Lok Sabha Election: ಬೆಸಿಗೆಯ ಧಗೆಗೆ ಜನ ಕಂಗಾಲು: ಉತ್ತರ ಕರ್ನಾಟಕದಲ್ಲಿ ಬೆಳಗ್ಗೆ ಮತದಾನ ಚುರುಕು
ಕರ್ನಾಟಕದಲ್ಲಿ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯುತ್ತಿದೆ. ಈಗಾಗಲೇ ಏಪ್ರಿಲ್ 26 ರಂದು ಮೊದಲ ಹಂತದ ಮತದಾನ ನಡೆದಿದ್ದು, ಎರಡನೇ ಹಂತದ ಮತದಾನ ಉತ್ತರ ಕರ್ನಾಟಕ ಭಾಗದಲ್ಲಿ ಆರಂಭವಾಗಿದೆ. ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಭವಿಷ್ಯವನ್ನು ಇಂದು ಮತದಾರ ನಿರ್ಧರಿಸಲಿದ್ದಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ಬಿಸಿಲು ಧಗೆ ಏರುವು ಮುನ್ನವೇ ಮತದಾನ ಪ್ರಕ್ರಿಯೆ ಮುಗಿಸಿಕೊಳ್ಳಲು ಜನ ಮುಂದಾಗಿದ್ದಾರೆ. ಹೀಗಾಗಿ ಬೆಳಗ್ಗೆ ಮತದಾನ ಕೇಂದ್ರದಲ್ಲಿ ಜನ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸುವುದು ಸಾಮಾನ್ಯವಾಗಿತ್ತು. ಈ ಭಾಗದಲ್ಲಿ ಬಿಸಿಲು ವ್ಯಾಪಕವಾಗಿದ್ದು, ಸೂರ್ಯ ತನ್ನ ಕೆಲಸ ಆರಂಭಿಸುವ ಮುನ್ನವೇ ಮನೆ ಸೇರ ಬೇಕು ಎಂಬ ಲೆಕ್ಕಾಚಾರವನ್ನು ಮತದಾರ ಹಾಕಿಕೊಂಡಿದ್ದಾರೆ.

ಎಲ್ಲಿ ಎಲ್ಲಿ ಮತದಾನ
ಧಾರವಾಡ, ಬಾಗಲೋಕಟೆ, ಬೀದರ್, ಶಿವಮೊಗ್ಗ, ಬೆಳಗಾವಿ, ಚಿಕ್ಕೋಡಿ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ಕಲ್ಬುರ್ಗಿ, ಬಳ್ಳಾರಿ, ಯಾದಗಿರಿ, ಗದಗ-ಹಾವೇರಿ, ಶಿವಮೊಗ್ಗದಲ್ಲಿ ಇಂದು ಮತದಾನ ನಡೆಯುತ್ತಿದೆ. ಮೂರನೇ ಹಂತದ ಚುನಾವಣೆಯಲ್ಲಿ ಸ್ಟಾರ್ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮತದಾನ ಸುಗಮವಾಗಿ ನಡೆಯಲು ಜಿಲ್ಲಾಡಳಿತ ಹಾಗೂ ಸ್ಥಳೀಯ ಸಂಸ್ಥೆಗಳು ಕ್ರಮ ಕೈಗೊಂಡಿವೆ.
ಧಾರವಾಡ ಲೋಕಸಭಾ ಕ್ಷೇತ್ರದಿಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ. ಇವರಿಗೆ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಅಸೋಟಿ ಸವಾಲು ಎಸೆದಿದ್ದಾರೆ. 2004ರಿಂದ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತಿದ್ದು, ಮತ್ತೊಂದು ಗೆಲುವಿನ ಲೆಕ್ಕಚಾರವನ್ನು ಜೋಶಿ ಹಾಕಿಕೊಂಡಿದ್ದಾರೆ.
ಪ್ರಮುಖ ಅಭ್ಯರ್ಥಿಗಳಾರು?
ಬೆಳಗಾವಿಯಲ್ಲಿ ಜಿದ್ದಾಜಿದ್ದಿನ ಫೈಟ್ ಕಂಡು ಬರುತ್ತಿದೆ. ಬಿಜೆಪಿಯಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಣದಲ್ಲಿದ್ದು, ಇವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಗ ಮೃಣಾಲ್ ಮೊದಲ ಬಾರಿಗೆ ಅದೃಷ್ಟ ಪರೀಕ್ಷೆ ನಡೆಸಲಿದ್ದಾರೆ. ಚಿಕ್ಕೋಡಿಯಲ್ಲಿ ಹಾಲಿ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳ್ಳಿ ಮಗಳು ಪ್ರಿಯಾಂಕಾ ಚೊಚ್ಚಲ ಬಾರಿಗೆ ಲೋಕಸಭೇ ಪ್ರವೇಶಿಸುವ ಕನಸು ಹೊಂದಿದ್ದಾರೆ.

ಶಿವಮೊಗ್ಗ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಬಿಜೆಪಿಯಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಗ ಬಿವೈ ರಾಘವೇಂದ್ರ ಅವರು ಕಣದಲ್ಲಿದ್ದು, ಮಾಜಿ ಸಚಿವ ಈಶ್ವರಪ್ಪ ಪಕ್ಷೇತರವಾಗಿ ಸ್ಪರ್ಧಿಸುತ್ತಿದ್ದಾರೆ. ಇನ್ನು ಕಾಂಗ್ರೆಸ್ ನಿಂದ ಗಿತಾ ಶಿವರಾಜ್ ಕುಮಾರ್ ಕಣದಲ್ಲಿದ್ದಾರೆ.












Click it and Unblock the Notifications