ಕರ್ನಾಟಕ: ಕೂರ್ಗ್‌ನ ಭೌಗೋಳಿಕ ರಾಜಕೀಯ ಸ್ವಾಯತ್ತತೆ ಪರಿಗಣಿಸಿ ಆಯೋಗ ರಚನೆಗಾಗಿ ಹೈಕೋರ್ಟ್‌ಗೆ ಅರ್ಜಿ
ಬೆಂಗಳೂರು, ಏಪ್ರಿಲ್ 06: ಕರ್ನಾಟಕ ರಾಜ್ಯದ ಭಾಗವಾದ ಕೂರ್ಗ್‌ಗೆ ಭೌಗೋಳಿಕ ರಾಜಕೀಯ ಸ್ವಾಯತ್ತತೆಯನ್ನು ಪರಿಗಣಿಸುವಂತೆ ಆಯೋಗವೊಂದನ್ನು ರಚನೆ ಮಾಡುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಮಾಜಿ ಸಂಸದರಾದ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಆಯೋಗ ರಚನೆಗೆ ಕೋರಿ ರಾಜ್ಯ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. 1956 ರವರೆಗೆ, ರಾಜ್ಯ ಮರು ಸಂಘಟನೆ ಕಾಯಿದೆ ಜಾರಿಗೆ ಬರುವ ಮೊದಲು, ಕೊಡವ ಜನಾಂಗದವರು ರಾಜ್ಯದ ಕೂರ್ಗ್ ನ 'ಸಿ' ರಾಜ್ಯವೆಂದು ಗುರುತಿಸಿಕೊಂಡಿತ್ತು.

ಕರ್ನಾಟಕ ಮರುಸಂಘಟನೆ ಕಾಯಿದೆ ಜಾರಿಗೆ ಬಂದ ಮೇಲೆ ರಾಜ್ಯದ ಮೈಸೂರು ಜಿಲ್ಲೆ ವ್ಯಾಪ್ತಿಯಲ್ಲಿ ವಿಲೀನಗೊಂಡಿತು. ಸದ್ಯ ಕೊಡವ ಜನಾಂಗದ ಜನರ ಎಲ್ಲಾ ಭರವಸೆಗಳು ಮಣ್ಣುಪಾಲಾದವು ಎಂದು ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.
ಏಪ್ರಿಲ್ 17ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ
ವಕೀಲರಾದ ಸತ್ಯ ಸಬರ್ವಾಲ್ ಅವರ ಮೂಲಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಆ ಮನವಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಅವರ ಪೀಠದ ಮುಂದೆ ಪ್ರಸ್ತಾಪಿಸಲಾಯಿತು. ಸದ್ಯ ಈ ಅರ್ಜಿ ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಿ ಹೈಕೋರ್ಟ್ ನ್ಯಾಯಪೀಠ ಆದೇಶಿಸಿತು.
ಅರ್ಜಿಯಲ್ಲಿ, 1950 ರಲ್ಲಿ ಭಾರತೀಯ ಸಂವಿಧಾನವನ್ನು ಅಂಗೀಕರಿಸಿದ ನಂತರ ಕೂರ್ಗ್‌ನ ಪಾರ್ಟ್ ಸಿ ಸ್ಟೇಟ್ ಆಕ್ಟ್ 1951ರ ಅಡಿಯಲ್ಲಿ ಕೂರ್ಗ್ ಲೆಜಿಸ್ಲೇಟಿವ್ ಕೌನ್ಸಿಲ್ ಅಸ್ತಿತ್ವದಲ್ಲಿಲ್ಲ ಎಂದು ಹೇಳಲಾಯಿತು. ಆ ಬಳಿಕ ರಾಜ್ಯ ಪುನರ್-ಸಂಘಟನೆ ಕಾಯಿದೆ 1956 ಜಾರಿ ಬಳಿಕ ಕೂರ್ಗ್ ಅನ್ನು ವಿಶಾಲ ಮೈಸೂರಿನೊಂದಿಗೆ ಸೇರ್ಪಡೆ ಮಾಡಲಾಯಿತು. ಇದರಿಂದ ಕೊಡವರ ಆಸೆ ಆಕಾಂಕ್ಷೆಗಳಿಗೆ ನೀರುಣಿಸಿದಂತಾಯಿತು.

1952 ರಿಂದ 1956 ರವರೆಗೆ ಕೂರ್ಗ್ ಒಟ್ಟು 24 ಸದಸ್ಯರನ್ನು ಒಳಗೊಂಡ ಶಾಸಕಾಂಗ ಸಭೆ ಮತ್ತು ಕ್ರಿಯಾತ್ಮಕ ಸರ್ಕಾರವನ್ನು ಹೊಂದಿತ್ತು ಎಂದು ಅರ್ಜಿದಾರರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.
ಈ ರಾಜ್ಯಗಳಲ್ಲಿ ಸ್ವಾಯತ್ತ ಮಂಡಳಿ ಇವೆ
ಭಾರತೀಯ ಸಂವಿಧಾನದ 244ನೇ ವಿಧಿಯಲ್ಲಿರುವ ಅಂಶಗಳ ಪ್ರಕಾರ, ಸಂವಿಧಾನದ ಆರನೇ ಅನುಸೂಚಿಯಡಿ ಆಯಾ ರಾಜ್ಯಗಳಲ್ಲಿ ಸ್ವಾಯತ್ತತೆಯನ್ನು ನೀಡಲಾಗಿರುವ ಸ್ವಾಯತ್ತ ಆಡಳಿತ ವಿಭಾಗಗಳ ರಚನೆಗೆ ಅವಕಾಶ ನೀಡುತ್ತದೆ ಎಂದು ಹೇಳಿದೆ. ಸಂವಿಧಾನ ಹೇಳಿರುವಂತೆ ಸ್ವಾಯತ್ತ ಜಿಲ್ಲಾ ಕೌನ್ಸಿಲ್‌ಗಳು ಭಾರತದ ಈಶಾನ್ಯ ರಾಜ್ಯಗಳಾದ ಲಡಾಖ್‌ನಲ್ಲಿ ಎರಡು ಸ್ಥಾಪನೆಯಾಗಿವೆ. ಪಶ್ಚಿಮ ಬಂಗಾಳದಲ್ಲಿ ಒಂದು ಬಿಟ್ಟರೆ ಉಳಿದೆಲ್ಲವು ಪ್ರಸ್ತುತ, ಅಸ್ಸಾಂ, ಮೇಘಾಲಯ, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಸೇರಿ ಒಟ್ಟು 10 ಸ್ವಾಯತ್ತ ಮಂಡಳಿಗಳನ್ನು ಆರನೇ ಅನುಸೂಚಿಯಡಿ ರಚಿಸಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಸಂವಿಧಾನದ ಆರನೇ ಅನುಸೂಚಿಯಿಂದಾಗಿ ಈಶಾನ್ಯ ರಾಜ್ಯಗಳಲ್ಲಿ ಸ್ಥಳೀಯ ಮತ್ತು ಬುಡಕಟ್ಟು ಗುಂಪುಗಳು ಗಮನಾರ್ಹ ಸ್ವಾಯತ್ತತೆಯನ್ನು ಹೊಂದಿವೆ. ಇದು ಅಲ್ಲಿನ ಬೆಳವಣಿಗೆಯಾಗಿದೆ. ದೇಶದ ಅಸ್ಸಾಂ, ಮಿಜೋರಾಂ ಮತ್ತು ಮೇಘಾಲಯಗಳು ಮೂರು ಸ್ವಾಯತ್ತ ಜಿಲ್ಲಾ ಮಂಡಳಿಗಳನ್ನು ಹೊಂದಿದ್ದರೆ ತ್ರಿಪುರಾದಲ್ಲಿ ಒಂದು ಮಂಡಳಿ ಸ್ಥಾಪನೆ ಆಗಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಈ ಎಲ್ಲ ಅಂಶಗಳಿಂದ ಸಾರ್ವಜನಿಕ ಹಿತಾಸಕ್ತಿ ಮತ್ತು ಸಮುದಾಯದ ಇತಿಹಾಸ, ಸಂಸ್ಕೃತಿಯನ್ನು ರಕ್ಷಿಸಬೇಕೆಂದು ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಕೊಡವ ನ್ಯಾಷನಲ್ ಕೌನ್ಸಿಲ್‌ನ ಆಕಾಂಕ್ಷೆಗಳು ಮತ್ತು ಕಾನೂನುಬದ್ಧ ಬೇಡಿಕೆಗಳನ್ನು ಪರಿಶೀಲಿಸಲು ಆಯೋಗ ರಚನೆ ಮಾಡುವಂತೆ ಕೇಳಿಕೊಳ್ಳಲಾಗಿದೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications