ರಾಕ್ಷಸರನ್ನು ದೇವರೇ ಶಿಕ್ಷಿಸಲಿ: ಸದಾನಂದ ಗೌಡ್ರ ಟಾರ್ಗೆಟ್ ಯಾರು?
ಬೆಂಗಳೂರು, ಸೆ 29: ಫೋನ್ ಕದ್ದಾಲಿಕೆ ಪ್ರಕರಣದ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಬಿಜೆಪಿ ಮತ್ತು ಜೆಡಿಎಸ್ ನಡುವೆ ವಾಕ್ಸಮರಕ್ಕೆ ಇದು ಕಾರಣವಾಗಿದೆ.
ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳ ಫೋನ್ ಕದ್ದಾಲಿಕೆ ವಿಚಾರದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಾಲುಸಾಲು ಟ್ವೀಟ್ ಮಾಡಿದ್ದರು.
ಈಗ ಅದಕ್ಕೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಸೇರ್ಪಡೆಯಾಗಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಡಿವಿಎಸ್, " ರಾಕ್ಷಸರನ್ನು ದೇವರೇ ಶಿಕ್ಷಿಸಲಿ" ಎಂದು ಟ್ವೀಟ್ ಮಾಡಿದ್ದಾರೆ.

ಡಿವಿಎಸ್ ಮಾಡಿರುವ ಟ್ವೀಟ್ ಹೀಗಿದೆ, " ಕೆಲ ಸಮಯದ ಹಿಂದೆ ಗುರುಪೀಠ ಶ್ರೀ ಆದಿಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿಯವರ ಫೋನ್ ಕದ್ದಾಲಿಕೆ ನಡೆದಿದೆ ಅನ್ನೋ ಮಾಧ್ಯಮ ವರದಿಗಳು ಆಘಾತಕಾರಿಯಾದದ್ದು".
" ಅಂತಹ ಕೆಲಸ ಯಾರೇ ಮಾಡಿರಲಿ ಅವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ . ದೇವರು, ಗುರುಗಳು, ತಂದೆ ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ " ಎಂದು ಸದಾನಂದ ಗೌಡರು ಖಾರವಾಗಿ ಟ್ವೀಟ್ ಮಾಡಿದ್ದಾರೆ.
" ನನ್ನ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ಅದಕ್ಕೆ ಸಂಬಂಧಿಸಿದಂತೆ ರಾಜಕೀಯ ನಾಯಕರ ಹೇಳಿಕೆಗಳು ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿವೆ. ಎಲ್ಲಕ್ಕೂ ಮಿಗಿಲಾಗಿ ಸ್ವಾಮೀಜಿಗಳಲ್ಲಿ ಮೂಡಿರಬಹುದಾದ ಬೇಸರ ನನ್ನ ನೋವನ್ನು ಹೆಚ್ಚಿಸಿದೆ " ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದರು.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ












Click it and Unblock the Notifications