ಪೆಟ್ರೋಲ್, ಗ್ಯಾಸ್ ಬೆಲೆ ಏರಿಕೆ: ಜನರ ನಿರೀಕ್ಷೆ ನಿಜ ಮಾಡಿದ ಕೇಂದ್ರ ಸರ್ಕಾರ- ಸಿದ್ದರಾಮಯ್ಯ

ಬೆಂಗಳೂರು, ಮಾ.23: ಐದು ರಾಜ್ಯಗಳ ಚುನಾವಣಾ ಫಲಿತಾಂಶದ ಬಳಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಹೆಚ್ಚಾಗುತ್ತದೆ ಎಂದು ಜನ ನಿರೀಕ್ಷೆ ಮಾಡಿದ್ದರು. ಅದು ನಿಜವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಐದು ರಾಜ್ಯಗಳ ಚುನಾವಣೆ ಇದೆ ಎಂಬ ಕಾರಣಕ್ಕೆ ನವೆಂಬರ್‌ನಲ್ಲಿ ಕೇಂದ್ರ ಸರ್ಕಾರ ಕೊನೆಯ ಬಾರಿ ಬೆಲೆಯೇರಿಕೆ ಮಾಡಿತ್ತು. ಚುನಾವಣೆ ಫಲಿತಾಂಶದ ನಂತರ ಬೆಲೆ ಹೆಚ್ಚಾಗಬಹುದು ಎಂದು ಜನ ನಿರೀಕ್ಷೆ ಮಾಡಿದ್ದರು, ಅದು ನಿಜವಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಸುಮಾರು 80 ಪೈಸೆ, ಗ್ಯಾಸ್ ಮೇಲೆ ರೂ. 50 ಏರಿಕೆ ಮಾಡಲಾಗಿದೆ ಎಂದು ಅವರು ಬುಧವಾರ ವಿಧಾನಸೌಧದ ಮೊಗಸಾಲೆಯಲ್ಲಿ ಮಾತನಾಡಿದರು.

ಜನ ಬೆಲೆಯೇರಿಕೆಯಿಂದ ಈಗಾಗಲೇ ತತ್ತರಿಸಿ ಹೋಗಿದ್ದಾರೆ. ಅಡುಗೆ ಎಣ್ಣೆ, ಕಬ್ಬಿಣ, ಸಿಮೆಂಟ್ ಹೀಗೆ ಎಲ್ಲಾ ವಸ್ತುಗಳ ಬೆಲೆ ಗಗನಕ್ಕೇರಿದೆ. ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಮೇಲೆ ಬೆಲೆ ನಿಯಂತ್ರಣ ಮಾಡುವುದರಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಡೀಸೆಲ್‌ ಬೆಲೆ ಹೆಚ್ಚಾದರೆ ಗೊಬ್ಬರ, ಆಹಾರ ವಸ್ತುಗಳು ಹೀಗೆ ಎಲ್ಲದರ ಬೆಲೆ ಹೆಚ್ಚಾಗುತ್ತದೆ. ಇದರಿಂದ ಸಾಮಾನ್ಯ ಜನರಿಗೆ ಹೊರೆಯಾಗಲಿದೆ.

Petrol, diesel, gas prices rise after five states election is expected: Siddaramaiah

ಕೇಂದ್ರ ಸರ್ಕಾರ ಕಾರ್ಪೊರೇಟ್ ಸಂಸ್ಥೆಗಳ ಮೇಲಿನ ತೆರಿಗೆ ಕಡಿಮೆ ಮಾಡಿ, ಸಾಮಾನ್ಯ ಜನರ ಮೇಲೆ ಹೆಚ್ಚು ತೆರಿಗೆ ವಿಧಿಸುತ್ತಿದೆ. ಬೆಲೆಯೇರಿಕೆಗೆ ನನ್ನ ವಿರೋಧವಿದೆ. ಕೇಂದ್ರ ಸರ್ಕಾರ ಈ ಕೂಡಲೆ ಸಾಮಾನ್ಯ ಜನರಿಗೆ ಹೊರೆಯಾಗುವಂತೆ ಬೆಲೆಯೇರಿಕೆ ಮಾಡುತ್ತಿರುವುದನ್ನು ನಿಲ್ಲಿಸಬೇಕು ಎಂದು ಒತ್ತಾಯ ಮಾಡುತ್ತೇನೆ.

ಪೆಟ್ರೋಲ್, ಡೀಸೆಲ್‌ ಮತ್ತು ಗ್ಯಾಸ್‌ಗಳ ಬೆಲೆಯೇರಿಕೆ ಮಾಡಿರುವುದನ್ನು ವಾಪಾಸು ಪಡೆಯಬೇಕು. ಯಾರು ಅತ್ಯಧಿಕ ಪ್ರಮಾಣದ ಆಸ್ತಿ ಸಂಪಾದನೆ ಮಾಡಿದ್ದಾರೆ ಅಂಥವರ ಮೇಲೆ ಹೆಚ್ಚು ತೆರಿಗೆ ವಿಧಿಸಿ, ಬಡವರು, ಸಾಮಾನ್ಯ ವರ್ಗದ ಜನರ ಮೇಲಿನ ತೆರಿಗೆ ಇಳಿಕೆ ಮಾಡಬೇಕು. ಬೆಲೆಯೇರಿಕೆ ವಿರೋಧಿಸಿ ಹೋರಾಟ ಮಾಡಲು ಪಕ್ಷದಲ್ಲಿ ತೀರ್ಮಾನ ಮಾಡಿದ್ದೇವೆ, ಮುಂದಿನ ದಿನಗಳಲ್ಲಿ ಹೋರಾಟ ಕೈಗೆತ್ತಿಕೊಳ್ಳುತ್ತೇವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+