MBBS ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಸಾಲದ ಪ್ರಮಾಣ 5 ಲಕ್ಷ ರೂ. ಗೆ ಏರಿಸಲು ಚಿಂತನೆ: ಜಮೀರ್ ಅಹಮದ್

ಬೆಂಗಳೂರು, ಆಗಸ್ಟ್‌ 22: ಎಂಬಿಬಿಎಸ್ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ಸಮುದಾಯದ ಮೆರಿಟ್ ವಿದ್ಯಾರ್ಥಿಗಳಿಗೆ ಸಾಲದ ಪ್ರಮಾಣ ಐದು ಲಕ್ಷ ರೂ.ಗೆ ಹೆಚ್ಚಿಸಲು ಚಿಂತನೆ ನಡೆಸಲಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ 2023-24 ನೇ ಸಾಲಿನ ಯೋಜನೆಗಳಿಗೆ ಚಾಲನೆ ನೀಡಿದ ಅವರು, ಪ್ರಸ್ತುತ ಕೆ ಎಂ ಡಿಸಿ ವತಿಯಿಂದ ಸರ್ಕಾರಿ ಕೋಟಾ ದಡಿ ಸೀಟು ಪಡೆಯುವ ಮೆರಿಟ್ ವಿದ್ಯಾರ್ಥಿಗಳಿಗೆ ಮೂರು ಲಕ್ಷ ರೂ. ಸಾಲ ನೀಡಲಾಗುತ್ತಿದ್ದು, ಬೇಡಿಕೆ ಮೇರೆಗೆ ಅದನ್ನು ಐದು ಲಕ್ಷ ರೂ. ಗಳಿಗೆ ಏರಿಸುವ ಬಗ್ಗೆ ಚಿಂತನೆ ನಡೆಸಿದ್ದು ಬಡ ಕುಟುಂಬಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಇದರಿಂದ ಅನುಕೂಲವಾಗಲಿದೆ ಎಂದು ಹೇಳಿದರು.

rs-5-lakh-for-the-meritorious-mbbs-students-said-zameer

ಅದೇ ರೀತಿ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ವಿದೇಶ ದಲ್ಲಿ ಮಾನ್ಯತೆ ಪಡೆದ ವಿಶ್ವ ವಿದ್ಯಾಲಯ ಗಳಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡ ಬಯಸಿದರೆ ಪ್ರಸ್ತುತ 20 ಲಕ್ಷ ರೂ. ಶಿಕ್ಷಣ ಸಾಲ ನೀಡಲಾಗುತ್ತಿದ್ದು, ಇದೀಗ ಎನ್ಎಂಡಿಸಿ ನೆರವಿನೊಂದಿಗೆ ಹತ್ತು ಲಕ್ಷ ಹೆಚ್ಚುವರಿ ಯಾಗಿ ಒಟ್ಟು 30 ಲಕ್ಷ ರೂ.ಸಾಲ ಸೌಲಭ್ಯ ಒದಗಿಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಕಳೆದ ಮೂರು ವರ್ಷ ಗಳಿಂದ ನ್ಯಾಷನಲ್ ಮೈನಾರಿಟಿ ಡೆವಲಪ್ಮೆಂಟ್ ಬೋರ್ಡ್ ನ ಯೋಜನೆಗಳು ರಾಜ್ಯಕ್ಕೆ ಪಡೆಯುತ್ತಿರಲಿಲ್ಲ. ಇತ್ತೀಚಿಗೆ ಸಭೆ ನಡೆಸಿ ನಿರ್ದೇಶನ ನೀಡಿ ಪತ್ರ ವ್ಯವಹಾರ ನಡೆಸಿದ ನಂತರ ವಾರ್ಷಿಕ 50 ಕೋಟಿ ರೂ. ಅನುದಾನ ರಾಜ್ಯಕ್ಕೆ ಈ ವರ್ಷ ದೊರೆಯುತ್ತಿದೆ ಎಂದು ತಿಳಿಸಿದರು.

ನಿಗಮದ ವತಿಯಿಂದ ಇಂದು ಎಂಟು ಯೋಜನೆಗೆ ಚಾಲನೆ ನೀಡಿದ್ದು ಆ ಪೈಕಿ ಅರಿವು ಸೇರಿ ನಾಲ್ಕು ಹಳೇ ಯೋಜನೆ ಮತ್ತೆ ಆರಂಭಿಸಲಾಗಿದೆ. ನಾಲ್ಕು ಹೊಸ ಯೋಜನೆ ಪ್ರಾರಂಭಿಸಲಾಗುತ್ತಿದೆ. ನಿರುದ್ಯೋಗಿ ಗಳಿಗೆ ಕಾರು ಸೇರಿ ನಾಲ್ಕು ಚಕ್ರ ವಾಹನ ಖರೀದಿಗೆ 3 ಲಕ್ಷ ಸಬ್ಸಿಡಿ ನೀಡುವ ಸ್ವಾವಲಂಬಿ, ತಾಂತ್ರಿಕ ಕೌಶಲ್ಯ ತರಬೇತಿ ನೀಡುವ ಶ್ರಮಶಕ್ತಿ, ವಿಧವೆ, ವಿಚ್ಚೆಧಿತ, ಅವಿವಾಹಿತ ಮಹಿಳೆಯರಿಗೆ 50 ಸಾವಿರ ಸಾಲ ನೀಡುವ ಹಾಗೂ ವೃತ್ತಿ ಪ್ರೋತ್ಸಾಹ ಯೋಜನೆಗೆ ಚಾಲನೆ ನೀಡಿದ್ದೇವೆ ಎಂದು ಹೇಳಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶಕ ಜಿಲಾನಿ ಮೊಕಾಶಿ, ಕೆ ಎಂ ಡಿಸಿ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ನಜೀರ್ ಉಪಸ್ಥಿತರಿದ್ದರು

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+