ಪೆಟ್ರೋಲ್ ಬೆಲೆ ಏರಿಕೆ; ಕಾಂಗ್ರೆಸ್‌ಗೆ ಕುಮಾರಸ್ವಾಮಿ ಪ್ರಶ್ನೆಗಳು!
ಬೆಂಗಳೂರು, ಜೂನ್ 13; "ಕೇಂದ್ರ ಸರ್ಕಾರ ಪೆಟ್ರೋಲ್ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್ ಬೆಲೆ ಇಳಿಯಬೇಕಿದ್ದರೆ ಅದನ್ನು ಜಿಎಸ್‌ಟಿಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್ ಕೂಡ ಅದನ್ನೇ ಪ್ರತಿಪಾದಿಸಿದೆ. ಹಾಗಾದರೆ ಕಾಂಗ್ರೆಸ್ ಹೋರಾಡುತ್ತಿರುವುದು ಬೆಲೆ ಇಳಿಸಲೋ?, ಪೆಟ್ರೋಲ್‌ಅನ್ನು GSTಗೆ ಸೇರಿಸಲೋ?" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಭಾನುವಾರ ಎಚ್. ಡಿ. ಕುಮಾರಸ್ವಾಮಿ ಪೆಟ್ರೋಲ್ ದರದ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. "ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
"ಪೆಟ್ರೋಲಿಯಂ ಖಾತೆಯ ಮಾಜಿ ಸಚಿವರೂ, ಕಾಂಗ್ರೆಸ್‌ನ ಹಿರಿಯರೂ ಆಗಿರುವ ನಾಯಕರೊಬ್ಬರು ಪೆಟ್ರೋಲ್‌ಅನ್ನು ಜಿಎಸ್‌ಟಿಗೆ ಸೇರಿಸಬೇಕೆಂದು ಆಗ್ರಹಿಸಿದ್ದಾರೆ. ಪೆಟ್ರೋಲ್ ಮೇಲಿನ ಮಿತಿ ಇಲ್ಲದ ತೆರಿಗೆ ಇಳಿಸುವುದು ಕಾಂಗ್ರೆಸ್ ಉದ್ದೇಶವಲ್ಲ, ಅದನ್ನು GSTಗೆ ಸೇರಿಸುವುದಷ್ಟೇ ಅದರ ಉದ್ದೇಶ ಎಂಬುದು ಸಾಬೀತಾಗಿದೆ. ಆದರೆ ಅದರ ಅಪಾಯ ಕಾಂಗ್ರೆಸ್‌ಗೆ ಗೊತ್ತಿಲ್ಲ" ಎಂದು ಹೇಳಿದ್ದಾರೆ.
"ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ. ಅವುಗಳಿಗೆ ರಾಜ್ಯಗಳ ಹಿತಾಸಕ್ತಿ, ಸ್ಥಳೀಯ ಅಗತ್ಯಗಳು ಲೆಕ್ಕಕ್ಕೇ ಇಲ್ಲ. ಪೆಟ್ರೋಲ್ ಅನ್ನು GSTಗೆ ಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್-ಬಿಜೆಪಿಗಳೆರಡೂ ಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ" ಎಂದು ಟ್ವೀಟ್ ಮಾಡಿದ್ದಾರೆ.

ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು
"ಪೆಟ್ರೋಲ್‌ಅನ್ನು GSTಗೆ ತಂದರೆ ಜನರಿಗೆ ತಕ್ಷಣಕ್ಕೆ ಬೆಲೆ ಇಳಿದಂತೆ ಅನ್ನಿಸಬಹುದು. ಆದರೆ, ಪೆಟ್ರೋಲ್‌ಅನ್ನು GSTಗೆ ಸೇರಿಸುತ್ತಲೇ ಅದರ ಮೇಲಿನ ತೆರಿಗೆಯಿಂದ ಬರುತ್ತಿದ್ದ ಸಂಪನ್ಮೂಲ ರಾಜ್ಯಗಳ ಕೈತಪ್ಪಿ ಹೋಗುತ್ತದೆ. ಎಲ್ಲ ತೆರಿಗೆಯೂ ಕೇಂದ್ರದ ಪಾಲಾಗಿ ರಾಜ್ಯಗಳು ಸಂಪನ್ಮೂಲ ಬರ ಎದುರಿಸುತ್ತವೆ. ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ" ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.

ತೆರಿಗೆ ಪ್ರಮಾಣ ಕಡಿಮೆ ಮಾಡಬೇಕು
"ತೈಲ ಬೆಲೆ ಇಳಿಸುವ ಉದ್ದೇಶದೊಂದಿಗೆ ಪೆಟ್ರೋಲನ್ನು GSTಗೆ ಸೇರಿಸುವುದು ಪರಿಹಾರವಲ್ಲ. ಅದು ಶೋಷಣೆ. ಬದಲಿಗೆ ಕೇಂದ್ರ ಈಗ ವಿಧಿಸುತ್ತಿರುವ ಮಿತಿಮೀರಿದ ಸುಂಕ ಕಡಿತ ಮಾಡಲಿ. ರಾಜ್ಯ ಸರ್ಕಾರವೂ ತೆರಿಗೆ ಇಳಿಸಲಿ. ಈಗ ತೈಲದ ಮೇಲೆ ಕೇಂದ್ರ, ರಾಜ್ಯಗಳೆರಡೂ ಶೇ. 68ರಷ್ಟು ತೆರಿಗೆ ವಿಧಿಸುತ್ತಿವೆ. ಈ ತೆರಿಗೆ ಪ್ರಮಾಣ ಕಡಿಮೆಯಾಗಬೇಕಾದ್ದು ಅಗತ್ಯ" ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ನಾವೆಲ್ಲರೂ ಹೋರಾಡಬೇಕು
"ಅಂದರೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈಗ ಒಂದು ಲೀಟರ್ ಪೆಟ್ರೋಲ್ ಮೇಲೆ ರೂ. 60-65 ತೆರಿಗೆ ಹಣ ಸಿಗುತ್ತಿದೆ. ಆದರೆ, ಎರಡೂ ಸರ್ಕಾರಗಳೂ ಲೀಟರ್ ಪೆಟ್ರೋಲ್ ಮೇಲೆ ಸಂಗ್ರಹಿಸುವ ಹಣ ರೂ. 30 ಮೀರಬಾರದು. ಆಗ ಪೆಟ್ರೋಲ್ ರೂ. 65-70ಗೆ ಬಂದು ನಿಲ್ಲಲಿದೆ. ನಿಜವಾಗಿಯೂ ಆಗಬೇಕಾದ್ದು ಇದು. ಈ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಡಬೇಕಿದೆ" ಎಂದು ಹೇಳಿದ್ದಾರೆ.

ಕಾಂಗ್ರೆಸ್ ಉದ್ದೇಶವಾಗಿದೆಯೇ?
"ಪೆಟ್ರೋಲ್ ಬೆಲೆ ಏರಿಕೆ ವಿರುದ್ಧದ ಹೋರಾಟಗಳು ತೆರಿಗೆ, ಸುಂಕ ಇಳಿಕೆಯ ಉದ್ದೇಶದ್ದಾಗಿರಬೇಕೇ ವಿನಾ GSTಗೆ ಸೇರಿಸುವುದಾಗಿರಬಾರದು. ಈಗ ಕಾಂಗ್ರೆಸ್ ಪ್ರತಿಭಟಿಸುತ್ತಿರುವುದು ತೆರಿಗೆ ಇಳಿಸಲೋ ಅಥವಾ ಪೆಟ್ರೋಲನ್ನು GSTಗೆ ಸೇರಿಸಲೋ ಎಂಬುದು ಸ್ಪಷ್ಟವಾಗಬೇಕು. GSTಗೆ ಸೇರಿಸುವುದೇ ಕಾಂಗ್ರೆಸ್ ಉದ್ದೇಶವಾಗಿದ್ದರೆ ಅದು ಶೋಷಣೆ ಪರವಾದ ಹೋರಾಟ" ಎಂದು ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
Recommended Video

ಹೋರಾಡುವುದು ನಮ್ಮ ನಿಲುವು
"ಪೆಟ್ರೋಲ್ ಮೇಲೆ ಕೇಂದ್ರ, ರಾಜ್ಯ ಸರ್ಕಾರಗಳೆರಡು ವಿಧಿಸುತ್ತಿರುವ ಅತ್ಯಧಿಕ ತೆರಿಗೆ ಇಳಿಸುವ ಮೂಲಕ ಬೆಲೆ ಏರಿಕೆ ತಗ್ಗಿಸಬೇಕು ಎಂಬುದು JDS ಒತ್ತಾಯ. ಜತೆಗೆ ಪೆಟ್ರೋಲನ್ನು GSTಗೆ ಸೇರಿಸುವ ರಾಷ್ಟ್ರೀಯ ಪಕ್ಷಗಳ ಹುನ್ನಾರದ ವಿರುದ್ಧ ಹೋರಾಡುವುದೂ ನಮ್ಮ ನಿಲುವು. ಇದರ ಸುತ್ತಲೇ ನಾವು ಹೋರಾಟ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ" ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
-
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್












Click it and Unblock the Notifications