RSS ಕಾರ್ಯಕ್ರಮದಲ್ಲಿ ಭಾಗಿಯಾದ ಪಿಡಿಒ ಅಮಾನತು: ಬಿಜೆಪಿ ನಾಯಕರು ಕೆಂಡಾಮಂಡಲ
ಬೆಂಗಳೂರು, ಅಕ್ಟೋಬರ್ 18: ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಗಣವೇಷಧಾರಿಯಾಗಿ ಭಾಗವಹಿಸಿದ್ದ ಸಿರವಾರ ಪಿಡಿಒ ಪ್ರವೀಣಕುಮಾರ್ ಕೆ.ಪಿ. ಅವರನ್ನು ಅಮಾನತು ಮಾಡಲಾಗಿದೆ. ಸರಕಾರಿ ಸೇವಾ ನಿಯಮ ಉಲ್ಲಂಘನೆ ಎಂದು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಪ್ರವೀಣಕುಮಾರ್‌ಸ್ಥಳೀಯ ಶಾಸಕ ಮಾನಪ್ಪ ವಜ್ಜಲ್ ಅವರ ಆಪ್ತ ಸಹಾಯಕರೂ ಆಗಿದ್ದಾರೆ. ಪಿಡಿಒ ಅಮಾನತು ಕುರಿತು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಅಕ್ಟೋಬರ್ 12ರಂದು ನಡೆದ ಆರ್ ಎಸ್ ಎಸ್ ಶತಮಾನೋತ್ಸವ ಪಥಸಂಚಲನದಲ್ಲಿಗಣವೇಷಧಾರಿಯಾಗಿ ಭಾಗವಹಿಸಿದ್ದ ಸಿರವಾರ ಪಿಡಿಒ ಪ್ರವೀಣ್ ಕುಮಾರ್ ಕೆ.ಪಿ. ಅವರನ್ನು ಸೇವೆಯಿಂದ ಅಮಾನತುಗೊಳಿಸಿ, ಪಂಚಾಯತ್ ರಾಜ್ , ಗ್ರಾಮೀಣಾಭಿವೃದ್ಧಿ ಮತ್ತು ಸಕ್ಷಮ ನೇಮಕಾತಿ ಮತ್ತು ಶಿಸ್ತು ಪ್ರಾಧಿಕಾರಿ ಡಾ.ಅರುಂಧತಿ ಚಂದ್ರಶೇಖರ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ನಡೆಗೆ ವಿಜಯೇಂದ್ರ ಗರಂ
ಸರ್ಕಾರದ ಹಿರಿಯ ಅಧಿಕಾರಿಗಳು ಸಚಿವ ಪ್ರಿಯಾಂಕ್ ಖರ್ಗೆ ಅವರ ಬೆದರಿಕೆಗೆ ಹೆದರಿ ದ್ವೇಷದ ರಾಜಕಾರಣಕ್ಕೆ ಹೆಗಲು ಕೊಡಲು ಆರಂಭಿಸಿದ್ದಾರೆ. ಇದರ ಆರಂಭವೆಂಬಂತೆ ರಾಯಚೂರು ಜಿಲ್ಲೆಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಪಕ್ಷದ ಶಾಸಕರಾದ ಮಾನಪ್ಪ ಡಿ ವಜ್ಜಲ್ ಅವರ ಆಪ್ತ ಸಹಾಯಕ ಪ್ರವೀಣ್ ಕುಮಾರ್ ಕೆ.ಪಿ ಅವರನ್ನು ಆರ್‌ಎಸ್‌ಎಸ್ ಶತಮಾನೋತ್ಸವ ಪಥಸಂಚನದಲ್ಲಿ ಭಾಗವಹಿಸಿದ್ದ ಕಾರಣಕ್ಕಾಗಿ ಅಮಾನತುಗೊಳಿಸುವ ಮೂಲಕ ದೇಶಭಕ್ತಿ ಮನಸ್ಥಿತಿಗಳ ಮೇಲೆ ಸರ್ಕಾರಿ ಯಂತ್ರ ಬಳಸಿಕೊಂಡು ದಾಳಿ ಆರಂಭಿಸಿದ್ದಾರೆ ಎಂದು ಬಿವೈ ವಿಜಯೇಂದ್ರ ಹೇಳಿದರು.
ಇದು ಕಾಂಗ್ರೆಸ್ ಪಕ್ಷದ ವಿಕೃತಿ ಹಾಗೂ ಹಿಂದೂ ವಿರೋಧಿ ಮನಸ್ಥಿತಿಯ ಮತ್ಸರದ ಕ್ರಮವಲ್ಲದೆ ಬೇರೇನೂ ಅಲ್ಲ. ಸರ್ಕಾರಿ ಯಂತ್ರವನ್ನು ದುರುಪಯೋಗ ಪಡಿಸಿಕೊಳ್ಳಲು ಆರಂಭಿಸಿದ್ದೀರಿ, ಅದನ್ನು ಹೇಗೆ ಸರಿದಾರಿಗೆ ತರಬೇಕೆನ್ನುವ ತಂತ್ರ ನಮಗೂ ತಿಳಿದಿದೆ. ತಕ್ಷಣ ಈ ಸೇಡಿನ ಅಮಾನತು ಹಿಂಪಡೆದು ಕ್ಷಮೆ ಯಾಚಿಸಬೇಕು, ಇಲ್ಲದಿದ್ದರೆ ದ್ವೇಷದ ರಾಜಕಾರಣಕ್ಕೆ ಸಂವಿಧಾನಿಕ ಮಾರ್ಗದಲ್ಲಿ ಜನತಂತ್ರ ವ್ಯವಸ್ಥೆಯಲ್ಲಿ ತಕ್ಕ ಉತ್ತರ ನೀಡಬೇಕಾದೀತು.
ದ್ವೇಷದ ರಾಜಕಾರಣ ನಡೆಸಿ ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿ ಪ್ರಜಾತಂತ್ರ ವ್ಯವಸ್ಥೆಯ ಕತ್ತು ಹಿಸುಕಿದ ಕುಖ್ಯಾತಿಯ ಹಿನ್ನಲೆಯ ಕಾಂಗ್ರೆಸ್ ಇದೀಗ ಕರ್ನಾಟಕದಲ್ಲಿ ಅದೇ ಮಾರ್ಗದಲ್ಲಿ ಮುಂದುವರೆದಿದೆ. ದ್ವೇಷ ಬಿತ್ತುವ ರಾಜಕಾರಣ ಹಾಗೂ ಸರ್ವಾಧಿಕಾರಿ ಧೋರಣೆಯಿಂದ ಅಟ್ಟಹಾಸ ಮೆರೆದರೆ ಈ ದೇಶದ ಜನ ಅವರನ್ನು ನಾಮಾವಶೇಷಗೊಳಿಸುತ್ತಾರೆ ಎಂಬುದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆಗಳಿವೆ.
PDO ಅಮಾನತು ರದ್ದು ಮಾಡಿ: ಎನ್.ರವಿಕುಮಾರ್ ಆಗ್ರಹ
ರಾಜ್ಯ ಸರ್ಕಾರವು ಪಂಚಾಯತ್ ಅಭಿವೃದ್ಧಿ ಅಧಿಕಾರಿಯ (ಪಿಡಿಒ) ವಿರುದ್ಧ ಅಮಾನತಿನ ಕ್ರಮ ತೆಗೆದುಕೊಂಡಿರುವುದನ್ನು ಕೂಡಲೇ ವಾಪಸ್ ತೆಗೆದುಕೊಳ್ಳಬೇಕು ಎಂದು ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ, ನಾವು ಈ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವದ ನೀತಿ ನಿಯಮಗಳನ್ನು ಹತ್ತಿಕ್ಕಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಲಿಂಗಸುಗೂರಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಯು ಆರ್.ಎಸ್.ಎಸ್.ನ ಗಣವೇಷ ಧರಿಸಿ ಪಥಸಂಚಲನದಲ್ಲಿ ಭಾಗವಹಿಸಿರುವ ಕಾರಣ ಅವರನ್ನು ಅಮಾನತು ಮಾಡಿದ್ದಾರೆ ಎಂದು ತಿಳಿಸಿದರು. ಸರ್ಕಾರಿ ಅಧಿಕಾರಿ ಆರ್.ಎಸ್.ಎಸ್.ನ ಚಟುವಟಿಕೆಯಲ್ಲಿ ಭಾಗವಹಿಸಬಾರದು ಎಂದು ಯಾವ ಕಾನೂನು ಇದೆ ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ಆರ್.ಎಸ್.ಎಸ್.ನ ಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದು ಹೇಳಿದೆ. ಆರ್.ಎಸ್.ಎಸ್. ಭೂಗತ ಸಂಸ್ಥೆಯೇ?; ಅದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿರುದ್ಧವಾಗಿ ಚಟುವಟಿಕೆಗಳನ್ನು ನಡೆಸುತ್ತಿದೆಯೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರ 60% ಕಮಿಷನ್ ಕೇಳುತ್ತಿದೆ ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ಅವರು ಹೇಳಿಕೆ ನೀಡಿದ್ದಾರೆ. ಬಿಜೆಪಿಯನ್ನು 40% ಸರ್ಕಾರ ಎಂದಿದ್ದು, ಅದನ್ನು ಸಾಬೀತುಪಡಿಸುವುದಕ್ಕೆ ಆಗಲಿಲ್ಲ. ಇಂದು ಮಂಜುನಾಥ್ ಅವರೇ 60% ಸರ್ಕಾರ ಎಂದು ಹೇಳುತ್ತಿದ್ದು, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳೇ ನಿಮ್ಮದು 60% ಕಮಿಷನ್ ಸರ್ಕಾರ ಅಲ್ಲವೇ ಎಂದು ಎನ್.ರವಿಕುಮಾರ್ ಕೇಳಿದರು.
-
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
12 ಕೋಟಿ ರೂ ಡ್ರಗ್ಸ್ ಜಪ್ತಿ: ಗಂಧದ ನಾಡು 'ಗಾಂಜಾ ಬೀಡು' ಮಾಡಿದ ಕಾಂಗ್ರೆಸ್ ಸರ್ಕಾರ; R ಅಶೋಕ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ











Click it and Unblock the Notifications