ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್;10 ಸಾವಿರ ಶಿಕ್ಷಕರ ನೇಮಕಾತಿ: ಮಹತ್ವ ಮಾಹಿತಿ ಇಲ್ಲಿದೆ
ಬೆಂಗಳೂರು, ಜುಲೈ 16: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 10,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಅನುಮತಿ ಕೋರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸೋಮವಾರ ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಯತೀಂದ್ರ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 7500 ಶಿಕ್ಷಕರು, ಪ್ರೌಢಶಾಲೆಯ 2500 ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಆರ್ಥಿಕ ಇಲಾಖೆ ಅನುಮತಿ ನೀಡಿದ ಕೂಡಲೇ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ ಅವರು ಹೇಳಿದ್ದಾರೆ.ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿಷಯ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ 8954 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಅಲ್ಲದೇ ಬಿಜೆಪಿಯ ತಳವಾರ್ ಸಾಬಣ್ಣ ಅವರ ಸದನದದಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷರ ಕೊರತೆ ಇದೆ. ಶಿಕ್ಷಕರು ಇಲ್ಲದೆ ಪ್ರತಿ ಬಾರಿ ರಿಸಲ್ಟ್ ನಲ್ಲಿ ಕಲ್ಯಾಣ ಕರ್ನಾಟಕ ಹಿಂದೆ ಬೀಳುತ್ತಿದೆ. 19 ಸಾವಿರ ಶಿಕ್ಷಕರ ಕೊರತೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಇದೆ. ಶಿಕ್ಷಕರ ಜೊತೆಗೆ ಕೊಠಡಿಗಳ ಸಮಸ್ಯೆ ಇದೆ. ಕೂಡಲೇ ಶಿಕ್ಷಕರ ನೇಮಕ ಮಾಡಬೇಕು ಅಂತ ಸದನದಲ್ಲಿ ಆಗ್ರಹಿಸಿದ್ದರು. ಈ ವೇಳೆ ಸಚಿವ ಮಧು ಬಂಗಾರಪ್ಪ ಉತ್ತರ ನೀಡಿ, ಶಿಕ್ಷಣ ಇಲಾಖೆಯಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇದೆ. 10 ಸಾವಿರ ಶಿಕ್ಷಕರ ನೇಮಕಕ್ಕೆ ಆರ್ಥಿಕ ಇಲಾಖೆಗೆ ಪತ್ರ ಬರೆಯಲಾಗಿದೆ. ಆರ್ಥಿಕ ಇಲಾಖೆ ಅನುಮತಿ ಕೊಟ್ಟ ಬಳಿಕ 10 ಸಾವಿರ ಹುದ್ದೆ ನೇಮಕ ಪ್ರಕ್ರಿಯೆ ಶುರು ಮಾಡುತ್ತೇವೆ ಎಂದು ತಿಳಿಸಿದರು.
ಭೂಮಾಪಕರ ಹುದ್ದೆ ಭರ್ತಿಗೆ ಕೆಪಿಎಸ್ ಸಿಗೆ ಪ್ರಸ್ತಾವನೆ ಸಲ್ಲಿಕೆ
ಭೂಮಾಪನ ಇಲಾಖೆಯಲ್ಲಿ 750 ಭೂಮಾಪಕರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಿಳಿಸಿದರು. ಇನ್ನು, ಸೋಮವಾರ ವಿಧಾನಸಭೆಯಲ್ಲಿ ಶಾಸಕರಾದ ಐಹೊಳೆ ಮಹಾಲಿಂಗಪ್ಪ(ರಾಯಭಾಗ), ಸಮೃದ್ದಿ ವಿ ಮಂಜುನಾಥ್ (ಮುಳಬಾಗಿಲು) ಅವರ ಪ್ರಶ್ನೆಗೆ ಭೂಮಾಪನ ಇಲಾಖೆಯಲ್ಲಿ 750 ಭೂಮಾಪಕರ ಹುದ್ದೆಗಳ ಭರ್ತಿಗೆ ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೊಸ ಹುದ್ದೆಗಳನ್ನು ಸೃಜಿಸುವ ಬಗ್ಗೆ ಚರ್ಚೆಯ ಹಂತದಲ್ಲಿದೆ ಎಂದು ಉತ್ತರಿಸಿದರು.
ಮಂದಗತಿಯಲ್ಲಿ ಜರುಗುತ್ತಿದ್ದ ಡ್ರೋನ್ ಸರ್ವೆ ಕಾರ್ಯವನ್ನು ತೀವ್ರಗೊಳಿಸಿ ದತ್ತಾಂಶಗಳನ್ನು ಸಂಗ್ರಹಿಸುವ ಮೂಲಕ ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮರು ಭೂಮಾಪನ ಕಾರ್ಯವನ್ನು ತೀವ್ರಗೊಳಿಸಿ ದತ್ತಾಂಶಗಳನ್ನು ಸಂಗ್ರಹಿಸುವ ಮೂಲಕ ಆಧುನಿಕ ತಂತ್ರಜ್ಞಾನದ ಬಳಕೆಯೊಂದಿಗೆ ಮರು ಭೂಮಾಪನ ಕಾರ್ಯವನ್ನು ಉನ್ನತ ಮಟ್ಟದಲ್ಲಿ ಮೇಲ್ವಿಚಾರಣೆ ಮಾಡುತ್ತಿದ್ದು ಈ ಯೋಜನೆಯ ಭಾಗವಾಗಿ , ಪ್ರಸ್ತಾಪಿಸಿದ ಗ್ರಾಮಗಳನ್ನು ಸಹ ಸಮಗ್ರವಾಗಿ ಮರು ಭೂಮಾಪನ ಕಾರ್ಯಕ್ಕೆ ಒಳಪಡಿಸಲಾಗುತ್ತಿದ್ದು, ರೈತರಿಗೆ ಶೀಘ್ರ ಪರಿಹಾರ ನೀಡುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನ ಮಾಡಲಾಗುತ್ತಿದೆ ಎಂದು ವಿಧಾನಸಭೆಗೆ ತಿಳಿಸಿದರು. ಪ್ರಸ್ತುತ ಇಲಾಖೆಯಲ್ಲಿ ಲಭ್ಯವಿರುವ ಭೂಮಾಪಕರು ಹಾಗೂ ಪರವಾನಗಿ ಭೂಮಾಪಕರ ಸೇವೆಯನ್ನು ಬಳಸಿಕೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.












Click it and Unblock the Notifications