೋಧಿ ಧೋರಣೆಯನ್ನು ಅರ್ಥಮಾಡಿಕೊಳ್ಳುವಷ್ಟು ಜನ ಪ್ರಜ್ಞಾವಂತರಾಗಿದ್ದಾರೆ ಎಂದಿದ್ದಾರೆ ಸಿ.ಎಂ ಸಿದ್ದರಾಮಯ್ಯ ಅವರು.

Take a Poll

ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ವಿಫಲಗೊಳಿಸುವ ಏಕೈಕ ಉದ್ದೇಶದಿಂದ ರಾಜ್ಯದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಜೊತೆ ಷಾಮೀಲಾಗಿ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ತೆರಿಗೆ ಪಾಲು ಮತ್ತು ಅನುದಾನಕ್ಕೆ ಕತ್ತರಿ ಹಾಕಿಸಿದ್ದಾರೆ. ರಾಜ್ಯದ ಜನ ತಮ್ಮ ಬೆವರಿನ ಗಳಿಕೆಯಿಂದ ನೀಡುತ್ತಿರುವ ಐದು ಲಕ್ಷ ಕೋಟಿ ರೂಪಾಯಿಗಳಷ್ಟು ತೆರಿಗೆ ಹಣದಲ್ಲಿ ಕೇವಲ 60,000 ಕೋಟಿ ರೂಪಾಯಿ ಮಾತ್ರ ವಾಪಸು ನೀಡುತ್ತಿರುವ ಅನ್ಯಾಯದ ಬಗ್ಗೆ ಆಕ್ರೋಶಗೊಂಡಿದ್ದಾರೆ. ಬಿಜೆಪಿ ಪಕ್ಷದ ಯಾತ್ರೆಯ ಸಮಯದಲ್ಲಿ ಈ ಆಕ್ರೋಶದ ಬಿಸಿ ಕೂಡಾ ಬಿಜೆಪಿ ನಾಯಕರಿಗೆ ತಟ್ಟಲಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಜನರ ಹಿತರಕ್ಷಣೆಯ ಕಿಂಚಿತ್ತಾದರೂ ಕಾಳಜಿ ಈ ಬಿಜೆಪಿ ನಾಯಕರಿಗೆ ಇರುವುದಾದರೆ ಮೊದಲು ಇವರು ಪ್ರಧಾನಮಂತ್ರಿ ನಿವಾಸದ ಎದುರು ಹೋಗಿ ಪ್ರತಿಭಟನೆ ನಡೆಸಬೇಕು. ಕರ್ನಾಟಕವನ್ನು ಶತ್ರು ರಾಜ್ಯದಂತೆ ನೋಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ತೆರಿಗೆ ಪಾಲು, ಅನುದಾನ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿರುವುದು ಮಾತ್ರವಲ್ಲ ಈಗ ಕೇಂದ್ರದಲ್ಲಿ ಕರ್ನಾಟಕದ ದನಿಯನ್ನು ಕುಗ್ಗಿಸಬೇಕೆಂಬ ದುಷ್ಟ ಉದ್ದೇಶದಿಂದ ಕ್ಷೇತ್ರ ಮರುವಿಂಗಡಣೆಯನ್ನು ಮಾಡಲು ಹೊರಟಿದೆ. ಇದರ ವಿರುದ್ಧ ದನಿ ಎತ್ತಬೇಕಾಗಿರುವ ರಾಜ್ಯದಿಂದ ಆರಿಸಿಹೋಗಿರುವ ಬಿಜೆಪಿ ಸಂಸದರು ಬಾಯಿಗೆ ಬೀಗ ಹಾಕಿಕೊಂಡು ಕೇಂದ್ರದ ಗುಲಾಮರಂತೆ ವರ್ತಿಸುತ್ತಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ.

ನನಗೆ ವೈಯಕ್ತಿಕವಾಗಿ ಕರ್ನಾಟಕದಲ್ಲಿ ರಚನಾತ್ಮಕವಾಗಿ ಕೆಲಸ ಮಾಡುವ ಸಮರ್ಥ ವಿರೋಧ ಪಕ್ಷ ಇರಬೇಕು ಎಂದು ಬಯಸುವವನು. ಬಿಜೆಪಿಯವರಂತೆ ರಾಜ್ಯ ಬಿಜೆಪಿ ಮುಕ್ತ ಆಗಬೇಕೆಂದು ಬಯಸುವಷ್ಟು ಕೆಟ್ಟ ಮನಸ್ಸು ನನಗಿಲ್ಲ. ನಮ್ಮ ಆಡಳಿತದಲ್ಲಿ ತಿಳಿದೋ, ತಿಳಿಯದೆಯೋ ತಪ್ಪುಗಳಾಗಿದ್ದರೆ ಅದನ್ನು ನಮ್ಮ ಗಮನಕ್ಕೆ ತರುವುದು ವಿರೋಧ ಪಕ್ಷದ ಮುಖ್ಯ ಕರ್ತವ್ಯವಾಗಿದೆ. ಆದರೆ ರಾಜ್ಯದಲ್ಲಿರುವ ವಿರೋಧ ಪಕ್ಷ ತನ್ನ ಒಳಜಗಳ ಮತ್ತು ಅಸಾಮರ್ಥ್ಯದಿಂದ ರಾಜ್ಯದ ಜನತೆ ಎದುರು ನಗೆಪಾಟಲಿಗೀಡಾಗಿದೆ ಎಂದಿದ್ದಾರೆ.

ಏನಿದು ಬಿಜೆಪಿ ಜನಾಕ್ರೋಶ ಯಾತ್ರೆ ?

ರಾಜ್ಯದ ವಿರೋಧ ಪಕ್ಷವಾಗಿರುವ ಬಿಜೆಪಿಯು ಇಂದಿನಿಂದ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದೆ. ccongress ಜನವಿರೋಧಿ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ, ಭ್ರಷ್ಟಾಚಾರ, ಮುಸ್ಲಿಂ ಮೀಸಲಾತಿ ವಿರುದ್ಧ ರಾಜ್ಯದಾದ್ಯಂತ ಜನಾಕ್ರೋಶ ಯಾತ್ರೆಯನ್ನು ಸಂಘಟಿಸಿರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಹೇಳಿದ್ದಾರೆ.

ಜನಾಕ್ರೋಶ ಯಾತ್ರೆಯು ಏಪ್ರಿಲ್‌ 7 ರಿಂದ ಮೈಸೂರಿನಿಂದ ಆರಂಭವಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳೋಣ, ಕಾಂಗ್ರೆಸ್‌ ಸರ್ಕಾರದ ಜನವಿರೋಧಿ ನೀತಿಯನ್ನು ಖಂಡಿಸೋಣ ಎಂದು ಅವರು ಕರೆ ನೀಡಿದ್ದಾರೆ.

ಇನ್ನು ಈ ಯಾತ್ರೆಯನ್ನು ಬಿಜೆಪಿ ಮಾತ್ರ ನಡೆಸುತ್ತಿದೆ. ಇತ್ತೀಚಿನ ದಿನಗಳಲ್ಲಿ ಬಿಜೆಪಿ ನಡೆಸುತ್ತಿರುವ ಯಾತ್ರೆ ಹಾಗೂ ಪ್ರತಿಭಟನಾ ಕಾರ್ಯಕ್ರಮಗಳಲ್ಲಿ ಜೆಡಿಎಸ್‌ ಪಕ್ಷವು ಅಂತರ ಕಾಪಾಡಿಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+