ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸ್ನಾತಕೋತ್ತರ ಮೆಡಿಕಲ್ ಸೀಟು ಹಂಚಿಕೆ ಮುಂದಕ್ಕೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 28: ವೈದ್ಯ ಮತ್ತು ಸಂತವೈದ್ಯ ಸ್ನಾತಕೋತ್ತರ ಸೀಟುಗಳ ಹಂಚಿಕೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಮುಂದಿನ ವಿಚಾರಣೆವರೆಗೂ ತಡೆಹಿಡಿಯಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಶುಕ್ರವಾರ ಆರಂಭಗೊಳ್ಳಬೇಕಿದ್ದ ಆಪ್ಷನ್ ಎಂಟ್ರಿ ಪ್ರಕ್ರಿಯೆಯನ್ನು ಕೂಡ ಮುಂದೂಡಲಾಗಿದೆ. ಪಿಜಿ ಸಿಇಟಿ-2018ರಲ್ಲಿ ಕನಿಷ್ಠ ಅರ್ಹತಾ ಅಂಕ ಗಳಿಸಿರುವ ಅಭ್ಯರ್ಥಿಗಳಿಗೆ ವೈದ್ಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಅಂತಿಮ ಸುತ್ತಿನ ನೋಂದಣಿಗೆ ಅವಕಾಶ ಕಲ್ಪಿಸುವಂತೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ಸೂಚಿಸಿದೆ ಎಂದು ಕೆಇಎ ತಿಳಿಸಿದೆ.

ಪಿಜಿ ಮೆಡಿಕಲ್ ಶುಲ್ಕ ಶೇ.15ರಷ್ಟು ಹೆಚ್ಚಳ: ಸರ್ಕಾರಿ ಸೀಟಿಗೆ 5.6 ಲಕ್ಷ ಪಿಜಿ ಮೆಡಿಕಲ್ ಶುಲ್ಕ ಶೇ.15ರಷ್ಟು ಹೆಚ್ಚಳ: ಸರ್ಕಾರಿ ಸೀಟಿಗೆ 5.6 ಲಕ್ಷ

ಹೈಕೋರ್ಟ್ ಮಧ್ಯಂತರ ತೀರ್ಪು ನೀಡಿರುವ ಕಾರಣ ಎರಡನೇ ಸುತ್ತಿನ ಸೀಟು ಹಂಚಿಕೆಯನ್ನು ಮುಂದಿನ ವಿಚಾರಣೆವರೆಗೆ ಮುಂದೂಡಿದೆ.ಖಾಸಗಿ ವೈದ್ಯಕೀಯ ಕಾಲೇಜುಗಳ ಲಾಭಿಗೆ ಕೊನೆಗೂ ಮಣಿದಿರುವ ರಾಜ್ಯ ಸರ್ಕಾರ 2018-19ನೇ ಸಾಲಿನಲ್ಲಿ ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್ ಗಳ ಪ್ರವೇಶ ಶುಲ್ಕವನ್ನು ಶೇ.15ರಷ್ಟು ಹೆಚ್ಚಳ ಮಾಡಿದೆ.

PG medical seats second round counseling stayed

ಖಾಸಗಿ ವೈದ್ಯ-ದಂತ ವೈದ್ಯಕೀಯ ಕಾಲೇಜು ಗಳ ಒಕ್ಕೂಟ ಸರ್ಕಾರಕ್ಕೆ ಮನವಿ ಮಾಡಿತ್ತು. ಬಳಿಕ ಒಕ್ಕೂಟದ ಪ್ರತಿನಿಧಿಗಳೋಂದಿಗೆ ಈ ಹಿಂದೆ ಎರಡು ಸುತ್ತಿನ ಸಭೆ ನಡೆಸಿದ ಸರ್ಕಾರ ಇದು ಚುನಾವಣಾ ವರ್ಷವಾದ್ದರಿಂದ ಶುಲ್ಕ ಹೆಚ್ಚಳ ಸಾಧ್ಯವಿಲ್ಲವೆಂದು ತಿಳಿಸಿತ್ತು.

ಆದರೆ, ಕಾಲೇಜುಗಳು ಶುಲ್ಕ ಹೆಚ್ಚಿಸಲಿದ್ದರೆ ಸರ್ಕಾರದೊಂದಿಗೆ ಸೀಟು ಹಂಚಿಕೆ ಮತ್ತು ಶುಲ್ಕ ನಿಗದಿ ಒಪ್ಪಂದಕ್ಕೆ ಸಹಿ ಹಾಕುವುದಿಲ್ಲವೆಂದು ಪಟ್ಟು ಹಿಡಿದಾಗ ಅಂತಿಮ ಕ್ಷಣದಲ್ಲಿ ಶೇ.15ರಷ್ಟು ಶುಲ್ಕ ಹೆಚ್ಚಳಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದೆ.

English summary
As high court stayed on PG medical seats counseling, Karnataka Examination Authority postponed optional entry round. Earlier it was scheduled from April 27.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X