Government Employees: ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಪಿಂಚಣಿ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು, ಜನವರಿ 30: ಕರ್ನಾಟಕ ಸರ್ಕಾರದಿಂದ ನಿವೃತ್ತ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ 7ನೇ ವೇತನ ಆಯೋಗದ ಅನುಸಾರದಂತೆ ಪಿಂಚಣಿ ಮಂಜೂರಾತಿಗೆ ಆದೇಶಿಸಿದೆ ಎಂದು ತಿಳಿದು ಬಂದಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಪಿಂಚಣಿಯನ್ನು ದಿನಾಂಕ: 01.08.2024ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಲು ಸರ್ಕಾರದಲ್ಲಿ ನೀತಿ-ನಿರ್ಧಾರವನ್ನು ಕೈಗೊಳ್ಳಲಾಗಿರುತ್ತದೆ ಎಂದಿದ್ದಾರೆ.

ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ ಕೈಗೊಳ್ಳಲಾದ ನೀತಿ ನಿರ್ಣಯವನ್ನು ಅನುಷ್ಠಾನಗೊಳಿಸಿ ಹೊರಡಿಸಿರುವ ದಿನಾಂಕ: 23.08.2024ರ ಸರ್ಕಾರಿ ಆದೇಶ ಸಂ: ಆಇ 21 ಎಸ್‌ಆರ್ 2024 ಮತ್ತು ದಿನಾಂಕ: 28.08.2024ರ ಸರ್ಕಾರಿ ಆದೇಶ ಸಂ, ಆ-ಪಿಇಎನ್/262/2024ರ ಆದೇಶಗಳು ವಿಸ್ತತವಾಗಿದ್ದು ಸ್ವಯಂ-ವೇದ್ಯವಾಗಿರುತ್ತವೆ. ಸದರಿ ನಿಯಮಗಳ ಅವಕಾಶಗಳನ್ವಯ ನೌಕರರ ಪಿಂಚಣಿಯನ್ನು ಪರಿಷ್ಕರಿಸಿ ಮಂಜೂರು ಮಾಡುವ ಬಗ್ಗೆ ಸಕ್ಷಮ ಪ್ರಾಧಿಕಾರಿಗಳು ಸೂಕ್ತ ನಿರ್ಣಯ ಕೈಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ ಎಂದು ತಿಳಿಸಲು ನಿರ್ದೇಶಿಸಿದ್ದಾರೆ.
ವಿಜ್ಞಾನ ತಂತ್ರಜ್ಞಾನ ಇಲಾಖೆಯ ಪ್ರಗತಿ ಪರೀಶಿಲನಾ ಸಭೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ನಡೆದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಪ್ರಗತಿ ಪರೀಶಿಲನಾ ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಪ್ರಸ್ತುತ ವರ್ಷ ರಾಜ್ಯದಲ್ಲಿ ಒಟ್ಟು 9 ತಾರಾಲಯಗಳ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದ್ದು, 5 ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಒಂದು ತಿಂಗಳ ಕಾಲ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಉತ್ಸವ ಆಯೋಜನೆ. ಡಾ.ಹೆಚ್.ನರಸಿಂಹಯ್ಯ ಅಂತಾರಾಷ್ಟ್ರೀಯ ವಿಜ್ಞಾನ ಕೇಂದ್ರದ ಸ್ಥಾಪನೆಗೆ ಈಗಾಗಲೇ 132 ಎಕರೆ ಜಾಗ ಹಂಚಿಕೆಯಾಗಿದ್ದು, ಸದರಿ ಜಾಗವನ್ನು ಆದಷ್ಟು ಬೇಗನೆ ಇಲಾಖೆಯ ಸುಪರ್ದಿಗೆ ಪಡೆಯಲು ಕ್ರಮ ಕೈಗೊಳ್ಳಬೇಕು. ಬೆಂಗಳೂರು ನಗರದಲ್ಲಿ ವಿಜ್ಞಾನ ನಗರ ಸ್ಥಾಪನೆಗೆ ಹಂಚಿಕೆ ಮಾಡಲಾದ 25ಎಕರೆ ಭೂಮಿಯನ್ನು ಇಲಾಖೆಗೆ ಪಡೆಯಲು ಕ್ರಮ ಕೈಗೊಳ್ಳಬೇಕು
ರಾಮನಗರದಲ್ಲಿ ವಿಜ್ಞಾನ ಕೇಂದ್ರ ಸ್ಥಾಪನೆಗೆ ಅಗತ್ಯವಿರುವ ಜಮೀನು ಪಡೆಯಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಆಕಾಶ ಕಾಯಗಳ ಬಗ್ಗೆ ಆಸಕ್ತಿ ಮೂಡಿಸಲು 833 ವಸತಿ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದೂರದರ್ಶಕ ಒದಗಿಸಲಾಗುವುದು. ಬೆಂಗಳೂರಿನಲ್ಲಿ ಕ್ವಾಂಟಮ್ ಸಮ್ಮೇಳನ ಆಯೋಜಿಸಲು ಕ್ರಮ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.












Click it and Unblock the Notifications