ಪಿಎಂ ಕೇರ್ಸ್‌ನಿಂದ ಕರ್ನಾಟಕಕ್ಕೆ 1,279 ವೆಂಟಿಲೇಟರ್

ಬೆಂಗಳೂರು, ಆಗಸ್ಟ್ 04: ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,39,571ಕ್ಕೆ ಏರಿಕೆಯಾಗಿದೆ. ವೆಂಟಿಲೇಟರ್‌ ಬೆಡ್‌ಗಳಿಗೆ ಬೇಡಿಕೆ ಹೆಚ್ಚುತ್ತಿದೆ.

Recommended Video

      DK Shivakumar : ಫೀಲ್ಡಿಗಿಳಿದು ಗೆದ್ದರಷ್ಟೇ ಪದಾಧಿಕಾರಿ ಹುದ್ದೆ | Oneindia Kannada

      ಆಸ್ಪತ್ರೆಯಲ್ಲಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ರಾಜ್ಯದಲ್ಲಿ ಹೆಚ್ಚುತ್ತಿರುವ ವೆಂಟಿಲೇಟರ್ ಬೆಡ್‌ಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. ಮುಖ್ಯಮಂತ್ರಿಗಳ ಕಚೇರಿ ಮಾಹಿತಿಯಂತೆ ಪಿಎಂ ಕೇರ್ಸ್‌ ನಿಧಿಯಡಿ ರಾಜ್ಯಕ್ಕೆ 681 ವೆಂಟಿಲೇರ್ ಆಗಮಿಸಿದೆ. 1,279 ವೆಂಟಿಲೇಟರ್‌ಗಳು ಶೀಘ್ರವೇ ಬರಲಿವೆ.

      ಯಡಿಯೂರಪ್ಪ ಅವರು ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಪ್ಯಾರಾ ಮೆಡಿಕಲ್ ಸಿಬ್ಬಂದಿ, ನರ್ಸ್ ಮುಂತಾದ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ರಾಜ್ಯಕ್ಕೆ ಬಂದಿರುವ ವೆಂಟಿಲೇಟರ್‌ಗಳನ್ನು ತಕ್ಷಣ ಜೋಡಿಸಬೇಕು ಎಂದು ತಿಳಿಸಿದ್ದಾರೆ.

      PM CARES Karnataka To Get 1279 Ventilators By August End

      ಈಗ ರಾಜ್ಯಕ್ಕೆ ಬಂದಿರುವ 681 ವೆಂಟಿಲೇಟರ್‌ಗಳಲ್ಲಿ 166 ಬೆಂಗಳೂರು ನಗರದ ಆಸ್ಪತ್ರೆಗಳಲ್ಲಿ ಬಳಕೆ ಮಾಡಲಾಗುತ್ತದೆ. ಉಳಿದವುಗಳನ್ನು ಜಿಲ್ಲಾ ಕೇಂದ್ರಗಳಿಗೆ ಕಳಿಸಲಾಗುತ್ತದೆ. ಆಗಸ್ಟ್ ಅಂತ್ಯದ ವೇಳೆಗೆ 1,279 ವೆಂಟಿಲೇಟರ್ ರಾಜ್ಯಕ್ಕೆ ಆಗಮಿಸಲಿದೆ.

      ಖಾಸಗಿ ಆಸ್ಪತ್ರೆಗಳು ವೆಂಟಿಲೇಟರ್ ನಿರ್ವಹಣೆ ಮಾಡಲು ಸಿಬ್ಬಂದಿಗಳು ಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿವೆ. ಈ ಬಗ್ಗೆ ಗಮನ ಹರಿಸುವಂತೆ ಅಧಿಕಾರಿಗಳಿಗೆ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ.

      ಯಡಿಯೂರಪ್ಪ ಅವರಿಗೆ ಕೋವಿಡ್ ಸೋಂಕು ತಗುಲಿದ್ದು ಭಾನುವಾರ ರಾತ್ರಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೂರವಾಣಿ ಕರೆ ಮೂಲಕ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡುತ್ತಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+