ಪಿಜಿ ವೈದ್ಯಕೀಯ, ದಂತವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ: ವಿವರ ಇಲ್ಲಿದೆ
ಬೆಂಗಳೂರು, ಸೆ. 21: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ನಾತಕೋತ್ತರ ವೈದ್ಯಕೀಯ ಮತ್ತು ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್‌ಗಳ 2022-23ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.
ನೀಟ್ ಪಿಜಿ 2022 ಮತ್ತು ನೀಟ್ ಎಂಡಿಎಸ್ 2022 ರಲ್ಲಿ ಅರ್ಹತೆ ಪಡೆದಿರುವ ಹಾಗೂ ಅರ್ಹತಾ ಮಾನದಂಡಗಳನ್ನು ಪೂರೈಸುವ ಅರ್ಹ ಅಭ್ಯರ್ಥಿಗಳು ಪ್ರವೇಶ ಪಡೆಯಲು ಅರ್ಹರಾಗಿದ್ದಾರೆ. ಕರ್ನಾಟಕ ರಾಜ್ಯದಲ್ಲಿನ ಸ್ನಾತಕೋತ್ತರ ಪದವಿ, ಡಿಪ್ಲೊಮಾ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಪಿಜಿಇಟಿ 2022ಕ್ಕೆ ಆನ್‌ಲೈನ್ ಮೂಲಕ ನೋಂದಣಿ ಹಾಗೂ ಅರ್ಜಿ ಸಲ್ಲಿಸಲು ಪೋರ್ಟಲ್ ಈಗಾಗಲೇ ಕಾರ್ಯನಿರ್ವಹಿಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಸೆ.23ರ ಸಂಜೆ 4ರ ಒಳಗೆ ಆನ್‌ಲೈನ್ ಮೂಲಕ ನೋಂದಣಿ ಮಾಡಿ ಶುಲ್ಕ ಪಾವತಿಸಿ, ಅಂದು ರಾತ್ರಿ 11.59ರೊಳಗೆ ಅರ್ಜಿ ಸಲ್ಲಿಸಬಹುದು.

ಈ ಸಂಬಂಧ ವಿವರವಾದ ಅರ್ಹತಾ ಮಾನದಂಡ ಒಳಗೊಂಡ ಮಾಹಿತಿ ಪುಸ್ತಕವನ್ನು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in/ ನಲ್ಲಿ ಪ್ರಕಟಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.












Click it and Unblock the Notifications