ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯವಾಗಲಿದೆ!

ಬೆಂಗಳೂರು, ಜ. 19 : ಬೆಂಗಳೂರು ನಗರದಲ್ಲಿ ಬೈಕ್‌ ಸವಾರರ ಜೊತೆ ಹಿಂಬದಿಯಲ್ಲಿ ಕೂರುವವರು ಸಹ ಹೆಲ್ಮೆಟ್‌ ಧರಿಸಬೇಕಾಗುತ್ತದೆ. ಸಾರಿಗೆ ಇಲಾಖೆ ಈ ಕುರಿತು ಚಿಂತನೆ ನಡೆಸಿದ್ದು, ಪ್ರಸ್ತಾವನೆ ಈಗಾಗಲೇ ಸರ್ಕಾರಕ್ಕೆ ಸಲ್ಲಿಕೆಯಾಗಿದೆ.

ಸದ್ಯ, ಕರ್ನಾಟಕದ ಏಳು ಪ್ರಮುಖ ನಗರಗಳಲ್ಲಿ ಬೈಕ್‌ ಸವಾರರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು ಎಂಬ ನಿಯಮ ಜಾರಿಗೊಳಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಹಿಂಬದಿ ಸವಾರಿಗೂ ಹೆಲ್ಮೆಟ್‌ ಕಡ್ಡಾಯಗೊಳಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. [ಇನ್ನು ಗ್ರಾಮದಲ್ಲೂ ಹೆಲ್ಮೆಟ್ ಧರಿಸಿ]

Helmet

ಬೈಕ್‌ನಲ್ಲಿ ಹಿಂಬಂದಿ ಕೂರುವವರು ಹೆಲ್ಮೆಟ್‌ ಧರಿಸದೆ ಇರುವುದರಿಂದ ಅಪಘಾತಗಳಲ್ಲಿ ಹೆಚ್ಚಿನ ಹಿಂಬದಿ ಸವಾರರು ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ಅವರಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲು ತೀರ್ಮಾನಿಸಿ, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. [ಬೈಕ್ ಸವಾರರ ತಲೆಗೆ ಹೆಲ್ಮೆಟ್ ಹಾಕಿದ ಸರ್ಕಾರ!]

ದೇಶದ ಹಲವು ಪ್ರಮುಖ ನಗರ­ಗಳಲ್ಲಿ ಹಿಂಬದಿ ಸವಾರರೂ ಕಡ್ಡಾಯ­ವಾಗಿ ಹೆಲ್ಮೆಟ್‌ ಧರಿಸಬೇಕು ಎಂಬ ನಿಯಮ ಜಾರಿಯಲ್ಲಿದೆ. ರಾಜ್ಯದಲ್ಲಿಯೂ ಸಾರ್ವಜ­ನಿ­ಕರ ಅಭಿಪ್ರಾಯ ಸಂಗ್ರಹಿಸಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. [ಈ ಪ್ರಸ್ತಾವನೆಗೆ ಜನರ ವಿರೋಧ]

ಕೇಂದ್ರ ಸಾರಿಗೆ ಇಲಾಖೆಯು ಹೆಲ್ಮೆಟ್‌ ಕಡ್ಡಾಯಗೊಳಿಸುವಂತೆ ಎಲ್ಲಾ ರಾಜ್ಯಗಳಿಗೆ ಈಗಾಗಲೇ ಅಧಿಸೂಚನೆ ಹೊರಡಿಸಿದ್ದು, ದೆಹಲಿ, ಚಂಡೀಗಢ, ಮಹಾರಾಷ್ಟ್ರ ಮತ್ತು ಗುಜರಾತ್‌ ರಾಜ್ಯಗಳಲ್ಲಿ ಈ ನಿಯಮ ಜಾರಿಯಲ್ಲಿದೆ. ಕರ್ನಾಟಕದಲ್ಲಿಯೂ ಇದು ಜಾರಿಗೆ ಬರಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+