Pink whatsapp:ಅಪ್ಪಿತಪ್ಪಿಯೂ ಪಿಂಕ್ ವಾಟ್ಸ್ಅಪ್ ಡೌನ್‌ಲೋಡ್ ಮಾಡಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ.!, ಏನಿದು?-ಇಲ್ಲಿದೆ ಮಾಹಿತಿ
ಬೆಂಗಳೂರು, ಜನವರಿ, 24: ಪಿಂಕ್ ಕಲರ್ ಯಾವುದೇ ವಸ್ತಗಳನ್ನು ಆಗಿರಬಹುದು ಅವುಗಳು ಎಂತಹವರನ್ನು ತನ್ನತ್ತ ಸೆಳೆದೆಬಿಡುತ್ತವೆ. ಹಾಗೆಯೇ ಇದೀಗ ಪಿಂಕ್ ವ್ಯಾಟ್ಸಪ್ ಬಂದಿದ್ದು, ಇದನ್ನು ಬಳಕೆ ಮಾಡುವವರು ಅಪಾಯಕ್ಕೆ ಸಿಲುಕುತ್ತಾರೆ ಎನ್ನುವ ಮಾಹಿತಿಯೊಂದು ಲಭ್ಯವಾಗಿದೆ. ಹಾಗಾದರೆ ಈ ಬಗ್ಗೆ ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆ ಹೇಳಿದ್ದೇನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಆಕರ್ಷಣೆಯ ಗುಲಾಬಿ ಬಣ್ಣದ ವಾಟ್ಸ್ಅಪ್ (Apk) ಬಳಸುವವರನ್ನು ಗುರಿಯಾಗಿಸಿ ಮೋಸಗಾರರು ಡೇಟಾ ಕದಿಯಲು, ಇಲ್ಲವೇ Android ಮೊಬೈಲ್ ಹ್ಯಾಕ್ ಮಾಡಲು ಬಳಸಿಕೊಳ್ಳುತ್ತಾರೆ ಜಾಗೃತೆಯಿಂದಿರಿ ಎಂದು ಕರ್ನಾಟಕ ರಾಜ್ಯದ ಪೊಲೀಸ್ ತನ್ ಟ್ವಿಟರ್ ಖಾತೆಯಲ್ಲಿ ತಿಳಿಸಿದೆ.

ಸೈಬರ್ ವಂಚನೆಯ ಮತ್ತೊಂದು ಮುಖವನ್ನು ಕರ್ನಾಟಕ ಪೊಲೀಸರು ಪತ್ತೆಹಚ್ಚಿದ್ದು, ಯಾವುದೇ ಕಾರಣಕ್ಕೂ ಗುಲಾಬಿ ಬಣ್ಣದ ವಾಟ್ಸ್ಆ್ಯಪ್ ಅಥವಾ ಪಿಂಕ್ ವಾಟ್ಸ್ಆ್ಯಪ್ ಅನ್ನು ಇನ್ಸ್ಟಾಲ್ ಮಾಡಬೇಡಿ ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದಾರೆ.
ಗುಲಾಬಿ ಬಣ್ಣದ ವಾಟ್ಸ್ ಆಪ್ ಅಪಾಯಕಾರಿ ಎಚ್ಚರಿಕೆಯಿಂದಿರಿ.
— ಕರ್ನಾಟಕ ರಾಜ್ಯ ಪೊಲೀಸ್ Karnataka State Police (@KarnatakaCops) January 23, 2024
ಆಕರ್ಷಣೆಯ ಗುಲಾಬಿ ಬಣ್ಣದ ವಾಟ್ಸ್ಅಪ್ (Apk) ಬಳಸುವವರನ್ನು ಗುರಿಯಾಗಿಸಿ ಮೋಸಗಾರರು ಡೇಟಾ ಕದಿಯಲು ಇಲ್ಲವೇ Android ಮೊಬೈಲ್ ಹ್ಯಾಕ್ ಮಾಡಲು ಬಳಸಿಕೊಳ್ಳುತ್ತಾರೆ.
ಜಾಗೃತೆಯಿಂದಿರಿ..#CyberSecurity #KSP_ಸುವರ್ಣಸಂಭ್ರಮ #GoldenJubileeOf_KSP pic.twitter.com/AgdjRLXnNf
ಈ ಬಗ್ಗೆ ಟ್ವೀಟ್‌ನಲ್ಲಿ ಎಚ್ಚರಿಕೆ ಸಂದೇಶ ಪ್ರಕಟಿಸಿರುವ ಕರ್ನಾಟಕ ರಾಜ್ಯ ಪೊಲೀಸ್, ಗುಲಾಬಿ ಬಣ್ಣದ ವಾಟ್ಸ್ಆ್ಯಪ್ ಅಪಾಯಕಾರಿ ಎಚ್ಚರಿಕೆಯಿಂದಿರಿ. ಆಕರ್ಷಣೆಯ ಗುಲಾಬಿ ಬಣ್ಣದ ವಾಟ್ಸ್ಆ್ಯಪ್ (Apk) ಬಳಸುವವರನ್ನು ಗುರಿಯಾಗಿಸಿ ಮೋಸಗಾರರು ಡೇಟಾ ಕದಿಯಲು ಇಲ್ಲವೇ ಆ್ಯಂಡ್ರಾಯ್ಡ್ ಮೊಬೈಲ್ ಹ್ಯಾಕ್ ಮಾಡಲು ಬಳಸಿಕೊಳ್ಳುತ್ತಾರೆ. ಜಾಗೃತೆಯಿಂದಿರಿ ಎಂದು ತಿಳಿಸಿದೆ.
ನೀವು ಅಪ್ಪಿತಪ್ಪಿಯೂ ವಾಟ್ಸ್ಆ್ಯಪ್ ಪಿಂಕ್ ಇನ್ಸ್ಟಾಲ್ ಮಾಡಿದರೆ ಸೈಬರ್ ವಂಚಕರು ನಿಮ್ಮ ಫೋಟೊ, ಕಾಂಟ್ಯಕ್ಟ್, ನೆಟ್ ಬ್ಯಾಂಕಿಂಗ್ ಪಾಸ್‌ವರ್ಡ್‌ಗಳು, ಪ್ರಮುಖ ಸಂದೇಶಗಳನ್ನು ಹ್ಯಾಕ್ ಮಾಡುವ ಸಾಧ್ಯೆತೆ ಹೆಚ್ಚಿರುತ್ತದೆ ಎಂದು ಕರ್ನಾಟಕ ಪೊಲೀಸ್ ಎಚ್ಚರಿಕೆ ಸಂದೇಶ ರವಾನಿಸಿದೆ.
ವಂಚಕರು ನಿಮ್ಮ ಮೊಬೈಲ್‌ನ ಸಂಪೂರ್ಣ ಡೇಟಾವನ್ನು ಕದಿಯುವ ಸಾಧ್ಯತೆಯಿದೆ. ಆದ್ದರಿಂದ ಯಾರೂ ಕೂಡ ವಾಟ್ಸ್ಆ್ಯಪ್ ಪಿಂಕ್ ಬಳಸಬೇಡಿ. ಒಂದು ವೇಳೆ ಯಾವುದೇ ರೀತಿಯ ಸೈಬರ್ ವಂಚನೆಗೆ ಒಳಗಾದರೆ 1930 ಗೆ ಕರೆ ಮಾಡಿ ಎಂದು ಪೊಲೀಸರು ಸಲಹೆ ನೀಡಿದ್ದಾರೆ.
ಇನ್ನು ವಾಟ್ಸ್ಆ್ಯಪ್ ಪಿಂಕ್ ವಾಟ್ಸ್ಆ್ಯಪ್ನ ಹೊಸ ಆವೃತ್ತಿ ಅಥವಾ ವಾಟ್ಸ್ಆ್ಯಪ್ ಅಧಿಕೃತ ಬಿಡುಗಡೆ ಅಲ್ಲ. ಬದಲಿಗೆ, ಇದು ಬಳಕೆದಾರರನ್ನು ವಂಚಿಸುವ, ಮೋಸಗೊಳಿಸುವ ದೊಡ್ಡ ಹಗರಣ ಆಗಿದೆ. ಇದರ ಲಿಂಕ್ ಇರುವ ಸಂದೇಶಗಳನ್ನು ಸಾಮಾನ್ಯವಾಗಿ ಸ್ಪ್ಯಾಮ್ ಸಂದೇಶಗಳ ಮೂಲಕ ಹರಡಲಾಗುತ್ತದೆ. ಜೊತೆಗೆ ಲಿಂಕ್ ಲಗತ್ತಿಸಿ ಅದನ್ನು ಕ್ಲಿಕ್ ಮಾಡುವಂತೆ ಸೂಚಿಸಿರಲಾಗುತ್ತದೆ.
ಲಿಂಕ್ ಕ್ಲಿಕ್ ಮಾಡಿದರೆ ಬಳಕೆದಾರರನ್ನು ವೆಬ್‌ಸೈಟ್‌ಗೆ ಕರೆದೊಯ್ಯಲಾಗುತ್ತದೆ. ಅಲ್ಲಿ ಅವರು ವಾಟ್ಸ್ಆ್ಯಪ್ ಪಿಂಕ್ ಅನ್ನು ಡೌನ್‌ಲೋಡ್ ಮಾಡಲು ಸೂಚಿಸಲಾಗುತ್ತದೆ. ಆದರೂ ಹೊಸ ವೈಶಿಷ್ಟ್ಯಗಳು ಅಥವಾ ಥೀಮ್‌ಗಳನ್ನು ಸ್ವೀಕರಿಸುವ ಬದಲು, ಬಳಕೆದಾರರ ಮೊಬೈಲ್‌ಗಳಲ್ಲಿ ಅವರ ಗಮನಕ್ಕೆ ಬಾರದಂತೆ ದುರುದ್ದೇಶಪೂರಿತ ಸಾಫ್ಟ್‌ವೇರ್ ಡೌನ್‌ಲೋಡ್ ಆಗುತ್ತದೆ. ಈ ಸಾಫ್ಟ್‌ವೇರ್ ಮೂಲಕ ದತ್ತಾಂಶಗಳನ್ನು ಕದಿರುವ ಸಾಧ್ಯೆತೆ ಹೆಚ್ಚಿರುತ್ತದೆ. ಆದ್ದರಿಂದ ಎಚ್ಚರಿಕೆಯಿಂದಿರುವುದು ಸೂಕ್ತ ಎಂದು ತಿಳಿಸಿದೆ.
-
Dawood Ibrahim: "ರಿಯಲ್ ಡಾನ್ ದಾವೂದ್ ಇಬ್ರಾಹಿಂ" ಸ್ಟಿಕ್ಕರ್ ಹಾಕಿಸಿದ್ದ ಬಸ್ ಚಿಕ್ಕಮಗಳೂರಿನಲ್ಲಿ ಪೊಲೀಸ್ ವಶಕ್ಕೆ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications