ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವನಾಥ್, ಶಂಕರ್, ಎಂಟಿಬಿ ಸಚಿವರಾಗಲು ಕಾನೂನು ತೊಡಕು?

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 01: ವಿಧಾನ ಪರಿಷತ್ ಸದಸ್ಯರಾದ ಆರ್. ಶಂಕರ್, ಎಂಟಿಬಿ ನಾಗರಾಜ್ ಮತ್ತು ಎಚ್. ವಿಶ್ವನಾಥ್ ಸಚಿವರಾಗಲು ಕಾನೂನು ತೊಡಗು ಎದುರಾಗಲಿದೆಯೇ?. ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ಮೂವರು ಯಡಿಯೂರಪ್ಪ ಸಂಪುಟ ಸೇರಬಹುದು ಎಂದು ಅಂದಾಜಿಸಲಾಗಿದೆ.

Recommended Video

KS Eshwarappa ಅವರಿಗೆ ಕೊರೊನ , ಆಸ್ಪತ್ರೆಗೆ ದಾಖಲು | Oneindia Kannada

ಉಪ ಚುನಾವಣೆಯಲ್ಲಿ ಹೊಸಕೋಟೆಯಲ್ಲಿ ಸೋತ ಎಂಟಿಬಿ ನಾಗರಾಜ್, ಹುಣಸೂರಿನಲ್ಲಿ ಸೋಲುಕಂಡ ಎಚ್. ವಿಶ್ವನಾಥ್ ಪರಿಷತ್ ಸದಸ್ಯರಾಗಿದ್ದಾರೆ. ಚುನಾವಣಾ ಕಣಕ್ಕಿಳಿಯದೆ ಟಿಕೆಟ್ ಬಿಟ್ಟುಕೊಟ್ಟಿದ್ದ ಆರ್. ಶಂಕರ್ ಸಹ ಈಗ ಎಂಎಲ್‌ಸಿ.

ಕೋಲಾರ: ಎಂಟಿಬಿ ಆ್ಯಂಡ್ ಟೀಮ್ ಪರ ಸಚಿವ, ಸಂಸದರ ಬ್ಯಾಟಿಂಗ್ಕೋಲಾರ: ಎಂಟಿಬಿ ಆ್ಯಂಡ್ ಟೀಮ್ ಪರ ಸಚಿವ, ಸಂಸದರ ಬ್ಯಾಟಿಂಗ್

ಆದರೆ, ಈ ಮೂರು ನಾಯಕರು ಸಚಿವರಾಗಲು ಕಾನೂನು ತೊಡಕುಗಳಿವೆಯೇ?. ಮೂವರು ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲು ಅವಕಾಶ ನೀಡಬಾರದು ಎಂದು ಕರ್ನಾಟಕ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆಯಾಗಿದೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆ? ಅಥವಾ ನಾಯಕತ್ವ ಬದಲಾವಣೆ?ರಾಜ್ಯ ಸಚಿವ ಸಂಪುಟ ವಿಸ್ತರಣೆ? ಅಥವಾ ನಾಯಕತ್ವ ಬದಲಾವಣೆ?

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆ ಮಾಡಬಹುದು ಎಂಬ ಸುದ್ದಿಗಳು ಹಬ್ಬಿವೆ. ಆದರೆ ಯಾವಾಗ ಎಂಬುದು ಇನ್ನೂ ಖಚಿತವಾಗಿಲ್ಲ.

ಮಧ್ಯಂತರ ಆದೇಶ ನೀಡಿಲ್ಲ

ಮಧ್ಯಂತರ ಆದೇಶ ನೀಡಿಲ್ಲ

ವಕೀಲ ಎ. ಎಸ್. ಹರೀಶ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಮುಖ್ಯ ನ್ಯಾಯಮೂರ್ತಿ ಎ. ಎಸ್. ಓಕಾ ಮತ್ತು ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ಪೀಠ, 'ಮೂವರು ಸಚಿವರಾಗುತ್ತಿದ್ದಾರೆ ಎಂಬುದಕ್ಕೆ ಏನು ಖಾತರಿ ಇದೆ?' ಎಂದು ಪ್ರಶ್ನಿಸಿದೆ. ಯಾವುದೇ ಮಧ್ಯಂತರ ಆದೇಶ ನೀಡಿಲ್ಲ.

ಸಾಂವಿಧಾನಿಕ ಮಾನ್ಯತೆ ಹೊಂದಿಲ್ಲ

ಸಾಂವಿಧಾನಿಕ ಮಾನ್ಯತೆ ಹೊಂದಿಲ್ಲ

ಎಚ್. ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್ ಸಂಪುಟಕ್ಕೆ ಸೇರ್ಪಡೆಯಾಗಲು ಸಾಂವಿಧಾನಿಕ ಮಾನ್ಯತೆ ಹೊಂದಿಲ್ಲ. ಈ ಶಾಸಕರಿಗೆ ಪ್ರಮಾಣ ವಚನ ಬೋಧಿಸಿದರೆ ಸಂವಿಧಾನದ ಉಲ್ಲಂಘನೆಯಾಗಲಿದೆ ಎಂದು ಅರ್ಜಿಯಲ್ಲಿ ಎ. ಎಸ್. ಹರೀಶ್ ಉಲ್ಲೇಖಿಸಿದ್ದಾರೆ.

ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದರು

ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದರು

ಈ ಮೂವರು ಶಾಸಕರಾಗಿದ್ದಾಗ ವಿಧಾನಸಭೆಯ ಸ್ಪೀಕರ್ ಅವರನ್ನು ಅಮಾನತು ಮಾಡಿದ್ದರು. ಇದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ವೇಳೆ ಸುಪ್ರೀಂಕೋರ್ಟ್‌ನಲ್ಲಿ ಆಯ್ಕೆ, ಮರು ಆಯ್ಕೆ ಮತ್ತು ನಾಮಕರಣ ಎಂಬ ಪದಗಳ ಕುರಿತು ಚರ್ಚೆ ನಡೆದಿತ್ತು.ಚುನಾವಣೆಯಲ್ಲಿ ಮರು ಆಯ್ಕೆ ಆಗದ ಹೊರತು ಸಾಂವಿಧಾನಿಕ ಹುದ್ದೆ ಅಲಂಕರಿಸಲು ಅವಕಾಶವಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಸಚಿವರಾಗಲು ಅರ್ಹತೆ ಹೊಂದಿಲ್ಲ

ಸಚಿವರಾಗಲು ಅರ್ಹತೆ ಹೊಂದಿಲ್ಲ

ಮೂವರು ಚುನಾವಣೆಯಲ್ಲಿ ಮರು ಆಯ್ಕೆಯಾಗಿಲ್ಲ. ಆದ್ದರಿಂದ, ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲು ಅರ್ಹತೆ ಹೊಂದಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ. ಹೈಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಈ ಕುರಿತು ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.

English summary
PIL filed in high court of Karnataka not to allow legislative council members MTB Nagaraj, R.Shankar and H. Vishwanath to take oath as minister in B. S. Yediyurappa cabinet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X