ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೂಪುರ್ ಶರ್ಮಾ ವಿರುದ್ಧ ಕ್ರಮ ಕೋರಿ ಹೈಕೋರ್ಟ್‌ಗೆ ಪಿಐಎಲ್

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಜೂ.20: ಇಸ್ಲಾಂ ಧರ್ಮದ ಸಂಸ್ಥಾಪಕ ಪ್ರವಾದಿ ಮೊಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ವಿರುದ್ಧ ದೇಶಾದ್ಯಂತ ಪ್ರತಿಭಟನೆ ಮುಂದುವರಿದಿದೆ.

ಅದರ ಮಧ್ಯೆಯೇ ಆಕೆಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಸರ್ಕಾರ ಮತ್ತು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ಅಕೋಶ ನಗರದ ನಿವಾಸಿ ಕೆ.ಕೆ. ಶರೀಫುದ್ದೀನ್ ಹೈಕೋರ್ಟ್‌ನಲ್ಲಿ ಪಿಐಎಲ್ ಹೂಡಲಾಗಿದೆ.

ಅದರಲ್ಲಿ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ನಗರ ಪೊಲೀಸ್ ಆಯುಕ್ತರು ಮತ್ತು ಅಶೋಕ ನಗರ ಠಾಣಾ ಇನ್ಸ್‌ಪೆಕ್ಟರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿ ಹೈಕೋರ್ಟ್ ನ ಮುಂದೆ ವಿಚಾರಣೆಗೆ ಬರಬೇಕಿದೆ.

PIL filed in HC seeking action against Nupur Sharma

ನೂಪರ್ ಶರ್ಮಾ ವಿರುದ್ಧ ದೂರು ನೀಡಿದ್ದರೂ, ಅಶೋಕ ನಗರದ ಠಾಣಾ ಇನ್ಸ್‌ಪೆಕ್ಟರ್ ಆ ದೂರು ಪರಿಗಣಿಸಿ ಎಫ್‌ಐಆರ್ ದಾಖಸಿಲ್ಲ ಹಾಗೂ ನೂಪುರ್ ಶರ್ಮಾ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ. ಆದ್ದರಿಂದ ತಮ್ಮ ದೂರು ಆಧರಿಸಿ ನುಪೂರ್ ಶರ್ಮಾ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶಿಸಬೇಕು ಎಂದು ನ್ಯಾಯಾಲಯವನ್ನು ಅರ್ಜಿದಾರರು ಕೋರಿದ್ದಾರೆ.

ಮೇ 27ರಂದು ಇಂಗ್ಲೀಷ್ ಖಾಸಗಿ ಸುದ್ದಿ ವಾಹಿನಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಕೋಮು ಸೌಹಾರ್ದತೆ ಕದಡುವ ಉದ್ದೇಶದಿಂದ ಇಂತಹ ಹೇಳಿಕೆ ನೀಡಿದ್ದಾರೆ. ಇದರಿಂದ ದೇಶದಲ್ಲಿ ಮುಸ್ಲಿಂ ಸಮುದಾಯದವರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಅಲ್ಲದೆ, ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ದೇಶದಾದ್ಯಂತ ಪ್ರತಿಭಟನೆಗಳು ನಡೆದಿವೆ. ಈ ವೇಳೆ ಕೋಮು ಸೌಹಾರ್ದತೆ ಕದಡಿದೆ ಹಾಗೂ ಶಾಂತಿಭಂಗ ಉಂಟಾಗಿದೆ. ಇದರಿಂದ ನೂಪುರ್ ಶರ್ಮಾ ವಿರುದ್ದ 30ರಂದು ದೂರು ದಾಖಲಿಸಲಾಗಿದೆ.

Recommended Video

ಬಾಲ್ಯದಲ್ಲಿ ಮೋದಿ ಮೊಸಳೆ ಹಿಡಿದು ಮನೆಗೆ ತಂದಿದ್ರಂತೆ!! ಪಠ್ಯಪುಸ್ತಕದಲ್ಲಿ ಮೋದಿ ಸಾಹಸ | Oneindia Kannada

English summary
PIL has been filed in the High Court seeking legal action against BJP National EX spokesperson Nupur Sharma, who made derogatory remarks against Prophet Mohammed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X