ಕರ್ನಾಟಕ; ಮೇ 31ರಂದು ಪೆಟ್ರೋಲ್ ಬಂಕ್ ಮಾಲೀಕರ ಮುಷ್ಕರ

ಬೆಂಗಳೂರು, ಮೇ 27; ಕರ್ನಾಟಕದಲ್ಲಿ ಪೆಟ್ರೋಲ್ ಬಂಕ್ ಮಾಲೀಕರು ಮೇ 31ರಂದು ತೈಲ ಖರೀದಿ ನಿಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ. ಆದ್ದರಿಂದ ಮಂಗಳವಾರ ವಾಹನ ಸವಾರರಿಗೆ ಪೆಟ್ರೋಲ್, ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ.

ಅಖಿಲ ಕರ್ನಾಟಕ ಪೆಟ್ರೋಲಿಯಂ ವ್ಯಾಪಾರಿಗಳ ಒಕ್ಕೂಟ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದೆ. ಅವಶ್ಯಕತೆಗೆ ಅನುಗುಣವಾಗಿ ತೈಲ ಪೂರೈಕೆ ಮಾಡದ ಕಾರಣ ಬಂಕ್‌ಗಳ ಮುಂದೆ ನೋ ಸ್ಟಾಕ್ ಫಲಕ ಹಾಕುವಂತೆ ಆಗಿದೆ ಎಂದು ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಪಿಸಿಎಲ್ ಮತ್ತು ಎಚ್‌ಪಿಸಿಎಲ್ ಕಂಪನಿಗಳ ನಿರ್ವಹಣೆಯಲ್ಲಿನ ವೈಫಲ್ಯದಿಂದ ಪೆಟ್ರೋಲ್ ಬಂಕ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಗತ್ಯಕ್ಕೆ ಅನುಗುಣವಾಗಿ ತೈಲ ಪೂರೈಕೆ ಮಾಡುವಂತೆ ಒತ್ತಾಯಿಸಿ ತೈಲ ಖರೀದಿ ನಿಲ್ಲಿಸಿ ಮಾಲೀಕರು ಪ್ರತಿಭಟನೆ ನಡೆಸಲಿದ್ದಾರೆ.

ಪೆಟ್ರೋಲ್ ಬಂಕ್ ಮಾಲೀಕರು ತೈಲ ಖರೀದಿ ನಿಲ್ಲಿಸಿದರೆ ಪೆಟ್ರೋಲ್ ಬಂಕ್‌ಗಳ ಮುಂದೆ ನೋ ಸ್ಟಾಕ್ ಫಲಕ ಹಾಕಲಾಗುತ್ತದೆ. ಆದ್ದರಿಂದ ಪ್ರತಿಭಟನೆ ನಡೆಸುವ ಮೇ 31ರ ಮಂಗಳವಾರ ಪೆಟ್ರೋಲ್, ಡೀಸೆಲ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ.

ಸರ್ಕಾರಿ ತೈಲ ಕಂಪನಿಗಳಿಂದ ಪೆಟ್ರೋಲ್, ಡೀಸೆಲ್ ಪಡೆಯುವ ಬಂಕ್ ಮಾಲೀಕರು ತೈಲ ಖರೀದಿ ನಿಲ್ಲಿಸಿ ಪ್ರತಿಭಟನೆ ನಡೆಸಲಿವೆ. ಆದರೆ ಬಂಕ್‌ಗಳು ಎಂದಿನಂತೆ ಕಾರ್ಯನಿರ್ವಹಣೆ ಮಾಡಲಿವೆ ಎಂದು ಮಾಲೀಕರು ಹೇಳದ್ದಾರೆ. ತುರ್ತು ಅಗತ್ಯದ ಸಂದರ್ಭದಲ್ಲಿ ಜನರು ಖಾಸಗಿ ಬಂಕ್ ಅವಲಂಬಿಸುವುದು ಅನಿವಾರ್ಯವಾಗಲಿದೆ.

ಬೇಡಿಕೆಗೆ ತಕ್ಕಷ್ಟು ಪೂರೈಕೆ ಇಲ್ಲ

ಬೇಡಿಕೆಗೆ ತಕ್ಕಷ್ಟು ಪೂರೈಕೆ ಇಲ್ಲ

ಅಖಿಲ ಕರ್ನಾಟಕ ಪೆಟ್ರೋಲಿಯಂ ವ್ಯಾಪಾರಿಗಳ ಒಕ್ಕೂಟದ ಉಪಾಧ್ಯಕ್ಷ ಎ. ತಾರಾನಾಥ್ ಮಾತನಾಡಿ, "ಖರೀದಿ ಮಾಡಿದ ಡೀಸೆಲ್‌ಗೆ ಸಾರಿಗೆ ಸಂಸ್ಥೆಗಳು ಹಣ ಪಾವತಿ ಮಾಡದೆ ಕಂಪನಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿವೆ. ಅದರ ಪರಿಣಾಮವನ್ನು ಸಾಮಾನ್ಯ ವಿತರಕನ ಮೇಲೆ ಹೇರಲಾಗುತ್ತಿದೆ. ಬೇಡಿಕೆಗೆ ತಕ್ಕಷ್ಟು ಪೆಟ್ರೋಲ್, ಡೀಸೆಲ್ ಪೂರೈಕೆಯಾಗುತ್ತಿಲ್ಲ" ಎಂದು ಆರೋಪಿಸಿದ್ದಾರೆ.

ಬ್ಯಾಂಕ್ ವಹಿವಾಟು ನಿಧಾನ

ಬ್ಯಾಂಕ್ ವಹಿವಾಟು ನಿಧಾನ

ಈ ಹಿಂದೆ ಇಂಧನ ತಂದು ವ್ಯಾಪಾರವಾದ ಮರುದಿನ ಹಣ ತುಂಬುವ ವ್ಯವಸ್ಥೆ ಇತ್ತು. ಈಗ ಮೊದಲೇ ಹಣ ನೀಡಿ ಖರೀದಿ ಮಾಡಬೇಕಿದೆ. ಬ್ಯಾಂಕ್ ವಹಿವಾಟು ನಿಧಾನವಾದರೆ ವಿತರಕರು ತೊಂದರೆಗೆ ಸಿಲುಕುತ್ತಿದ್ದಾರೆ. ಸಾಲದ ರೂಪದಲ್ಲಿ ಹಣ ತಂದರೂ ಬೇಡಿಕೆಗೆ ತಕ್ಕಷ್ಟು ತೈಲ ಪೂರೈಕೆ ಆಗುತ್ತಿಲ್ಲ ಎಂದು ಪೆಟ್ರೋಲ್ ಬಂಕ್ ಮಾಲೀಕರು ದೂರಿದ್ದಾರೆ. ಬಿಪಿಸಿಎಲ್ ಮತ್ತು ಎಚ್‌ಪಿಸಿಎಲ್ ಕಂಪನಿಗಳ ನಿರ್ವಹಣೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಡಿಮೆ ದರದಲ್ಲಿ ಮಾರಾಟ ಮಾಡಬೇಕು

ಕಡಿಮೆ ದರದಲ್ಲಿ ಮಾರಾಟ ಮಾಡಬೇಕು

ಸರ್ಕಾರ ತೈಲ ಬೆಲೆಯನ್ನು ಪೈಸೆ ಲೆಕ್ಕದಲ್ಲಿ ಏರಿಕೆ ಮಾಡುತ್ತದೆ. ಆದರೆ ಒಮ್ಮೆಲೇ 9 ರೂ. ಇಳಿಕೆ ಮಾಡಲಾಗುತ್ತದೆ. ಹಿಂದಿನ ದರದಲ್ಲಿ ಖರೀದಿ ಮಾಡಿ ದಾಸ್ತಾನು ಮಾಡಿಕೊಂಡಿದ್ದ ತೈಲವನ್ನು ಕಡಿಮೆ ದರದಲ್ಲಿ ಮರುದಿನ ಮಾರಾಟ ಮಾಡಿದರೆ ಪ್ರತಿ ವಿತರಕರಿಗೆ 3 ರಿಂದ 30 ಲಕ್ಷದ ತನಕ ನಷ್ಟವಾಗುತ್ತಿದೆ. ಇದರಿಂದಾಗಿ ಸಾಮಾನ್ಯ ವಿತರಕನಿಗೆ ತೊಂದರೆಯಾಗುತ್ತಿದೆ ಎಂದು ಬಂಕ್ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಖಾಸಗಿ ಪೆಟ್ರೋಲ್ ಬಂಕ್‌ಗಳಾದ ಶೆಲ್, ನಾಯರಾಗಳು ಮೇ 31ರಂದು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿವೆ.

ನಿರ್ವಹಣಾ ವೆಚ್ಚ ಅಧಿಕವಾಗುತ್ತಿದೆ

ನಿರ್ವಹಣಾ ವೆಚ್ಚ ಅಧಿಕವಾಗುತ್ತಿದೆ

2017ಕ್ಕೆ ಹೋಲಿಕೆ ಮಾಡಿದರೆ ಈಗ ತೈಲ ಬೆಲೆ ಏರಿಕೆಯಾಗಿದೆ. ಆದರೆ ಕಮೀಷನ್ ಹೆಚ್ಚಳ ಮಾಡುವಂತೆ ಕೇಂದ್ರ, ರಾಜ್ಯ ಸರ್ಕಾರಕ್ಕೆ ಮಾಡಿದ ಮನವಿಗೆ ಸ್ಪಂದನೆ ಸಿಕ್ಕಿಲ್ಲ. ಬಂಕ್ ಸಿಬ್ಬಂದಿಗಳ ವೇತನ ಪ್ರತಿವರ್ಷ ಪರಿಷ್ಕರಣೆ ಆಗಬೇಕು. ಮೂಲ ಸೌಕರ್ಯ ಸೇರಿದಂತೆ ಇತರ ಖರ್ಚುಗಳಿಂದ ನಿರ್ವಹಣಾ ವೆಚ್ಚ ಅಧಿಕವಾಗುತ್ತಿದೆ. ಆದ್ದರಿಂದ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮೇ 31ರಂದು ತೈಲ ಖರೀದಿ ಬಂದ್ ಮಾಡಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಪೆಟ್ರೋಲ್ ಬಂಕ್ ಮಾಲೀಕರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+