Get Updates
Get notified of breaking news, exclusive insights, and must-see stories!

ಕಿದ್ವಾಯಿ ಆಸ್ಪತ್ರೆಯಲ್ಲಿ ಕಡಿಮೆ ವೆಚ್ಚದಲ್ಲಿ ಪೆಟ್‌ಸ್ಕ್ಯಾನ್ ಸೌಲಭ್ಯ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಫೆ.4: ಬಡ ರೋಗಿಗಳಿಗೆ ಅನುಕೂಲವಾಗಲು ಕಿದ್ವಾಯಿ ಆಸ್ಪತ್ರೆಯಲ್ಲಿ ಕಡಿಮೆ ದರದಲ್ಲಿ ಕ್ಯಾನ್ಸರ್ ರೋಗ ಪರೀಕ್ಷೆಯ ಪೆಟ್ ಸ್ಕ್ಯಾನ್ ಸೌಲಭ್ಯ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಶ್ವ ಕ್ಯಾನ್ಸರ್ ದಿನದ ಅಂಗವಾಗಿ ಬೆಂಗಳೂರಿನ ಉತ್ತರಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಜನಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ 'ಆರೈಕೆಯ ಅಂತರವನ್ನು ಕಡಿತಗೊಳಿಸಿ' ಎಂಬ ಘೋಷವಾಕ್ಯವನ್ನು ಬಿಡುಗಡೆ ಮಾಡಿದರು.

ಕಿದ್ವಾಯಿ ಸಂಸ್ಥೆಯ ಆಧುನೀಕರಣಕ್ಕಾಗಿ ಎರಡು ಪೆಟ್‌ಸ್ಕ್ಯಾನ್ ಯಂತ್ರಗಳ ಖರೀದಿಗೆ ಕ್ರಮ ಕೈಗೊಳ್ಳಲಾಗಿದೆ. ಕ್ಯಾನ್ಸರ್ ರೋಗವನ್ನು ಪತ್ತೆಹಚ್ಚುವ ಪೆಟ್‌ಸ್ಕ್ಯಾನ್‌ ಪರೀಕ್ಷೆ ಖಾಸಗಿ ಆಸ್ಪತ್ರೆಯಲ್ಲಿ 25,000 ರೂ.ಗಳವರೆಗೆ ವೆಚ್ಚವಾಗುತ್ತದೆ. ಬಡರೋಗಿಗಳಿಗೆ ಸಹಾಯ ಒದಗಿಸುವ ಉದ್ದೇಶದಿಂದ ಸರ್ಕಾರ ಈ ದುಬಾರಿ ಸ್ಕ್ಯಾನ್ ಸೌಲಭ್ಯವನ್ನು ಕೇವಲ 8 ರಿಂದ 10 ಸಾವಿರದೊಳಗೆ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

Pet Scan at affordable rate in Kidwai Cancer Hospital: CM Basavaraj Bommai

ಜನೌಷಧಿ ಕೇಂದ್ರದಲ್ಲಿ ಕ್ಯಾನ್ಸರ್ ಔಷಧಿಗೆ ಚಿಂತನೆ:
ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ಔಷಧಿಗಳು ಜನಸಾಮಾನ್ಯರಿಗೆ ಕೈಗೆಟಕುವ ದರದಲ್ಲಿ ಔಷಧಿಗಳನ್ನು ಲಭ್ಯವಾಗಿಸಲು ಸಂಬಂಧಪಟ್ಟ ತಯಾರಿಕಾ ಸಂಸ್ಥೆ ಹಾಗೂ ಕೇಂದ್ರ ಸರ್ಕಾರದ ಚರ್ಚಿಸಿ ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು.

ಜನೌಷಧಿ ಕೇಂದ್ರಗಳಲ್ಲಿ ಕ್ಯಾನ್ಸರ್ ಔಷಧಿಗಳು ಸುಲಭ ದರದಲ್ಲಿ ದೊರಕಿಸಿಕೊಡಲು ಚಿಂತನೆ ನಡೆಸಲಾಗಿದೆ. ಇಡೀ ರಾಜ್ಯದಲ್ಲಿ ಅಗ್ಗ ದರದಲ್ಲಿ ಕ್ಯಾನ್ಸರ್ ಔಷಧಿಗಳನ್ನು ಪೂರೈಸುವ ಸೊಸೈಟಿಯನ್ನು ಸ್ಥಾಪಿಸುವ ಯೋಜನೆಯಿದೆ. ಕ್ಯಾನ್ಸರ್ ಹಾಗೂ ಇನ್ನಿತರ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳೂ ಸೇರಿದಂತೆ ಆರೋಗ್ಯ ಮೂಲಸೌಕರ್ಯವನ್ನು ತಾಲ್ಲೂಕು ಮಟ್ಟದಿಂದ ಅಭಿವೃದ್ಧಿ ಮಾಡುವ ಮೂಲಕ ಆರೋಗ್ಯ ಕರ್ನಾಟಕದ ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.

ಸ್ತನ ಕ್ಯಾನ್ಸರ್ ಬಗ್ಗೆ ಜಾಗೃತಿ ಅಭಿಯಾನ:
ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ಸೇರಿದಂತೆ ಯಾವುದೇ ರೀತಿಯ ಕ್ಯಾನ್ಸರ್‌ಗೆ ಚಿಕಿತ್ಸೆ ಇದ್ದು, ಯಾರೂ ದೃತಿಗೆಡಬೇಕಾಗಿಲ್ಲ. ಚಿಕಿತ್ಸೆಯ ನಂತರ ಆರೋಗ್ಯಕರ ಜೀವನವನ್ನು ನಡೆಸಬಹುದಾಗಿದೆ. ತಾಲ್ಲೂಕಾ ಮಟ್ಟದ ಆಸ್ಪತ್ರೆಯಿಂದ ಹಿಡಿದು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯವರಗೆಗೂ ಒಂದು ವರ್ಷಗಳ ಕಾಲ, ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಸ್ತನ ಕ್ಯಾನ್ಸರ್ ನಿವಾರಣೆಯ ಬಗ್ಗೆ ಜಾಗೃತಿ ಅಭಿಯಾನ ಹಾಗೂ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಮೃದ್ಧ ಹಾಗೂ ಸದೃಢ ರಾಜ್ಯ ನಿರ್ಮಾಣವಾಗಲು ಆರೋಗ್ಯ ಕರ್ನಾಟಕ ಬಹಳ ಮುಖ್ಯ. ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ವಿಶೇಷ ಗಮನ ಹರಿಸಲಿದೆ. ಜನರನ್ನು ಸರ್ವರೀತಿಯಲ್ಲೂ ಸಶಕ್ತಗೊಳಿಸಿ ಕರ್ನಾಟಕದ ವಿಕಾಸದಲ್ಲಿ ಪಾಲುದಾರರಾಗುವಂತೆ ಮಾಡಲಾಗುವುದು. ಸಮುದಾಯ ಹಾಗೂ ಸರ್ಕಾರ ಒಟ್ಟುಗೂಡಿ ಕ್ಯಾನ್ಸರ್ ರೋಗವನ್ನು ಸಮಾಜದಿಂದ ದೂರವಾಗಿಸಬಹುದು. ಜಾಗೃತಿ ಅಭಿಯಾನ ಈ ಉದ್ದೇಶದ ಈಡೇರಿಕೆಗೆ ಪೂರಕವಾಗಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Recommended Video

      ಯೋಗಿ ಆದಿತ್ಯನಾಥ್ ಕಿವಿ ಓಲೆ ಮತ್ತು ರುದ್ರಾಕ್ಷಿ ಮಾಲೆಯ ಬೆಲೆ ಎಷ್ಟು ಗೊತ್ತಾ? | Oneindia Kannada

      ಕ್ಯಾನ್ಸರ್ ಗೆದ್ದ ಮಹಿಳೆಯ ಆತ್ಮಸ್ಥೈರ್ಯವನ್ನು ಪ್ರಶಂಸಿದ ಸಿಎಂ
      ಕಳೆದ 10-12 ವರ್ಷಗಳಿಂದ ಧ್ವನಿಪಟಲದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಚಿಕಿತ್ಸೆಯ ನಂತರ ಮಾತನಾಡಬಲ್ಲವರಾಗಿದ್ದಾರೆ. ಮಾನಸಿಕವಾಗಿ ಗಟ್ಟಿಯಾಗಿದ್ದ ಮಹಿಳೆ ತಮ್ಮ ಕ್ಯಾನ್ಸರ್‌ನ ಅನುಭವಗಳನ್ನು, ಮನೋಬಲವನ್ನು ಹಾಗೂ ಧೂಮಪಾನದ ಅಪಾಯಗಳು ಹಾಗೂ ಕ್ಯಾನ್ಸರ್ ತಡೆಗಟ್ಟಬಹುದಾದ ಬಗೆಯ ಕುರಿತು ಆತ್ಮಸ್ಥೈರ್ಯದಿಂದ ಕಾರ್ಯಕ್ರಮದಲ್ಲಿ ಮಾತನಾಡಿದನ್ನು ಮುಖ್ಯಮಂತ್ರಿಗಳು ಪ್ರಶಂಸಿದರು.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+