ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಲ್ಬರ್ಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗುವುದೇ?

|
Google Oneindia Kannada News

ಗುಲ್ಬರ್ಗ, ಮೇ 26 : ಗುಲ್ಬರ್ಗ ವಿಮಾನ ನಿಲ್ದಾಣ ನಿರ್ಮಾಣ ಪ್ರಸ್ತಾವನೆಯನ್ನು ಸರ್ಕಾರ ಕೈ ಬಿಟ್ಟಿಲ್ಲ ಎಂದು ಮೂಲಸೌಕರ್ಯ ಖಾತೆ ಸಚಿವ ರೋಷನ್ ಬೇಗ್ ಹೇಳಿದ್ದಾರೆ. ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಗುಲ್ಬರ್ಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದು, ನಂತರ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಭಾನುವಾರ ಗುಲ್ಬರ್ಗಕ್ಕೆ ಭೇಟಿ ನೀಡಿದ್ದ ಸಚಿವ ರೋಷನ್ ಬೇಗ್ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಗುಲ್ಬರ್ಗದಲ್ಲಿ ವಿಮಾನ ನಿಲ್ದಾಣ ಮಾಡುವ ಯೋಜನೆಯನ್ನು ಸರ್ಕಾರ ಹಿಂಪಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಕಾಮಗಾರಿ ನಿರ್ಮಾಣದ ಉಸ್ತುವಾರಿ ವಹಿಸಿಕೊಂಡಿದ್ದ ಆರ್ ಎಚ್ಎಐ ಪಿಪಿಪಿ ಮಾದರಿಯಲ್ಲಿ ಕಾಮಗಾರಿ ನಡೆಸಲು ಹಿಂದೇಟು ಹಾಕುತ್ತಿದೆ ಎಂದರು.

Roshan Baig

ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಗುಲ್ಬರ್ಗಕ್ಕೆ ಭೇಟಿ ನೀಡಿ ವಿಮಾನ ನಿಲ್ದಾಣಕ್ಕೆ ಮೀಸಲಾಗಿರುವ ಸ್ಥಳದ ಬಗ್ಗೆ ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ನೀಡಲಿದೆ. ವರದಿ ಬಂದ ನಂತರ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ರೋಷನ್ ಬೇಗ್ ಹೇಳಿದರು.

ಸರ್ಕಾರ ವಿಮಾನ ನಿಲ್ದಾಣ ಕಾಮಗಾರಿಯನ್ನು ಯಾವುದಾದದರೂ ಸಂಸ್ಥೆಗೆ ನೀಡಬೇಕೆ? ಅಥವ ಪಿಪಿಪಿ ಮಾದರಿಯಲ್ಲಿ ನಡೆಸಬೇಕೆ ಎಂಬ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದು ಹೇಳಿದರು. ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನೀಡುವ ವರದಿಯನ್ನು ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು. [ಗುಲ್ಬರ್ಗ ವಿಮಾನ ನಿಲ್ದಾಣಕ್ಕೆ ವಿಘ್ನ?]

ಲಾಡ್ ಹೇಳಿದ್ದೇನು : ಮೂಲ ಸೌಕರ್ಯ ಖಾತೆ ಮಾಜಿ ಸಚಿವ ಸಂತೋಷ್ ಲಾಡ್, ಶಿವಮೊಗ್ಗ, ಗುಲ್ಬರ್ಗ, ಬಿಜಾಪುರ, ಹಾಸನ ವಿಮಾನ ನಿಲ್ದಾಣ ಸ್ಥಾಪನೆಯ ಸಹಭಾಗಿತ್ವ ವಹಿಸಿಕೊಳ್ಳಲು ಖಾಸಗಿ ಕಂಪನಿಗಳು ಮುಂದಾಗುತ್ತಿಲ್ಲ. ಆದ್ದರಿಂದ ಯೋಜನೆ ಸ್ಥಗಿತಗೊಳ್ಳಬಹುದು ಎಂದು ಹೇಳಿದ್ದರು. ಗುಲ್ಬರ್ಗದಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗಾಗಿ ಖಾಸಗಿ ಕಂಪನಿಯೊಂದಿಗೆ ಸರ್ಕಾರ ಒಪ್ಪಂದ ಮಾಡಿಕೊಂಡಿತ್ತು. ಶೇ.50ರಷ್ಟು ಪ್ರಕ್ರಿಯೆ ನಂತರ ಸಂಸ್ಥೆ ಯೋಜನೆಯಿಂದ ಹಿಂದೆ ಸರಿದಿತ್ತು.

English summary
The Karnataka government has not dropped the proposal for starting a domestic airport in Gulbarga said, Minister for Infrastructure Development Roshan Baig.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X