Get Updates
Get notified of breaking news, exclusive insights, and must-see stories!

Pension: ವೃದ್ಧಾಪ್ಯ ವೇತನ - ಸಂಧ್ಯಾ ಸುರಕ್ಷಾ ಯೋಜನೆ ಪಿಂಚಣಿ: ಸರ್ಕಾರದಿಂದ ಮಹತ್ವದ ಕ್ರಮ!

ಕರ್ನಾಟಕ ಸರ್ಕಾರವು ವೃದ್ಧಾಪ್ಯ ವೇತನ - ಸಂಧ್ಯಾ ಸುರಕ್ಷಾ ಯೋಜನೆ ಪಿಂಚಣಿ ವಿಚಾರದಲ್ಲಿ ಮಹತ್ವದ ಬದಲಾವಣೆಯನ್ನು ಮಾಡುವುದಕ್ಕೆ ಮುಂದಾಗಿದೆ. ಹೌದು ರೇಷನ್ ಕಾರ್ಡ್‌ನ ನಂತರ ರಾಜ್ಯ ಸರ್ಕಾರವು ಇದೀಗ ಪಿಂಚಣಿ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತರುವುದಕ್ಕೆ ಮುಂದಾಗಿದೆ. ಕರ್ನಾಟಕ ಸರ್ಕಾರವು ಹಿರಿಯರ ಪಿಂಚಣಿ ವ್ಯವಸ್ಥೆಯಲ್ಲಿ ಹೊಸ ಬದಲಾವಣೆ ತರುವುದಕ್ಕೆ ಮುಂದಾಗಿದೆ. ಈ ಸಂಬಂಧ ರಾಜ್ಯ ಸರ್ಕಾರವು ವಿಶೇಷ ಸುತ್ತೋಲೆಯೊಂದನ್ನು ಹೊರಡಿಸಿದೆ. ಅದೇನು ಎನ್ನುವ ವಿವರ ಮುಂದಿದೆ.

ಸಾಮಾಜಿಕ ಭದ್ರತಾ ಯೋಜನೆಗಳ ಪೈಕಿ ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳ ಪೈಕಿ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಬಗ್ಗೆ ವಿಶೇಷ ಆದೇಶವನ್ನು ರಾಜ್ಯ ಸರ್ಕಾರವು ಹೊರಡಿಸಿದ್ದು ಇದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಸಾಮಾಜಿಕ ಭದ್ರತೆಯ ವಿವಿಧ ಮಾಸಿಕ ಪಿಂಚಣಿ ಯೋಜನೆಗಳ ಪೈಕಿ ವೃದ್ಧಾಪ್ಯ ವೇತನ ಯೋಜನೆಯಡಿ 21.87 ಲಕ್ಷ ಮತ್ತು ಸಂಧ್ಯಾ ಸುರಕ್ಷಾ ಯೋಜನೆಯಡಿ 31.33 ಲಕ್ಷ ಫಲಾನುಭವಿಗಳಿದ್ದಾರೆ. ಈ ಫಲಾನುಭವಿಗಳ ವಿವರಗಳನ್ನು ಕುಟುಂಬ ದತ್ತಾಂಶದ ಮಾಹಿತಿಯೊಂದಿಗೆ Under Age, Income limit, APL, IT Payee ಮತ್ತು HRMS ವಿವರಗಳನ್ನು ಒಟ್ಟು ಮಾಡಲಾಗಿ ವೃದ್ಧಾಪ್ಯ ವೇತನ ಯೋಜನೆಯಡಿ ಅಂದಾಜು 9.04 ಲಕ್ಷ ಮತ್ತು ಸಂಧ್ಯಾ ಸುರಕ್ಷಾ ಯೋಜನೆಯಡಿ ಅಂದಾಜು 14.15 ಲಕ್ಷ ಅನರ್ಹ ಫಲಾನುಭವಿಗಳನ್ನು ಗುರುತಿಸಲಾಗಿದೆ ಎಂದು ಸರ್ಕಾರವು ಹೇಳಿದೆ.

Pension Old Age Pension - Sandhya Suraksha Yojana Pension Important step by Karnataka govnt

ಮುಂದುವರಿದು ಈ ಫಲಾನುಭವಿಗಳ ಗ್ರಾಮವಾರು, ತಾಲ್ಲೂಕುವಾರು ಮತ್ತು ಜಿಲ್ಲಾವಾರು ವಿವರಗಳನ್ನು ಉಲ್ಲೇಖದನ್ವಯ ಎಲ್ಲಾ ತಾಲ್ಲೂಕು ತಹಶೀಲ್ದಾರರಿಗೆ ಒದಗಿಸಲಾಗಿದೆ. ಸದರಿ ಫಲಾನುಭವಿಗಳ ವಿವರಗಳನ್ನು Under Age, Income limit, APL, IT Payee ಮತ್ತು HRMS ಮಾನದಂಡಗಳನ್ವಯ ಭೌತಿಕವಾಗಿ ಪರಿಶೀಲಿಸಿ ಅನರ್ಹ ಫಲಾನುಭವಿಗಳ ಪಿಂಚಣಿಯನ್ನು ರದ್ದುಪಡಿಸಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಂಡು, ಅನರ್ಹ ಫಲಾನುಭವಿಗಳ ವಿವರಗಳನ್ನು ದಿನಾಂಕ: 11-06-2025 ರ ಒಳಗಾಗಿ ಈ ಕಚೇರಿಗೆ ಮಾಹಿತಿಯನ್ನು ಒದಗಿಸುವಂತೆ ಸಂಬಂಧಪಟ್ಟ ಎಲ್ಲಾ ತಹಶೀಲ್ದಾರ್ ಮತ್ತು ಅಧೀನ ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನ

ನೀಡುವಂತೆ ಕೋರಿದೆ ಎಂದು ಆದೇಶ ಮಾಡಲಾಗಿದೆ. ಈ ಮೂಲಕ ಅನರ್ಹ ಪಿಂಚಣಿದಾರರನ್ನು ಗುರುತಿಸಿ ಅವರ ಪಿಂಚಣಿ ಸೌಲಭ್ಯವನ್ನು ಕಡಿತಗೊಳಿಸಲಾಗುವುದು ಎಂದು ಹೇಳಲಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಸಾಮಾಜಿಕ ಭದ್ರತೆ ಹಾಗೂ ಪಿಂಚಣಿಗಳು ಮತ್ತು ಕಂದಾಯ ಇಲಾಖೆಯಿಂದ ಈ ಆದೇಶವನ್ನು ಹೊರಡಿಸಲಾಗಿದೆ.

ಇದಕ್ಕೆ ಶಾಸಕ ಹಾಗೂ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ವಿ ಸುನಿಲ್ ಕುಮಾರ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಬಡವರ ಬಗ್ಗೆ ಕಾಳಜಿ,ಸಹಾನೂಭೂತಿ ಇರಲಿ ಎಂದು ಜಿಲ್ಲಾಧಿಕಾರಿಗ ಸಭೆಯಲ್ಲಿ "ಪ್ರವಚನ" ನೀಡಿದ್ದ ಮುಖ್ಯಮಂತ್ರಿ

ಸಿದ್ದರಾಮಯ್ಯ ಅವರು ಈಗ ಬಡವರ ಮೇಲೆ "ಪ್ರಹಾರ" ಮಾಡಲು ಹೊರಟಿದ್ದಾರೆ.ವಿವಿಧ ಸಾಮಾಜಿಕ ಭದ್ರತಾ ಯೋಜನೆಯ ಅಡಿ ವೃದ್ಧರು, ಅಸಹಾಯಕರು, ದುರ್ಬಲರಿಗೆ ನೀಡುತ್ತಿದ್ದ ಪಿಂಚಣಿ ಹಣದ ಮೇಲೆ ಈಗ 60 ಪರ್ಸೆಂಟ್ ಸರ್ಕಾರದ ಕಣ್ಣು ಬಿದ್ದಿದೆ.

21.87 ಲಕ್ಷ ವೃದ್ಧಾಪ್ಯ ಹಾಗೂ 31.33 ಲಕ್ಷ ಸಂಧ್ಯಾ ಸುರಕ್ಷಾ ಯೋಜನೆಯ ಫಲಾನುಭವಿಗಳಲ್ಲಿ ಅನರ್ಹರನ್ನು ಹುಡುಕುವುದಕ್ಕೆ ಈ ಸರ್ಕಾರ ಮುಂದಾಗಿದ್ದು, 9.04 ಲಕ್ಷ ವೃದ್ಧಾಪ್ಯ ವೇತನದಾರರು 14.15 ಲಕ್ಷ ಸಂಧ್ಯಾ ಸುರಕ್ಷಾ ಕಾರ್ಡ್ ಗಳನ್ನು ರದ್ದು ಮಾಡುವುದಕ್ಕೆ ಕಂದಾಯ ಇಲಾಖೆಯಿಂದ ಅಧಿಕೃತ ಆದೇಶ ನೀಡಲಾಗಿದೆ.

ತಮ್ಮದು ಆಲಿಸುವ ಸರ್ಕಾರ ಎಂದು ಜಾಹೀರಾತಿನಲ್ಲಿ ಫೋಸು ಕೊಡುವ ಕಾಂಗ್ರೆಸ್ ಸರ್ಕಾರ ಬಡವರ ಪಿಂಚಣಿ ಹಣದಲ್ಲಿ ಉಳಿತಾಯ ಮಾಡಲು ಹೊರಟಿದೆ.‌ ಸರ್ಕಾರ ದಿವಾಳಿ ಅಂಚಿಗೆ ತಲುಪಿದೆ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+