ಕೊರೊನಾ ಲಸಿಕೆ ಪ್ರಮಾಣಪತ್ರವಿದ್ದರೆ ಮಾತ್ರ ಈ ರಾಜ್ಯದವರಿಗೆ ಕರ್ನಾಟಕಕ್ಕೆ ಪ್ರವೇಶ

ಬೆಂಗಳೂರು, ಜುಲೈ 2:ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವವರಿಗೆ ಕರ್ನಾಟಕ ಸರ್ಕಾರ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಹೇರಿದೆ. ಕೊರೊನಾ ಲಸಿಕೆಯ ಕನಿಷ್ಠ ಒಂದು ಡೋಸ್ ಪಡೆದರೆ ಸಾಕು ಕೇರಳ, ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಪ್ರಯಾಣಿಸಬಹುದಾಗಿದೆ.

ಕೊರೊನಾ ಲಸಿಕೆ ಪಡೆದಿರುವ ಸರ್ಟಿಫಿಕೇಟ್ ಹೊಂದಿದರೆ ಕೇರಳ ಹಾಗೂ ಮಹಾರಾಷ್ಟ್ರದಿಂದ ಪ್ರಯಾಣಿಕರು ಕರ್ನಾಟಕಕ್ಕೆ ಆಗಮಿಸಬಹುದು ಎಂದು ಸರ್ಕಾರ ಹೇಳಿದೆ.

ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವವರು 72 ಗಂಟೆಗಳ ಮುಂಚೆ ಪಡೆದ ಆರ್‌ಟಿಪಿಸಿಆರ್ ನೆಗೆಟಿವ್ ವರದಿ ಅಥವಾ ಕೊರೊನಾ ಲಸಿಕೆಯ ಎರಡೂ ಡೋಸ್ ಪಡೆದ ಪ್ರಮಾಣಪತ್ರವನ್ನು ತೋರಿಸಬೇಕು.

People Who Received At Least One Dose Of Covid Vaccine Fine To Enter Karnataka From Maharashtra And Kerala

ಲಸಿಕೆಯ ಎರಡು ಡೋಸ್ ಪಡೆದವರು ಪ್ರಮಾಣಪತ್ರವನ್ನು ಹೊಂದಿದ್ದರೆ ಸಾಕು ಅವರು ಆರ್‌ಟಿಪಿಸಿಆರ್ ವರದಿ ನೀಡಬೇಕೆಂದೇನಿಲ್ಲ. ಮಹಾರಾಷ್ಟ್ರ ಗಡಿ, ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರದಲ್ಲಿ ಕಟ್ಟುನಿಟ್ಟಿನ ಕ್ರಮವಹಿಸಲಾಗಿದೆ. ವಿದ್ಯಾರ್ಥಿಗಳು ರಾಜ್ಯರಾಜ್ಯಗಳ ನಡುವೆ ಪದೇ ಪದೇ ಪ್ರಯಾಣ ಮಾಡುತ್ತಿದ್ದರೆ ಎರಡು ವಾರಕ್ಕೊಮ್ಮೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಲೇಬೇಕು.

ಆರೋಗ್ಯ ಕಾರ್ಯಕರ್ತರು, ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು, ಯಾರದ್ದೋ ಸಾವಿನ ಸಂದರ್ಭ/ವೈದ್ಯಕೀಯ ಎಮರ್ಜೆನ್ಸಿ ಸಮಯದಲ್ಲಿ ಅನುವು ಮಾಡಿಕೊಡಲಾಗುತ್ತದೆ.

ರಾಜ್ಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಜುಲೈ 7ರೊಳಗೆ ಲಸಿಕೆ ನೀಡಿಕೆಯನ್ನು ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ಉಪಮುಖ್ಯಮಂತ್ರಿ ಡಾ. ಸಿಎನ್ ಅಶ್ವತ್ಥ ನಾರಾಯಣ ಎಲ್ಲಾ ವಿಶ್ವ ವಿದ್ಯಾಲಯಗಳ ಕುಲಪತಿಗಳಿಗೆ ಸೂಚನೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+