ನಿರೀಕ್ಷೆಗೂ ಮೀರಿ ಗುಜರಾತ್ ಜನತೆ ಬಿಜೆಪಿಗೆ ಮತ ನೀಡಿದ್ದಾರೆ: ಸಚಿವ ಕೆ.ಗೋಪಾಲಯ್ಯ

ಬೆಂಗಳೂರು, ಡಿಸೆಂಬರ್ 8: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಗುಜರಾತಿನ ಜನತೆ ಭಾರತೀಯ ಜನತಾ ಪಾರ್ಟಿಯನ್ನು ಒಪ್ಪಿಕೊಂಡಿದ್ದಾರೆ. ಹೀಗಾಗಿ ನಿರೀಕ್ಷೆಗೂ ಮೀರಿ ಗುಜರಾತ್ ಜನತೆ ಭಾರತೀಯ ಜನತಾ ಪಕ್ಷಕ್ಕೆ ಮತ ನೀಡಿದ್ದಾರೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದರು.

ಈ ಕುರಿತು ವಿಧಾನಸೌಧದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಧಿಸಿದೆ, ಹಿಮಾಚಲ ಪ್ರದೇಶದಲ್ಲಿಯೂ ಸಹ ನಾವೇ ಅಧಿಕಾರವನ್ನು ನಡೆಸುತ್ತಿದ್ದೇವೆ. ಎರಡು ರಾಜ್ಯದಲ್ಲಿಯೂ ಸಹ ನಮ್ಮ ಪಕ್ಷ ಬರುತ್ತದೆ ಎಂದು ಹೇಳಿದ್ದೇವು, ಇಂದು ಜನರು ತೀರ್ಪನ್ನು ಕೊಟ್ಟಿದಾರೆ ಇದನ್ನು ವಿರೋಧ ಪಕ್ಷಗಳು ಒಪ್ಪಿಕೊಳ್ಳಬೇಕು ಎಂದು ಹೇಳಿದರು.

Recommended Video

      ಗುಜರಾತ್ ನಲ್ಲಿ ಬಿಜೆಪಿಯು ಈ ಬಾರಿಯು ಬಹುಮತ ಪಡೆದರೆ ಸಿಪಿಎಂ ಸಾಧನೆಯನ್ನು ಸರಿಗಟ್ಟಿದಂತೆ ಆಗುತ್ತದೆ
      People of Gujarat have voted for Bharatiya Janata Party beyond expectations says K. Gopalaiah

      ಕರ್ನಾಟಕದಲ್ಲಿ ಮುಂದಿನ 2023ರ ಚುನಾವಣೆಯಲ್ಲಿಯೂ ಸಹ ಭಾರತೀಯ ಜನತಾ ಪಾರ್ಟಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹಾಗೂ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿರವರ ನಾಯಕತ್ವದಲ್ಲಿ ಗೆದ್ದು ಅಧಿಕಾರಕ್ಕೆ ಬರುತ್ತೇವೆ ಎಂದರು.

      People of Gujarat have voted for Bharatiya Janata Party beyond expectations says K. Gopalaiah

      ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಗೆಲುವಿಗೆ ಕಾರಣರಾದ ಮತದಾರರಿಗೆ ಧನ್ಯವಾದಗಳು ತಿಳಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಜೀ ಅವರ ನಾಯಕತ್ವವನ್ನು ಗುಜರಾತ್ ಜನತೆ ಒಪ್ಪಿಕೊಂಡಿದ್ದಾರೆ ಹಾಗಾಗಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+