PGCET ಸೀಟು ಹಂಚಿಕೆ: ಆಪ್ಷನ್ ಬದಲಾವಣೆ, ತೆಗೆದುಹಾಕಲು ಅವಕಾಶ; ಫಲಿತಾಂಶದ ಪ್ರಮುಖ ದಿನಾಂಕಗಳಿವು

ಬೆಂಗಳೂರು: ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆಗೆ (PGCET 2026) ಸಂಬಂಧಿಸಿದಂತೆ ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶ ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಹತ್ವದ ಅಪ್ಡೇಟ್ ನೀಡಿದೆ. ಸೀಟು ಅದಲು ಬದಲಿಗೆ, ತೆಗೆದು ಹಾಕಲು ಸೆಪ್ಟೆಂಬರ್ 19ರವರೆಗೆ ಅವಕಾಶ ನೀಡಿದೆ. ಜೊತೆಗೆ ಸೀಟು ಹಂಚಿಕೆ ಅಂತಿಮ ಫಲಿತಾಂಶ ದಿನಾಂಕ ತಿಳಿಸಿದೆ.

ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಕಾರ್ಯ ನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಅವರು, ಪಿಜಿ ಸಿಇಟಿ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಸೆಪ್ಟಂಬರ್ 17ರಂದು ಬೆಳಿಗ್ಗೆ‌ 9ಗಂಟೆವರೆಗೆ ಸಮಯ ನೀಡಲಾಗಿದೆ. ಸೆಪ್ಟಂಬರ್17ರಂದು ಸಂಜೆ 6ರ ನಂತರ ಅಣಕು ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ.

PGCET 2026 Counselling

ಅಭ್ಯರ್ಥಿಗಳಿಗೆ ಅಗತ್ಯ ಇದ್ದಲ್ಲಿ ಆಯ್ಕೆಗಳನ್ನು ಅದಲು-ಬದಲು ಮಾಡಿಕೊಳ್ಳುವುದಕ್ಕೆ ಅಥವಾ ಹೊಸದಾಗಿ ಹಾಕಿಕೊಳ್ಳುವುದಕ್ಕೆ ಇಲ್ಲವೇ ತೆಗೆದುಹಾಕುವುದಕ್ಕೆ ಸೆಪ್ಟಂಬರ್ 19ರಂದು ಬೆಳಿಗ್ಗೆ 11ರವರೆಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ದಿನಾಂಕಗಳನ್ನು ಗಮನಿಸಿ

ಇನ್ನೂ ಸೆಪ್ಟೆಂಬರ್ 19 ರಂದು ಸಂಜೆ 5ಕ್ಕೆ PGCET ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಹಾಗೂ ಸೆಪ್ಟೆಂಬರ್ 21ರಂದು ಅಂತಿಮ ಫಲಿತಾಂಶ ಬಿಡುಗಡೆ ಮಾಡಲಾಗುವುದು. ಮಾರನೇ ದಿನ ಸೆಪ್ಟೆಂಬರ್ 22ರಿಂದ 24ರವರೆಗೆ ಚಾಯ್ಸ್ ಆಯ್ಕೆಗೆ ಅವಕಾಶ ನೀಡಲಾಗಿದೆ. ಚಾಯ್ಸ್ 1 ಮತ್ತು 2 ಆಯ್ಕೆ ಮಾಡಿದವರು ಸೆಪ್ಟೆಂಬರ್ 25 ರೊಳಗೆ ಶುಲ್ಕ ಪಾವತಿಸಬೇಕು. ಚಾಯ್ಸ್ - 1 ಆಯ್ಕೆ ಮಾಡಿದವರು ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಸೆಪ್ಟೆಂಬರ್ 26ರೊಳಗೆ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಅವರು ತಿಳಿಸಿದ್ದಾರೆ.

PGCET ಅಭ್ಯರ್ಥಿಗಳು ಎಂಬಿಎ, ಎಂಸಿಎ, ಎಂಇ, ಎಂ.ಟೆಕ್/ಎಂ ಆರ್ಕ್ ಕೋರ್ಸ್ ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಗೆ ಆಪ್ಷನ್ಸ್ ದಾಖಲಿಸಲು ಇಂದು ಸೆಪ್ಟೆಂಬರ್ 17ರಂದು ಮಧ್ಯಾಹ್ನ 3 ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ. ಈ ಮೊದಲು ಈ ಸಮಯ ಬೆಳಿಗ್ಗೆ ‌9ಕ್ಕೆ ಇತ್ತು. ಅಭ್ಯರ್ಥಿಗಳ ಮನವಿ ಮೇರೆಗೆ ಮಧ್ಯಾಹ್ನ 3 ಗಂಟೆವರೆಗೆ ವಿಸ್ತರಿಸಲಾಗಿದೆ. ಉಳಿದಂತೆ ಕೌನ್ಸೆಲಿಂಗ್ ವೇಳಾಪಟ್ಟಿಯಲ್ಲಿ ಯಾವ ಬದಲಾವಣೆಯೂ ಇರುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

UGNEET ಅಭ್ಯರ್ಥಿಗಳು ಗಮನಿಸಿ

ಪದವಿಪೂರ್ವ ರಾಷ್ಟ್ರೀಯ ಸಾಮಾನ್ಯ ಅರ್ಹತಾ ಪರೀಕ್ಷೆ (UGNEET 2026)ಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಪ್ರಾಧಿಕಾರ ಪ್ರಕಟಿಸಿದೆ.

ಸೀಟು ಹಂಚಿಕೆಯಾಗಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 19ರೊಳಗೆ ನಿಗದಿತ ಶುಲ್ಕ ಪಾವತಿಸಿ, ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು ಕಡ್ಡಾಯವಾಗಿ ಪ್ರವೇಶ ಪಡೆಯಬೇಕು. ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಲು ಸೆಪ್ಟಂಬರ್ 21 ಕೊನೆ ದಿನವಾಗಿದ್ದು, ಆ ದಿನ ಕಡ್ಡಾಯವಾಗಿ ಕಾಲೇಜು ಪ್ರವೇಶ ಪಡೆಯುವಂತೆ ಪ್ರಕಟಣೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+