ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿದ್ದರಾಮಯ್ಯ ಯಾತ್ರೆ ವಿರುದ್ಧ ಹೈಕೋರ್ಟ್‌ಗೆ ಪಿಐಎಲ್!

|
Google Oneindia Kannada News

ಬೆಂಗಳೂರು, ಜನವರಿ 05 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನವ ಕರ್ನಾಟಕ ನಿರ್ಮಾಣ ಯಾತ್ರೆ ವಿರುದ್ಧ ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ. ಯಾತ್ರೆ ವಿರುದ್ಧ ಕಳೆದ ವಾರ ಎಸಿಬಿಗೆ ದೂರು ನೀಡಲಾಗಿತ್ತು.

ಬೆಂಗಳೂರಿನ ಹನುಮಂತನಗರದ ನಿವಾಸಿ ಕೀರ್ತಿವರ್ಧನ ಜೋಶಿ ಎಂಬುವವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಯಾತ್ರೆಗೆ ಸರ್ಕಾರದ ಬೊಕ್ಕಸದ ಹಣವನ್ನು ಖರ್ಚು ಮಾಡಲಾಗುತ್ತಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನವಕರ್ನಾಟಕ ನಿರ್ಮಾಣ ಯಾತ್ರೆಚಿಕ್ಕಮಗಳೂರು ಜಿಲ್ಲೆಯಲ್ಲಿ ನವಕರ್ನಾಟಕ ನಿರ್ಮಾಣ ಯಾತ್ರೆ

state tuor

ರಾಜ್ಯ ಸರ್ಕಾರದ ನಾಲ್ಕೂವರೆ ವರ್ಷದ ಸಾಧನೆ ಹೆಸರಿನಲ್ಲಿ ಸಿದ್ದರಾಮಯ್ಯ ಡಿಸೆಂಬರ್ 13ರಿಂದ ರಾಜ್ಯದಲ್ಲಿ ಸಮಾವೇಶಗಳನ್ನು ನಡೆಸುತ್ತಿದ್ದಾರೆ. ಬೊಕ್ಕಸದ ಹಣವನ್ನು ಸಿದ್ದರಾಮಯ್ಯ ತಮ್ಮ ಸ್ವಾರ್ಥ ಮತ್ತು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದಾರೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಹೊಸ ವರ್ಷದ ಆರಂಭದ ದಿನವೇ ಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯಹೊಸ ವರ್ಷದ ಆರಂಭದ ದಿನವೇ ಸಂಕಷ್ಟಕ್ಕೆ ಸಿಲುಕಿದ ಸಿದ್ದರಾಮಯ್ಯ

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಯಾತ್ರೆ ನಡೆಯುತ್ತಿದೆ. ಆದರೆ, ಯಾತ್ರೆಯಲ್ಲಿ ಸರ್ಕಾರದ ಸಾಧನೆ ಬಗ್ಗೆ ಮಾತನಾಡುವುದು ಬಿಟ್ಟು, ವಿರೋಧ ಪಕ್ಷದವನ್ನು ಟೀಕಿಸುತ್ತಿದ್ದಾರೆ ಎಂದು ಅರ್ಜಿಯಲ್ಲಿ ಆರೋಪ ಮಾಡಲಾಗಿದೆ.

ಸಮಾವೇಶಕ್ಕೆ ಮುಖ್ಯಮಂತ್ರಿಗಳು ಖರ್ಚು ಮಾಡಿದ ಹಣವನ್ನು ಅವರಿಂದ ವಾಪಸ್ ಪಡೆಯಬೇಕು. ಸಾರ್ವಜನಿಕರ ಹಣ ದುರುಪಯೋಗ ಮಾಡಿಕೊಂಡ ಬಗ್ಗೆ ವಿಚಾರಣೆ ನಡೆಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಇಂದು ಸಿದ್ದರಾಮಯ್ಯ ಅವರ ನವ ಕರ್ನಾಟಕ ನಿರ್ಮಾಣ ಯಾತ್ರೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಚಾರ ನಡೆಸಲಿದೆ. ಮೂಡಿಗೆರೆ, ತರೀಕೆರೆಯಲ್ಲಿ ಸಮಾವೇಶಗಳನ್ನು ಉದ್ದೇಶಿಸಿ ಸಿದ್ದರಾಮಯ್ಯ ಭಾಷಣ ಮಾಡಲಿದ್ದಾರೆ.

English summary
A public interest litigation was filed before the Karnataka High Court against Chief Minister Siddaramaiah Nava Karnataka Nirmana yatra. Bengaluru based Keerti Vardhan Joshi alleged that, Chief Minister spending public money for elections campaign.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X