ಪ್ಲಾಸ್ಟಿಕ್ ನಿಷೇಧದ ಬಗ್ಗೆ ಆಕ್ಷೇಪಣೆಗಳಿದ್ದರೆ ಸಲ್ಲಿಸಿ
ಬೆಂಗಳೂರು, ನವೆಂಬರ್ 04 : ಸಚಿವ ಸಂಪುಟದಲ್ಲಿ ಸಭೆಯಲ್ಲಿ 40 ಮೈಕ್ರಾನ್‍ಗಿಂತಲೂ ಕಡಿಮೆ ಪ್ರಮಾಣದ ಎಲ್ಲಾ ರೀತಿಯ ಪ್ಲಾಸ್ಟಿಕ್ ಉತ್ಪನ್ನಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಾಣಿಕೆ, ಮಾರಾಟ, ಹಾಗೂ ಬಳಕೆಯನ್ನು ನಿಷೇಧಿಸಲು ಒಪ್ಪಿಗೆ ನೀಡಲಾಗಿದೆ. ಈ ಕುರಿತು ಕರಡು ಅಧಿಸೂಚನೆಯನ್ನು ಸರ್ಕಾರ ಹೊರಡಿಸಿದೆ.
'ರಾಜ್ಯದಲ್ಲಿ ಎಲ್ಲಾ ರೀತಿಯ ಪ್ಲಾಸ್ಟಿಕ್ ಬಳಕೆ ನಿಷೇಧಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದ್ದು ಈಗಾಗಲೇ ಕರಡು ನಿರ್ದೇಶನದ ಪ್ರತಿಯನ್ನು ಪ್ರಕಟಿಸಿ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ' ಎಂದು ಅರಣ್ಯ ಸಚಿವ ರಮಾನಾಥ್ ರೈ ಹೇಳಿದ್ದಾರೆ. [ರಾಜ್ಯದಲ್ಲಿ ಪ್ಲಾಸ್ಟಿಕ್ ನಿಷೇಧಕ್ಕೆ ಸಚಿವ ಸಂಪುಟದ ಒಪ್ಪಿಗೆ]

ಕರಡು ಪ್ರತಿಯಲ್ಲೇನಿದೆ? : ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್‍ಗಳು, ಭಿತ್ತಿಪತ್ರಗಳು, ತೋರಣಗಳು, ಫ್ಲೆಕ್ಸ್‌ಗಳು, ಬಾವುಟಗಳು, ಪ್ಲಾಸ್ಟಿಕ್ ತಟ್ಟೆಗಳು, ಪ್ಲಾಸ್ಟಿಕ್ ಲೋಟಗಳು, ಪ್ಲಾಸ್ಟಿಕ್ ಹಾಳೆಗಳ ವ್ಯಾಪಕ ಬಳಕೆಯಿಂದಾಗಿ ಪರಿಸರಕ್ಕೆ ಹಾನಿ ಉಂಟಾಗುತ್ತಿದೆ. [ನೀವು ತಿನ್ನುವ ಅಕ್ಕಿ ಯಾವುದರಿಂದ ಮಾಡಿದ್ದು!?]
ಪ್ಲಾಸ್ಟಿಕ್ ತ್ಯಾಜ್ಯಗಳು ಚರಂಡಿಗಳ, ಮೋರಿಗಳ ನೀರಿನ ಹರಿವಿಗೆ ತಡೆ ಉಂಟುಮಾಡುತ್ತಿವೆ. ಇಂತಹ ಸಮಸ್ಯೆಗಳನ್ನು ತಡೆಯಲು ಪರಿಸರ (ಸಂರಕ್ಷಣೆ) ಕಾಯ್ದೆ 1986ರ ಸೆಕ್ಷನ್ ಪ್ರಕಾರ ಪರಮಾಧಿಕಾರ ಬಳಸಿಕೊಂಡು, ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಭಿತ್ತಿಪತ್ರ, ತೋರಣ, ಫೆಕ್ಸ್, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ಲೋಟಗಳ ಬಳಕೆಯನ್ನು ನಿಷೇಧಿಸಲು ಪ್ರಸ್ತಾಪಿಸಲಾಗಿದೆ.[ಪ್ಲಾಸ್ಟಿಕ್ ಅತಿ ಬಳಕೆ ಮನುಕುಲಕ್ಕೆ ತಂದಿಟ್ಟ ಅಪಾಯ]
ಯಾವುದೇ ವ್ಯಕ್ತಿ, ಸಂಘ-ಸಂಸ್ಥೆಗಳು ಕರಡು ನಿರ್ದೇಶನದಲ್ಲಿರುವ ಸೂಚನೆಯ ಬಗ್ಗೆ ತಮ್ಮ ಪ್ರತಿರೋಧವನ್ನು ವ್ಯಕ್ತಪಡಿಸುವುದಾದರೆ ಅಥವಾ ತಮ್ಮ ಸಲಹೆಗಳು ನೀಡುವುದಾದರೆ ಅವುಗಳನ್ನು ಲಿಖಿತವಾಗಿ ಈ ಅಧಿಸೂಚನೆಯು ರಾಜ್ಯಪತ್ರದಲ್ಲಿ ಪ್ರಕಟಗೊಂಡ 30 ದಿನಗಳವೊಳಗೆ ಸಲ್ಲಿಸಬೇಕು.
ಆಕ್ಷೇಪಣೆ ಸಲ್ಲಿಸಲು ವಿಳಾಸ : ಸರ್ಕಾರದ ಕಾರ್ಯದರ್ಶಿ (ಪರಿಸರ ಮತ್ತು ಜೀವಿಶಾಸ್ತ್ರ) ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ, ನಂ 709, 4ನೇ ದ್ವಾರ, 7ನೇಮಹಡಿ, ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀಧಿ, ಬೆಂಗಳೂರು - 560001.
ನಿರ್ದೇಶನಗಳೇನು? : ಯಾವುದೇ ವ್ಯಕ್ತಿ, ಅಂಗಡಿ ಮಾಲೀಕ, ಮಾರಾಟಗಾರ, ಸಗಟುಮಾರಾಟಗಾರ ಅಥವಾ ಚಿಲ್ಲರೆ ವ್ಯಾಪಾರಿ, ವ್ಯಾಪಾರಿ ಮತ್ತು ಮಾರಾಟಗಾರರು, ಯಾವುದೇ ದಪ್ಪದ ಯಾವುದೇ ರೀತಿಯ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಮುಂತಾದವನ್ನು ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ.
ಅಧಿಕೃತವಾಗಿ ರಫ್ತು ಮಾಡುವ ಉದ್ದೇಶಕ್ಕೆ ಹಾಗೂ ಕಾಯ್ದಿರಿಸಲಾದ ರಫ್ತು ಆರ್ಡರ್ ಮೇರೆಗೆ ಉತ್ಪಾದಿಸಲಾದ ಪ್ಲಾಸ್ಟಿಕ್ ಕ್ಯಾರಿಬ್ಯಾಗ್‍ಗಳ ತಯಾರಿಕೆ ಮೇಲಿನ ಅಧಿಸೂಚನೆಯು ಅನ್ವಯವಾಗುವುದಿಲ್ಲ. ನರ್ಸರಿ, ಡೈರಿ (ಹೈನು ಉತ್ಪನ್ನಗಳು), ಆರೋಗ್ಯ ಕ್ಷೇತ್ರ ಮುಂತಾದ ವಿಭಾಗಗಳಲ್ಲಿ ಉಪಯೋಗಿಸಲ್ಪಡುವ ಪ್ಲಾಸ್ಟಿಕ್ ಕೈಚೀಲ ಅಥವಾ ಪ್ಲಾಸ್ಟಿಕ್ ಉತ್ಪನ್ನಗಳು ಸಹ ಈ ಅಧಿಸೂಚನೆಯಿಂದ ಹೊರತಾಗಿವೆ.












Click it and Unblock the Notifications