ಪ್ರಧಾನಿ ಬಳಿ ನಿಯೋಗ: ಸಿದ್ದು, ಬಿಎಸ್ವೈ ಅದೇ ರಾಗ ಅದೇ ಹಾಡು

Written By:
Subscribe to Oneindia Kannada

ಬೆಂಗಳೂರು, ಡಿ 11: ಮಹದಾಯಿ ನದಿನೀರು ಹಂಚಿಕೆ ಮತ್ತು ರಾಜ್ಯ ಎದುರಿಸುತ್ತಿರುವ ಭೀಕರ ಬರದ ಪರಿಸ್ಥಿತಿಯನ್ನು ಪ್ರಧಾನಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲು ಸಮಯಾವಕಾಶ ಕೋರಲಾಗಿತ್ತು, ಆದರೆ ಮೋದಿ ರಾಜ್ಯದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತ ಪಡಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಪ್ರಧಾನಮಂತ್ರಿಗಳನ್ನು ದೂರುವ ಮೊದಲು ರಾಜ್ಯ ಸರಕಾರ ಪೂರ್ವ ತಯಾರಿ ಮಾಡಿಕೊಳ್ಳಲಿ ಎಂದು ತಿರುಗೇಟು ನೀಡಿದ್ದಾರೆ. (ಸಿದ್ದು ಸಚಿವ ಸಂಪುಟ ಸಭೆ ನಿರ್ಣಯಗಳು)

ನಗರದಲ್ಲಿ ಶನಿವಾರ (ಡಿ 10) ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸಿದ್ದರಾಮಯ್ಯ, ಪ್ರಧಾನಮಂತ್ರಿಗಳಿಗೆ ಒಕ್ಕೂಟ ವ್ಯವಸ್ಥೆಯ ಮೇಲೆ ನಂಬಿಕೆಯಿಲ್ಲದಿರುವುದು ದುರಂತ. ರಾಜ್ಯವನ್ನು ಪ್ರಧಾನಿ ನಿರ್ಲಕ್ಷಿಸುತ್ತಿದ್ದಾರೆಂದು ಸಿಎಂ ಆರೋಪಿಸಿದ್ದಾರೆ.

PM appointment to state delegation: Siddaramaiah and BSY statement

ಡಿಸೆಂಬರ್ 9ರಂದು ರಾಜ್ಯದ ನಿಯೋಗದೊಂದಿಗೆ ಪ್ರಧಾನಿ ಭೇಟಿ ಮಾಡಲು ಸಮಯಾವಕಾಶ ಕೋರಿದ್ದೆವು, ಆದರೆ ಪ್ರಧಾನಿ ಕಾರ್ಯಾಲಯದಿಂದ ಇದುವರೆಗೂ ಉತ್ತರ ಬಂದಿಲ್ಲ. ಒಂದು ರಾಜ್ಯದ ಸಿಎಂ ಜೊತೆ ಪ್ರಧಾನಿ ಈ ರೀತಿ ನಡೆದುಕೊಳ್ಳುತ್ತಿದ್ದಾರೆಂದು ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ನಮ್ಮ ಸರಕಾರದ ವಿರುದ್ದ ಟೀಕೆ ಮಾಡುತ್ತಿರುವ ಯಡಿಯೂರಪ್ಪ ಮತ್ತು ಶೋಭಾ ಕರಂದ್ಲಾಜೆ ಒಕ್ಕೂಟ ವ್ಯವಸ್ಥೆ ಎಂದರೇನು ಎಂದು ಮೊದಲು ಅರ್ಥ ಮಾಡಿಕೊಳ್ಳಬೇಕೆಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಇತ್ತ ಸಿಎಂ ಆರೋಪಕ್ಕೆ ಪ್ರತ್ಯುತ್ತರ ನೀಡಿರುವ ಯಡಿಯೂರಪ್ಪ, ಇತ್ತೀಚೆಗೆ ದೆಹಲಿಯಲ್ಲಿ ಕಾಟಾಚಾರಕ್ಕೆ ಮುಖ್ಯಮಂತ್ರಿಗಳು ಸಭೆ ನಡೆಸಿದ್ದರು. ಕೇಂದ್ರ ಇದುವರೆಗೆ ರಾಜ್ಯಕ್ಕೆ ನೀಡಿರುವ 1.65 ಲಕ್ಷ ಕೋಟಿ ರೂಪಾಯಿಯ ಲೆಕ್ಕವನ್ನು ರಾಜ್ಯ ಸರಕಾರ ನೀಡಲಿಎಂದಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Prime Minister Narendra Modi appointment to state delegation to discuss on drought and Mahadayi water sharing issue: Karnataka CM Siddaramaiah and BJP State President B S Yeddyurappa statement.
Please Wait while comments are loading...