ಬಾಂಬ್ ಇಟ್ಟ ಪ್ರಕರಣ : ಗಿರೀಶ್ ಮಟ್ಟಣ್ಣನವರ್ ಖುಲಾಸೆ

Posted By:
Subscribe to Oneindia Kannada

ಬೆಂಗಳೂರು, ಜೂನ್ 27 : ಶಾಸಕರ ಭವನದಲ್ಲಿ ಬಾಂಬ್ ಇಟ್ಟ ಪ್ರಕರಣದಲ್ಲಿ ಗಿರೀಶ್ ಮಟ್ಟಣ್ಣನವರ್ ಸೇರಿದಂತೆ ಮೂವರು ಆರೋಪಿಗಳನ್ನು ಕೋರ್ಟ್ ಖುಲಾಸೆಗೊಳಿಸಿದೆ. ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.

ಸೋಮವಾರ 66ನೇ ಸೆಷನ್ಸ್ ನ್ಯಾಯಾಲಯ ಈ ಕುರಿತು ತೀರ್ಪು ಪ್ರಕಟಿಸಿದೆ. ಶಾಸಕರ ಭವನದಲ್ಲಿ ಬಾಂಬ್ ಇಟ್ಟಿರುವುದಾಗಿ ಹುಸಿ ಕರೆ ಮಾಡಿದ್ದ ಪ್ರಮುಖ ಆರೋಪಿ ಗಿರೀಶ್ ಮಟ್ಟಣ್ಣನವರ್ ಮತ್ತು ಇತರ ಇಬ್ಬರನ್ನು ಖುಲಾಸೆಗೊಳಿಸಿದ ಆದೇಶ ಹೊರಡಿಸಿದೆ. [ಕಳಸಾ ಗೋಡೆ ಧ್ವಂಸ ಗುಲ್ಲು, ಗಿರೀಶ್ ವಿರುದ್ಧ ಕೇಸ್]

girish nattannavar

ಆಗಿದ್ದೇನು? : 2003ರ ನವೆಂಬರ್‌ 1ರಂದು ವಿಧಾನಸೌಧದ ಪಕ್ಕದ ಶಾಸಕರ ಭವನದ 5 ಮಹಡಿಯಲ್ಲಿ ಬಾಂಬ್ ಇಟ್ಟಿರುವುದಾಗಿ ಕರೆ ಬಂದಿತ್ತು. ಈ ಸಂಬಂಧ ತನಿಖೆ ನಡೆಸಿದ ಪೊಲೀಸರು ಮಟ್ಟಣ್ಣನವರ್‌ ಹಾಗೂ ಇತರ ಆರೋಪಿಗಳನ್ನು ಬಂಧಿಸಿದ್ದರು.

ಭ್ರಷ್ಟ ರಾಜಕಾರಣಿಗಳನ್ನು ಬೆದರಿಸಲು ಅಂದು ಪೊಲೀಸ್ ಅಧಿಕಾರಿಯಾಗಿದ್ದ ಗಿರೀಶ್ ಮಟ್ಟಣ್ಣನವರ್ ಬಾಂಬ್ ಇಟ್ಟಿರುವುದಾಗಿ ಕರೆ ಮಾಡಿದ್ದರು. ಈ ಪ್ರಕರಣದ ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bengaluru Sessions Court on Monday discharged Girish Mattannavar who planted the bombs in the Legislator's near Vidhana Soudha on 2003.
Please Wait while comments are loading...