ಅಮೆರಿಕಾ ವಿದ್ಯಾರ್ಥಿಗಳು ಧರ್ಮಸ್ಥಳಕ್ಕೆ ಬಂದಿದ್ದು ಯಾಕೆ?
ಬೆಳ್ತಂಗಡಿ,ಜನವರಿ,07: ಅಮೆರಿಕ ಪೆನ್ಸಿಲ್ವೇನಿಯ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಫೆಮಿಡಾ ಹ್ಯಾಂಡಿ ಹಾಗೂ 12 ವಿದ್ಯಾರ್ಥಿಗಳನ್ನೊಳಗೊಂಡ ತಂಡವು ಧರ್ಮಸ್ಥಳಕ್ಕೆ ಭೇಟಿ ನೀಡಿ 2 ದಿನಗಳ ಕಾಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಕುರಿತು ವಿಶೇಷ ಅಧ್ಯಯನ ನಡೆಸಿತು.
ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ ಕುರಿತಂತೆ ಅಧ್ಯಯನ ನಡೆಸಲು ಜನವರಿ 3ರ ಭಾನುವಾರ ಆಗಮಿಸಿದ್ದ ಅಮೆರಿಕ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯ ತಂಡವು ಗ್ರಾಮೀಣಾಭಿವೃದ್ಧಿ ಯೋಜನೆ ಅಧ್ಯಕ್ಷ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಗ್ರಾಮೀಣಾಭಿವೃದ್ಧಿ, ಮಹಿಳಾ ಸಬಲೀಕರಣ ಹಾಗೂ ಬದಲಿ ಇಂಧನ ಕ್ಷೇತ್ರದಲ್ಲಿ ತಮಗೆ ಆದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.[ಧರ್ಮಸ್ಥಳ ದೇವಾಲಯ ವಶ ಪಡಿಸಿಕೊಳ್ಳಲು ಹೊರಟಿತ್ತೇ ಸರಕಾರ?]

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಕೇಂದ್ರ ಕಚೇರಿ ಹಾಗೂ ಉತ್ಪಾದನಾ ಘಟಕ ಹಾಗೂ ಮಾರಾಟ ಮಳಿಗೆಗೆ ವಿದ್ಯಾರ್ಥಿ ತಂಡ ಭೇಟಿ ನೀಡಿತ್ತು. ಆಗ ತಂಡಕ್ಕೆ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕಿ ಮಮತಾ ಹರೀಶ್ ರಾವ್ ಸಂಸ್ಥೆಯ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.[ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಸಮಯ ಬದಲಾವಣೆ]
ಉಡುಪಿ ಜಿಲ್ಲೆಯಲ್ಲಿ ಯೋಜನೆ ಪ್ರಾಯೋಜಿತ ಪ್ರಗತಿ ಬಂಧು, ಸ್ವಸಹಾಯ, ಜ್ಞಾನವಿಕಾಸ ಕೇಂದ್ರ, ಒಕ್ಕೂಟ ಸಭೆಗೆ ತಂಡವು ಭೇಟಿ ನೀಡಿ ಅಧ್ಯಯನ ಕೈಗೊಂಡಿತು. ಸಿರಿ ನಿರ್ದೇಶಕಿ ಮನೋರಮಾ ಭಟ್, ಉಪನ್ಯಾಸಕ ವಸಂತ ನಾಯಕ್ ಉಪಸ್ಥಿತರಿದ್ದರು. ನಿಟ್ಟೆ ಹಾಗೂ ಪೆನ್ಸಿಲ್ವೇನಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ವಿನಿಮಯ ಯೋಜನೆಯಡಿ ಭಾರತಕ್ಕೆ ಆಗಮಿಸಿದ ಈ ತಂಡವು 11 ದಿನಗಳ ಕಾಲ ನಿಟ್ಟೆಯ ಪ್ರೊಫೆಸರ್ ವಿನೋದ್ ದೀಕ್ಷಿತ್ ನೇತೃತ್ವದಲ್ಲಿ ಅಧ್ಯಯನ ನಡೆಸಲಿದೆ.












Click it and Unblock the Notifications