ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪೆಟ್ರೋಲ್ ಬೆಲೆ ಏರಿಕೆ; ಕಾಂಗ್ರೆಸ್‌ಗೆ ಕುಮಾರಸ್ವಾಮಿ ಪ್ರಶ್ನೆಗಳು!

|
Google Oneindia Kannada News

ಬೆಂಗಳೂರು, ಜೂನ್ 13; "ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್‌ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್‌ ಬೆಲೆ ಇಳಿಯಬೇಕಿದ್ದರೆ ಅದನ್ನು ಜಿಎಸ್‌ಟಿಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್‌ ಕೂಡ ಅದನ್ನೇ ಪ್ರತಿಪಾದಿಸಿದೆ. ಹಾಗಾದರೆ ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ?, ಪೆಟ್ರೋಲ್‌ಅನ್ನು GSTಗೆ ಸೇರಿಸಲೋ?" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಭಾನುವಾರ ಎಚ್. ಡಿ. ಕುಮಾರಸ್ವಾಮಿ ಪೆಟ್ರೋಲ್ ದರದ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. "ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜೂ.13: ಶತಕ ಬಾರಿಸಿದ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ ಜೂ.13: ಶತಕ ಬಾರಿಸಿದ ಬಳಿಕ ಪೆಟ್ರೋಲ್, ಡೀಸೆಲ್ ಬೆಲೆ ಸ್ಥಿರ

"ಪೆಟ್ರೋಲಿಯಂ ಖಾತೆಯ ಮಾಜಿ ಸಚಿವರೂ, ಕಾಂಗ್ರೆಸ್‌ನ ಹಿರಿಯರೂ ಆಗಿರುವ ನಾಯಕರೊಬ್ಬರು ಪೆಟ್ರೋಲ್‌ಅನ್ನು ಜಿಎಸ್‌ಟಿಗೆ ಸೇರಿಸಬೇಕೆಂದು ಆಗ್ರಹಿಸಿದ್ದಾರೆ. ಪೆಟ್ರೋಲ್‌ ಮೇಲಿನ ಮಿತಿ ಇಲ್ಲದ ತೆರಿಗೆ ಇಳಿಸುವುದು ಕಾಂಗ್ರೆಸ್‌ ಉದ್ದೇಶವಲ್ಲ, ಅದನ್ನು GSTಗೆ ಸೇರಿಸುವುದಷ್ಟೇ ಅದರ ಉದ್ದೇಶ ಎಂಬುದು ಸಾಬೀತಾಗಿದೆ. ಆದರೆ ಅದರ ಅಪಾಯ ಕಾಂಗ್ರೆಸ್‌ಗೆ ಗೊತ್ತಿಲ್ಲ" ಎಂದು ಹೇಳಿದ್ದಾರೆ.

 ಪೆಟ್ರೋಲ್ ಬಂಕ್ ಮುಂದೆ ಮೋದಿ ಫೋಟೊ ಹಿಡಿದು ಪ್ರತಿಭಟನೆ! ಪೆಟ್ರೋಲ್ ಬಂಕ್ ಮುಂದೆ ಮೋದಿ ಫೋಟೊ ಹಿಡಿದು ಪ್ರತಿಭಟನೆ!

"ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ. ಅವುಗಳಿಗೆ ರಾಜ್ಯಗಳ ಹಿತಾಸಕ್ತಿ, ಸ್ಥಳೀಯ ಅಗತ್ಯಗಳು ಲೆಕ್ಕಕ್ಕೇ ಇಲ್ಲ. ಪೆಟ್ರೋಲ್‌ ಅನ್ನು GSTಗೆ ಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್‌-ಬಿಜೆಪಿಗಳೆರಡೂ ಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಎಲ್ಲೆಲ್ಲಿ ಪೆಟ್ರೋಲ್ ದರ 100ರು ಗಡಿ ದಾಟಿದೆ! ಕರ್ನಾಟಕದಲ್ಲಿ ಎಲ್ಲೆಲ್ಲಿ ಪೆಟ್ರೋಲ್ ದರ 100ರು ಗಡಿ ದಾಟಿದೆ!

ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು

ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು

"ಪೆಟ್ರೋಲ್‌ಅನ್ನು GSTಗೆ ತಂದರೆ ಜನರಿಗೆ ತಕ್ಷಣಕ್ಕೆ ಬೆಲೆ ಇಳಿದಂತೆ ಅನ್ನಿಸಬಹುದು. ಆದರೆ, ಪೆಟ್ರೋಲ್‌ಅನ್ನು GSTಗೆ ಸೇರಿಸುತ್ತಲೇ ಅದರ ಮೇಲಿನ ತೆರಿಗೆಯಿಂದ ಬರುತ್ತಿದ್ದ ಸಂಪನ್ಮೂಲ ರಾಜ್ಯಗಳ ಕೈತಪ್ಪಿ ಹೋಗುತ್ತದೆ. ಎಲ್ಲ ತೆರಿಗೆಯೂ ಕೇಂದ್ರದ ಪಾಲಾಗಿ ರಾಜ್ಯಗಳು ಸಂಪನ್ಮೂಲ ಬರ ಎದುರಿಸುತ್ತವೆ. ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ" ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ತೆರಿಗೆ ಪ್ರಮಾಣ ಕಡಿಮೆ ಮಾಡಬೇಕು

ತೆರಿಗೆ ಪ್ರಮಾಣ ಕಡಿಮೆ ಮಾಡಬೇಕು

"ತೈಲ ಬೆಲೆ ಇಳಿಸುವ ಉದ್ದೇಶದೊಂದಿಗೆ ಪೆಟ್ರೋಲನ್ನು GSTಗೆ ಸೇರಿಸುವುದು ಪರಿಹಾರವಲ್ಲ. ಅದು ಶೋಷಣೆ. ಬದಲಿಗೆ ಕೇಂದ್ರ ಈಗ ವಿಧಿಸುತ್ತಿರುವ ಮಿತಿಮೀರಿದ ಸುಂಕ ಕಡಿತ ಮಾಡಲಿ. ರಾಜ್ಯ ಸರ್ಕಾರವೂ ತೆರಿಗೆ ಇಳಿಸಲಿ. ಈಗ ತೈಲದ ಮೇಲೆ ಕೇಂದ್ರ, ರಾಜ್ಯಗಳೆರಡೂ ಶೇ. 68ರಷ್ಟು ತೆರಿಗೆ ವಿಧಿಸುತ್ತಿವೆ. ಈ ತೆರಿಗೆ ಪ್ರಮಾಣ ಕಡಿಮೆಯಾಗಬೇಕಾದ್ದು ಅಗತ್ಯ" ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ನಾವೆಲ್ಲರೂ ಹೋರಾಡಬೇಕು

ನಾವೆಲ್ಲರೂ ಹೋರಾಡಬೇಕು

"ಅಂದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈಗ ಒಂದು ಲೀಟರ್‌ ಪೆಟ್ರೋಲ್‌ ಮೇಲೆ ರೂ. 60-65 ತೆರಿಗೆ ಹಣ ಸಿಗುತ್ತಿದೆ. ಆದರೆ, ಎರಡೂ ಸರ್ಕಾರಗಳೂ ಲೀಟರ್‌ ಪೆಟ್ರೋಲ್‌ ಮೇಲೆ ಸಂಗ್ರಹಿಸುವ ಹಣ ರೂ. 30 ಮೀರಬಾರದು. ಆಗ ಪೆಟ್ರೋಲ್‌ ರೂ. 65-70ಗೆ ಬಂದು ನಿಲ್ಲಲಿದೆ. ನಿಜವಾಗಿಯೂ ಆಗಬೇಕಾದ್ದು ಇದು. ಈ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಡಬೇಕಿದೆ" ಎಂದು ಹೇಳಿದ್ದಾರೆ.

ಕಾಂಗ್ರೆಸ್ ಉದ್ದೇಶವಾಗಿದೆಯೇ?

ಕಾಂಗ್ರೆಸ್ ಉದ್ದೇಶವಾಗಿದೆಯೇ?

"ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ GSTಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್‌ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು GSTಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. GSTಗೆ ಸೇರಿಸುವುದೇ ಕಾಂಗ್ರೆಸ್‌ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟ" ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Recommended Video

Biharನ ಬ್ಯಾಂಕ್ ಒಂದರಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ | Bank Robbery | Oneindia Kannada
ಹೋರಾಡುವುದು ನಮ್ಮ ನಿಲುವು

ಹೋರಾಡುವುದು ನಮ್ಮ ನಿಲುವು

"ಪೆಟ್ರೋಲ್‌ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳೆರಡು ವಿಧಿಸುತ್ತಿರುವ ಅತ್ಯಧಿಕ ತೆರಿಗೆ ಇಳಿಸುವ ಮೂಲಕ ಬೆಲೆ ಏರಿಕೆ ತಗ್ಗಿಸಬೇಕು ಎಂಬುದು JDS ಒತ್ತಾಯ. ಜತೆಗೆ ಪೆಟ್ರೋಲನ್ನು GSTಗೆ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರದ ವಿರುದ್ಧ ಹೋರಾಡುವುದೂ ನಮ್ಮ ನಿಲುವು. ಇದರ ಸುತ್ತಲೇ ನಾವು ಹೋರಾಟ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ" ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

English summary
Congress demand the union government to bring crude petroleum, petrol, diesel and natural gas under GST. Former chief minister H. D. Kumaraswamy questions to Congress about petrol price hike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X