ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

PFI Ban: ಪಿಎಫ್‌ಐ ನಿಷೇಧ ಆದೇಶ ಎತ್ತಿಹಿಡಿದ ಹೈಕೋರ್ಟ್

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು ನ. 30. ಹಲವು ಉಗ್ರಗಾಮಿ ಸಂಘಟನೆಗಳ ಜೊತೆ ಸಂಪರ್ಕ ಹೊಂದುವ ಮೂಲಕ ದೇಶವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದೆ ಎನ್ನುವ ಆಧಾರದ ಮೇಲೆ ಪಾಪ್ಯುಲರ್‌ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. ಕೇಂದ್ರ ಸರ್ಕಾಋ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ.

ಬೆಂಗಳೂರಿನ ನಿವಾಸಿ ಹಾಗೂ ಕರ್ನಾಟಕದ ಪಿಎಫ್‌ಐ ಅಧ್ಯಕ್ಷ ನಾಸಿರ್‌ಅಲಿ ಸಲ್ಲಿಸಿದ್ದ ಅರ್ಜಿ ಕುರಿತಂತೆ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಸೋಮವಾರ ಎರಡೂ ಕಡೆ ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿತು.

ಪಿಎಫ್‌ಐ ನಿಷೇಧ: ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್ಪಿಎಫ್‌ಐ ನಿಷೇಧ: ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್

ಮಂಗಳವಾರ ತೀರ್ಪು ಪ್ರಕಟಿಸಿದ ನ್ಯಾಯಾಲಯ ಅರ್ಜಿದಾರರ ವಾದ ತಿರಸ್ಕರಿಸಿದೆ. ‌ಜತಗೆ ಕೇಂದ್ರದ ವಾದವನ್ನು ಪುರಸ್ಕರಿಸಿ ತೀರ್ಪು ಎತ್ತಿಹಿಡಿದಿದೆ.

PFI Ban: Karnataka High Court upholds government ban on PFI

ಭಯೋತ್ಪದಾಕ ಸಂಘಟನೆಗಳ ಜೊತೆ ಸಂಪರ್ಕ ಹೊಂದಿದೆ ಎನ್ನಲಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಪೂರ್ಣಗೊಳಿಸಿತ್ತು.

ರಾಜ್ಯದ ಪಿಎಫ್‌ಐ ಅಧ್ಯಕ್ಷ ನಾಸಿರ್ ಅಲಿ ಸಲ್ಲಿಸಿದ್ದ ಅರ್ಜಿ ಕುರಿತಂತೆ ನ್ಯಾ.ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಸೋಮವಾರ ಅರ್ಜಿದಾರರ ಹಾಗೂ ಕೇಂದ್ರ ಸರ್ಕಾರಿ ವಕೀಲರ ವಾದ ಆಲಿಸಿದ ಬಳಿಕ ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿತ್ತು.

ಅರ್ಜಿದಾರರ ಪರ ವಾದ ಮಂಡಿಸಿದ ಹೈಕೋರ್ಟ್‌ನ ಹಿರಿಯ ನ್ಯಾಯವಾದಿ, ದೇಶದ್ರೋಹ ಚಟುವಟಿಕೆಗಳ ನಿಯಂತ್ರಣ ಕಾಯ್ದೆ (ಯುಎಪಿಎ) ಅಡಿ ಪಿಎಫ್‌ಐ ನಿರ್ಬಂಧಿಸಿರುವುದು ಕಾನೂನು ಬಾಹಿರವಾಗಿದೆ. ಸಂಘಟನೆಯನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಿರುವುದು ಸಂವಿಧಾನ ವಿರೋಧಿ ಕ್ರಮವಾಗಿದೆ. ಕಾನೂನುಬಾಹಿರ ಸಂಘಟನೆ ಎನ್ನಲು ಕಾರಣ ನೀಡಿಲ್ಲ ಮತ್ತು ತಕ್ಷಣದಿಂದಲೇ ಅನ್ವಯವಾಗುವಂತೆ ನಿಷೇಧಿಸಿರುವುದಕ್ಕೆ ಪ್ರತ್ಯೇಕ ಕಾರಣ ನೀಡಿಲ್ಲ ಎಂದರು.

PFI Ban: Karnataka High Court upholds government ban on PFI

ಅಲ್ಲದೆ, ಪಿಎಫ್‌ಐ ತನ್ನ ವಾದಮಂಡನೆಗೆ ಕಾಲಾವಕಾಶ ನೀಡದೇ ಬ್ಯಾನ್ ಮಾಡಲಾಗಿದೆ. ಯುಎಪಿಎ ಕಾಯ್ದೆಗೆ ವಿರುದ್ಧವಾಗಿ ಆದೇಶ ಹೊರಡಿಸಲಾಗಿದೆ. ಹಾಗಾಗಿ ಸರ್ಕಾರದ ಆದೇಶ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ಕೇಂದ್ರ ಸರ್ಕಾರಿ ವಕೀಲರು ವಾದ ಮಂಡಿಸಿ, ಪಿಎಫ್‌ಐ ಸಂಘಟನೆಯಿಂದ ದೇಶವಿರೋಧಿ ಚಟುವಟಿಕೆ ನಡೆಯುತ್ತಿದೆ. ಅದು ಭಯೋತ್ಪಾದಕ ಸಂಘಟನೆಗಳ ಜೊತೆ ಸೇರಿ ದೇಶದಲ್ಲಿ ಹಿಂಸಾತ್ಮಕ ಕೃತ್ಯಗಳನ್ನು ಎಸಗುತ್ತಿದ್ದಾರೆ. ಸಂಘಟನೆಯ ಸದಸ್ಯರಿಂದ ರಾಷ್ಟ್ರದಲ್ಲಿ ಭೀತಿಯ ವಾತಾವರಣ ಸೃಷ್ಟಿಯಾಗಿದೆ. ಎಂದು ನಿಷೇಧವನ್ನು ಸಮರ್ಥಿಸಿಕೊಂಡರು.

ಅಷ್ಟೇ ಅಲ್ಲದೆ, ಎಲ್ಲ ಆಧಾರಗಳನ್ನು ಸಂಗ್ರಹ ಮಾಡಿದ ನಂತರವೇ ಸಕಾರಣವಾಗಿಯೇ ಪಿಎಫ್‌ಐ ನಿರ್ಬಂಧಿಸಲಾಗಿದೆ. ಇದನ್ನು ನಿಯಮ ಬಾಹಿರ ಕ್ರಮವೇನೂ ಇಲ್ಲ. ಎಲ್ಲದಕ್ಕೂ ಸಾಕ್ಷಿ ಪುರಾವೆಗಳಿವೆ. ಅಗತ್ಯ ಬಿದ್ದಾಗ ಅವುಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದರು.

ಅಷ್ಟೇ ಅಲ್ಲದೆ, ಪಾಕಿಸ್ತಾನ ಮೂಲದ ಹಲವು ಸಂಘಟನೆಗಳಲ್ಲದೆ, ಸ್ಟೂಡೆಂಟ್ ಇಸ್ಮಾಮಿಕ್ ಮೂವೆಂಟ್ ಆಫ್ ಇಂಡಿಯಾ -ಸಿಮಿ ಮತ್ತು ಜಮಾತ್ ಉಲ್ ಮುಜಾಹಿದ್ದೀನ್ ಬಾಂಗ್ಲಾದೇಶ್ (ಜೆಎಂಬಿ) ಸೇರಿ ಹಲವು ಸಂಘಟನೆಗಳ ಜೊತೆ ಪಿಎಫ್ಐಗೆ ನಿಕಟ ಸಂಪರ್ಕವಿದೆ ಎನ್ನಲಾಗಿದೆ.

ಕೇಂದ್ರ ಸರ್ಕಾರ ಕಳೆದ ಸೆಪ್ಟಂಬರ್ ನಲ್ಲಿ ಪಿಐಫ್ಐ ನಿಷೇಧ ಮಾಡಿದೆ. ಜೊತೆಗೆ ಇತ್ತೀಚೆಗೆ ಪಿಎಫ್‌ಐಗೆ ಸೇರಿದ ಕಚೇರಿಗಳು ಹಾಗೂ ಅವುಗಳ ಸದಸ್ಯರ ನಿವಾಸಗಳ ಮೇಲೆ ಎನ್‌ಐಎ ದಾಳಿ ನಡೆಸಿ ದಾಖಲೆ ಮತ್ತು ಮಹತ್ವದ ಸಾಕ್ಷಿಗಳನ್ನು ಸಂಗ್ರಹ ಮಾಡಿದೆ. ದಾಳಿ ವೇಳೆ 250ಕ್ಕೂ ಅಧಿಕ ಸದಸ್ಯರನ್ನು ಬಂಧಿಸಲಾಗಿತ್ತು.

English summary
PFI Ban in India: Karnataka High Court upholds central governments ban on pfi. dismisses petition that questioning ban. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X