Plastic Park: ಕರ್ನಾಟಕ 2 ಜಿಲ್ಲೆಗಳಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ, 15 ಲಕ್ಷ ಉದ್ಯೋಗ ಸೃಷ್ಟಿ
Karnataka Industry: ದೇಶದಲ್ಲಿ ಪ್ಲಾಸ್ಟಿಕ್ ಉದ್ಯಮ ವಲಯವು ಲಕ್ಷಾಂತರ ಉದ್ಯೋಗ ಸೃಷ್ಟಿಸಿದೆ. ಈ ಕ್ಷೇತ್ರದ ಬೆಳವಣಿಗೆ ಉತ್ತೇಜಿಸುವ ಮಹತ್ತರ ಉದ್ದೇಶದಿಂದ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಉದ್ಯಮಿಗಳು ತಮಗೆ ಎಲ್ಲಿ ಬೇಕೋ ಅಲ್ಲಿ ಪ್ಲಾಸ್ಟಿಕ್ ಪಾರ್ಕ್ ಅರ್ಜಿ ಹಾಕಿಕೊಳ್ಳಬಹುದು. ಸರ್ಕಾರ ತಮಗೆ ತ್ವರಿತವಾಗಿ ಭೂಮಿ ಕೊಡುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಅವರು ಶನಿವಾರ ಹೇಳಿದರು. ಯಾವ ಜಿಲ್ಲೆಗಳಿಗೆ ಆದ್ಯತೆ ಸಿಗಲಿದೆ?, ಎಷ್ಟು ಉದ್ಯೋಗ ಸೃಷ್ಟಿ? ಯೋಜನೆ ಎಲ್ಲ ಮಾಹಿತಿ ಇಲ್ಲಿದೆ.
ನಗರದಲ್ಲಿ ನಡೆದ ಪ್ಲಾಸ್ಟ್ ಇಂಡಿಯಾ-2026 ಪ್ರದರ್ಶನ ಮೇಳದ ಪೂರ್ವಭಾವಿ ಉದ್ಘಾಟನಾ ಸಮಾವೇಶದಲ್ಲಿ ಸಚಿವರು ಭಾಗವಹಿಸಿದ್ದರು. ಕರ್ನಾಟಕದ ಪ್ಲಾಸ್ಟಿಕ್ ಉದ್ಯಮಿಗಳಿಗಾಗಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. 12ನೇ ವರ್ಷದ ಈ ಅಂತಾರಾಷ್ಟ್ರೀಯ ಸಮಾವೇಶವು ಮುಂದಿನ ವರ್ಷ 2026 ಫೆಬ್ರವರಿ 5ರಿಂದ 10ರವರೆಗೆ ದೆಹಲಿಯ ಭಾರತ ಮಂಟಪದಲ್ಲಿ ಜರುಗಲಿದೆ ಎಂದರು.

ಸಮಾವೇಶದಲ್ಲಿ ಮಾತನಾಡಿದ ಅವರು, ಕರ್ನಾಟಕದ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದ ಮಂಗಳೂರು ಮತ್ತು ಉತ್ತರ ಕರ್ನಾಟಕದ ವಿಜಯಪುರ ಜಿಲ್ಲೆಯ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ 200 ಎಕರೆಯಲ್ಲಿ ಸುಸಜ್ಜಿತ 'ಪ್ಲಾಸ್ಟಿಕ್ ಪಾರ್ಕ್' ಸ್ಥಾಪಿಸಲಾಗುವುದು. ಉದ್ಯಮಿಗಳು ಇವೆರಡರ ಪೈಕಿ ತಮಗೆ ಬೇಕಾದಲ್ಲಿ ಅಲ್ಲಿ ಅರ್ಜಿ ಹಾಕಿದರೆ ನಿಗದಿತ ಭೂಮಿ ಒದಗಿಸಲಾಗುತ್ತದೆ ಎಂದು ಭರವಸೆ ನೀಡಿದರು. ಈ ಮೂಲಕ ರಾಜ್ಯದಲ್ಲಿ ಪ್ರಮುಖ ಉದ್ಯಮವೊಂದು ಉದಯಿಸಲಿದೆ ಎಂದು ಅವರು ತಿಳಿಸಿದರು.
ಪ್ಲಾಸ್ಟಿಕ್ ವಲಯಕ್ಕೆ ಬೇಕಾದ ಪ್ರತಿಭಾವಂತ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸಂಶೋಧನೆಗಾಗಿ ಕೇಂದ್ರೀಯ ಪೆಟ್ರೋಕೆಮಿಕಲ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯು (ಸಿಐಪಿಇಟಿ) ಇಲ್ಲಿ ತನ್ನ ಕ್ಯಾಂಪಸ್ ತೆರೆಯಲಿದೆ.
15 ಲಕ್ಷ ಉದ್ಯೋಗ ಸೃಷ್ಟಿ..!
ಪ್ಲಾಸ್ಟಿಕ್ ಉದ್ಯಮ ವಲಯದ ಬೆಳವಣಿಗೆಯಿಂದ ಭಾರತದಲ್ಲಿ ಈಗಾಗಲೇ 40 ಲಕ್ಷ ಜನರಿಗೆ ಉದ್ಯೋಗ ದೊರಕಿದೆ. ಇದೇ ಉದ್ಯಮದಿಂದ ಮುಂದಿನ ಒಂದು ವರ್ಷದಲ್ಲಿ ಇನ್ನೂ 15 ಲಕ್ಷ ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ರಾಜ್ಯದಲ್ಲಿ ಹೂಡಿಕೆದಾರರಿಗೆ ಆದ್ಯತೆ ಇದೆ. ಇಲ್ಲಿ ಸಾಕಷ್ಟು ಅವಕಾಶಗಳು ಇವೆ. ರಾಜ್ಯದ ಸಮಗ್ರ ಕೈಗಾರಿಕಾ ಬೆಳವಣಿಗೆಯ ಗುರಿ ನಮ್ಮ ಸರ್ಕಾರಕ್ಕೆ ಇದೆ ಎಂದ ಅವರು ಹೂಡಿಕೆದಾರರಿಗೆ ಮುಕ್ತ ಆಹ್ವಾನ ನೀಡಿದರು.
ಪ್ಲಾಸ್ಟಿಕ್ ಲೋಹವು ಜೀವನದ ಅವಿಭಾಜ್ಯ ಅಂಗವಾಗಿದೆ. ಹೀಗಾಗಿ ಗುಣಮಟ್ಟದ ಉತ್ಪನ್ನಗಳ ತಯಾರಿಕೆಗೆ ಆದ್ಯತೆ ಕೊಡಬೇಕಾಗಿದೆ. ರಾಷ್ಟ್ರ ಮಟ್ಟದಲ್ಲಿ ಈ ವಲಯದ ವಹಿವಾಟು 2026ರಲ್ಲಿ ವಾರ್ಷಿಕವಾಗಿ 50 ಬಿಲಿಯನ್ ಡಾಲರ್ ಮುಟ್ಟುವುದು ನಿಚ್ಚಳವಾಗಿದೆ ಎಂದು ತಿಳಿಸಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications