Petrol- Diesel price hike: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳುತ್ತಿದ್ಯಾ ಕಾಂಗ್ರೆಸ್?
ಬೆಂಗಳೂರು, ಜೂನ್. 16: ರಾಜ್ಯದಲ್ಲಿ ಮಾರಾಟ ತೆರಿಗೆಯನ್ನು ಪರಿಷ್ಕರಿಸಿದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ. ಗೆಜೆಟ್ ಅಧಿಸೂಚನೆಯ ಪ್ರಕಾರ, ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಕ್ರಮವಾಗಿ 29.84% ಮತ್ತು 18.44% ರಷ್ಟು ಪರಿಷ್ಕರಿಸಿದೆ. ಹೀಗಾಗಿ ಕರ್ನಾಟಕದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸುಮಾರು 3 ಮತ್ತು 3.05 ರೂಪಾಯಿಯಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಕಾಂಗ್ರೆಸ್ ಸರ್ಕಾರದ ಈ ಕ್ರಮಕ್ಕೆ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ. ಪೆಟ್ರೋಲ್, ಡೀಸೆಲ್ ಬೆಲೆ ಜಾಸ್ತಿ ಮಾಡುವುದು ಬಡವರನ್ನು ಉಪವಾಸ ಬೀಳಿಸಿ ಸಾಯಿಸುವ ಫ್ಯಾಸಿಸ್ಟ್ ಮನಸ್ಸಿನ ಕ್ರೌರ್ಯ ಎನ್ನುತ್ತಿದ್ದ ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಕನ್ನಡಿಗರ ಮೇಲೆ ಸೇಡು ತೀರಿಸಿಕೊಳ್ತಿದೆ ಕಾಂಗ್ರೆಸ್!
"ಲೋಕಸಭೆ ಚುನಾವಣೆಯಲ್ಲಿ ಕನ್ನಡಿಗರು ಬಿಜೆಪಿಗೆ ಮತ ಹಾಕಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಹೊರಟಿದೆ ಈ ಜನವಿರೋಧಿ ಕಾಂಗ್ರೆಸ್ ಸರ್ಕಾರ. ಅವೈಜ್ಞಾನಿಕ ಗ್ಯಾರೆಂಟಿಗಳಿಂದ ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿರುವ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ತೆರಿಗೆ ಭಾರ ಹೊರಿಸಿ ಖಜಾನೆ ತುಂಬಿಸಲು ಹೊರಟಿದೆ" ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆರ್. ಅಶೋಕ್ ಕಿಡಿಕಾರಿದ್ದಾರೆ.
"ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆದೇಶ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ ಮತ್ತು ಡೀಸೆಲ್ ಬೆಲೆ 3.50 ರೂ. ಹೆಚ್ಚಳ ಮಾಡಿ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕಿದೆ" ಎಂದು ಮಾಜಿ ಸಿಚವ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ.
ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ ಹುಡುಕಿಕೊಡಿ...
ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ ಎಂದು ವ್ಯಂಗ್ಯವಾಡಿರುವ ಆರ್. ಅಶೋಕ್ ಕರ್ನಾಟಕ ಡಿಜಿಪಿಯನ್ನು ಟ್ಯಾಗ್ ಮಾಡಿದ್ದಾರೆ. "ಮಾನ್ಯ ಕರ್ನಾಟಕ ಡಿಜಿಪಿ ಅವರೇ, ಕಾಣೆಯಾಗಿದ್ದಾರೆ ಹುಡುಕಿಕೊಡಿ... ಪೆಟ್ರೋಲ್, ಡೀಸೆಲ್ ಬೆಲೆ ಜಾಸ್ತಿಯಾದರೆ ಜನರಿಗೆ ಸೈಕಲ್, ಎತ್ತಿನಗಾಡಿ, ಟಾಂಗಾ ಸವಾರಿಯೇ ಗತಿ ಎಂದು ಬೈಕ್ ಗಳ ಶವಯಾತ್ರೆ ನಡೆಸಿದ್ದ ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ, ಹುಡುಕಿಕೊಡಿ" ಎಂದು ಹೇಳಿದ್ದಾರೆ.
ಮಾನ್ಯ @DgpKarnataka ಅವರೇ,
— R. Ashoka (ಮೋದಿ ಅವರ ಕುಟುಂಬ) (@RAshokaBJP) June 15, 2024
ಕಾಣೆಯಾಗಿದ್ದಾರೆ ಹುಡುಕಿಕೊಡಿ...
ಪೆಟ್ರೋಲ್, ಡೀಸೆಲ್ ಬೆಲೆ ಜಾಸ್ತಿಯಾದರೆ ಜನರಿಗೆ ಸೈಕಲ್, ಎತ್ತಿನಗಾಡಿ, ಟಾಂಗಾ ಸವಾರಿಯೇ ಗತಿ ಎಂದು ಬೈಕ್ ಗಳ ಶವಯಾತ್ರೆ ನಡೆಸಿದ್ದ ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ, ಹುಡುಕಿಕೊಡಿ.
ಪೆಟ್ರೋಲ್, ಡೀಸೆಲ್ ಬೆಲೆ ಜಾಸ್ತಿಯಾದರೆ ತರಕಾರಿ ಮತ್ತಿತರ ದಿನಬಳಕೆ ವಸ್ತುಗಳ ಬೆಲೆ… pic.twitter.com/JQ5T1MeDON
"ಪೆಟ್ರೋಲ್, ಡೀಸೆಲ್ ಬೆಲೆ ಜಾಸ್ತಿಯಾದರೆ ತರಕಾರಿ ಮತ್ತಿತರ ದಿನಬಳಕೆ ವಸ್ತುಗಳ ಬೆಲೆ ಜಾಸ್ತಿ ಆಗುತ್ತದೆ ಎಂದು ಬೊಬ್ಬಿಡುತ್ತಿದ್ದ ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ, ಹುಡುಕಿಕೊಡಿ. ಪೆಟ್ರೋಲ್, ಡೀಸೆಲ್ ಬೆಲೆ ಜಾಸ್ತಿ ಮಾಡುವುದು ಬಡವರನ್ನು ಉಪವಾಸ ಬೀಳಿಸಿ ಸಾಯಿಸುವ ಫ್ಯಾಸಿಸ್ಟ್ ಮನಸ್ಸಿನ ಕ್ರೌರ್ಯ ಎನ್ನುತ್ತಿದ್ದ ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ, ಹುಡುಕಿಕೊಡಿ" ಎಂದು ಸರಣಿ ಚಿತ್ರಗಳ ಮೂಲಕ ಒತ್ತಾಯಿಸಿದ್ದಾರೆ.
"ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಗ್ರಾಹಕರಿಗೆ ₹25 ರೂಪಾಯಿಗೆ ಪೆಟ್ರೋಲ್ ಹಾಕಿ ಪ್ರತಿಭಟನೆ ನಡೆಸಿದ್ದ ಸಿದ್ದರಾಮಯ್ಯನವರು ಕಾಣೆಯಾಗಿದ್ದಾರೆ, ಹುಡುಕಿಕೊಡಿ. ಆಷಾಢಭೂತಿತನಕ್ಕೆ, ಬೂಟಾಟಿಕೆಗೆ ಯಾವುದಾದರೂ ನೋಬೆಲ್ ಅಥವಾ ಆಸ್ಕರ್ ಪ್ರಶಸ್ತಿ ಇದ್ದರೆ ಅದು ನಿಶ್ಚಿತವಾಗಿ ಡೋಂಗಿ ಸಿದ್ದರಾಮಯ್ಯ ಅವರಿಗೇ ಸಲ್ಲಬೇಕು" ಎಂದು ಟೀಕಿಸಿದ್ದಾರೆ.
ಎಲ್ಲಾ ಬುರುಡೆ ಇಲ್ಲಿ ಎಲ್ಲಾ ಬುರುಡೆ...
"ಎಲ್ಲಾ ಬುರುಡೆ ಇಲ್ಲಿ ಎಲ್ಲಾ ಬುರುಡೆ... ಸಿಎಂ ಸಿದ್ದರಾಮಯ್ಯ ಅವರನ್ನ ಜನ ಸುಮ್ಮನೆ ಬುರುಡೆರಾಮಯ್ಯ ಅಂತ ಕರೆಯೋದಿಲ್ಲ. ಅದು ಅಕ್ಷರಶಃ ಅವರ ಗುಣಕ್ಕೆ ಸರಿಹೊಂದುವಂತೆ ಬಿರುದು. ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರದ ಕರಾಮತ್ತು ನೋಡಿ.." ಎಂದು ಅಶೋಕ್ ಸಿದ್ದರಾಮಯ್ಯ ಅವ ವಿಡಿಯೋ ಹಂಚಿಕೊಂಡಿದ್ದಾರೆ.
"ನಾವು ಅಧಿಕಾರಕ್ಕೆ ಬಂದರೆ... ಗೊಬ್ಬರದ ಬೆಲೆನೂ ಕಡಿಮೆ ಮಾಡ್ತೀವಿ... ಗ್ಯಾಸ್ ಬೆಲೆನೂ ಕಡಿಮೆ ಮಾಡ್ತೀವಿ... ಪೆಟ್ರೋಲ್ ಬೆಲೆನೂ ಕಡಿಮೆ ಮಾಡ್ತೀವಿ... ಡೀಸೆಲ್ ಬೆಲೆನೂ ಕಡಿಮೆ ಮಾಡ್ತೀವಿ ... ಅಂತ ಪುಂಗಿ ಬಿಟ್ಟು, ಈಗ ಎಲ್ಲದರ ಬೆಲೆ ಜಾಸ್ತಿ ಮಾಡಿದ್ದಾರೆ" ಎಂದು ಸರಣಿ ಟ್ವೀಟ್‌ಗಳ ಮೂಲಕ ಆರ್. ಅಶೋಕ್ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.












Click it and Unblock the Notifications