ರೈತರ ಖಾತೆಗೆ ಪಿಎಂ ಕಿಸಾನ್ 23ನೇ ಕಂತಿನ ಹಣ ಜಮಾ: ನಿಮ್ಮ ಅಕೌಂಟ್ ಸ್ಟೇಟಸ್ ಚೆಕ್ ಮಾಡೋದು ಹೇಗೆ?

ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ ಕಿಸಾನ್) ಯೋಜನೆಯ 23ನೇ ಕಂತಿನ ಹಣ ನಾಳೆ ಅಂದರೆ ಶನಿವಾರ ಬಿಡುಗಡೆಯಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಇರುವ ಕೋಟ್ಯಂತರ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡಲಿದ್ದಾರೆ. ರೈತರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತಂದಿರುವ ಈ ಯೋಜನೆಯಡಿ ಪ್ರತಿ ಕಂತಿನಲ್ಲೂ 2,000 ರೂ.ಗಳನ್ನು ನೀಡಲಾಗುತ್ತಿದ್ದು, ನಾಳೆ ದೇಶದ ಅನ್ನದಾತರ ಖಾತೆಗಳಿಗೆ ಈ ಹಣ ಜಮೆಯಾಗಲಿದೆ.

ಕಿಸಾನ್ ಸಮ್ಮಾನ್ ನಿಧಿ ಯೋಜನೆ: 9.44 ಕೋಟಿ ರೈತರಿಗೆ ಲಾಭ

ಜೂನ್ 20ರ ಶನಿವಾರದಂದು ಪ್ರಧಾನಿ ನರೇಂದ್ರ ಮೋದಿ ಅವರು ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಇದೇ ಕಾರ್ಯಕ್ರಮದ ವೇದಿಕೆಯಿಂದ ಕಿಸಾನ್ ಯೋಜನೆಯ ಹಣವನ್ನು ಡಿಜಿಟಲ್ ಮೂಲಕ ಬಿಡುಗಡೆ ಮಾಡಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್, "ದೇಶಾದ್ಯಂತ ಒಟ್ಟು 9.44 ಕೋಟಿ ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ 18,880 ಕೋಟಿ ರೂ. ಹಣ ಜಮೆಯಾಗಲಿದೆ. ವಿಶೇಷವಾಗಿ ಪಶ್ಚಿಮ ಬಂಗಾಳವೊಂದರಲ್ಲಿಯೇ 45.35 ಲಕ್ಷಕ್ಕೂ ಹೆಚ್ಚು ರೈತ ಫಲಾನುಭವಿಗಳ ಖಾತೆಗಳಿಗೆ 907 ಕೋಟಿ ರೂಪಾಯಿಗಳು ನೇರ ನಗದು ವರ್ಗಾವಣೆ ಮೂಲಕ ತಲುಪಲಿದೆ" ಎಂದು ತಿಳಿಸಿದ್ದಾರೆ.

PM Kisan

ಕೇಂದ್ರ ಸರ್ಕಾರವು ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಪಿಎಂ ಕಿಸಾನ್ ಯೋಜನೆಯನ್ನು ಜಾರಿಗೆ ತಂದಿದ್ದು, ವರ್ಷಕ್ಕೆ ಒಟ್ಟು 6,000 ರೂಪಾಯಿಗಳನ್ನು ನೀಡಲಾಗುತ್ತದೆ. ಈ ಮೊತ್ತವನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ ಮೂರು ಕಂತುಗಳಲ್ಲಿ ತಲಾ 2,000 ರೂ.ನಂತೆ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತದೆ. ಮುಂಗಾರು ಹಂಗಾಮಿನ ಈ ಸಂದರ್ಭದಲ್ಲಿ ರಸಗೊಬ್ಬರ, ಬಿತ್ತನೆ ಬೀಜ ಹಾಗೂ ಕೃಷಿ ಪರಿಕರಗಳ ಖರೀದಿಗೆ ಈ ಹಣ ರೈತರಿಗೆ ಬಹಳಷ್ಟು ನೆರವಾಗಲಿದೆ.

ಕೇಂದ್ರದಿಂದ ಗುಡ್‌ನ್ಯೂಸ್‌: EPF ಬಡ್ಡಿದರ ಶೇ.8.25ರಷ್ಟು ನಿಗದಿ, ತಿಂಗಳ ಅಂತ್ಯದೊಳಗೆ ಜಮಾ
ಕೇಂದ್ರದಿಂದ ಗುಡ್‌ನ್ಯೂಸ್‌: EPF ಬಡ್ಡಿದರ ಶೇ.8.25ರಷ್ಟು ನಿಗದಿ, ತಿಂಗಳ ಅಂತ್ಯದೊಳಗೆ ಜಮಾ

ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ?

ನಿಮ್ಮ ಖಾತೆಗೆ ಪಿಎಂ ಕಿಸಾನ್ 23ನೇ ಕಂತಿನ ಹಣ ಬರುವುದೇ ಅಥವಾ ಇಲ್ಲವೇ ಎಂಬುದನ್ನು ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕವೇ ಸುಲಭವಾಗಿ ಮನೆಯಲ್ಲೇ ಕುಳಿತು ಪರಿಶೀಲಿಸಬಹುದು. ಆನ್‌ಲೈನ್‌ನಲ್ಲಿ ಪಿಎಂ ಕಿಸಾನ್ ಸ್ಟೇಟಸ್ ಚೆಕ್ ಮಾಡಲು ಈ ಕೆಳಗಿನ ಸರಳ ಹಂತಗಳನ್ನು ಅನುಸರಿಸಿ:

1. ಮೊದಲಿಗೆ ಪಿಎಂ ಕಿಸಾನ್ ಯೋಜನೆಯ ಅಧಿಕೃತ ವೆಬ್‌ಸೈಟ್ pmkisan.gov.in ಗೆ ಭೇಟಿ ನೀಡಿ.

2. ಮುಖಪುಟದಲ್ಲಿ ಬಲಭಾಗದಲ್ಲಿರುವ 'ಫಾರ್ಮರ್ಸ್ ಕಾರ್ನರ್' ವಿಭಾಗವನ್ನು ಗಮನಿಸಿ. ಅಲ್ಲಿರುವ 'ನೋ ಯುವರ್ ಸ್ಟೇಟಸ್' ಅಥವಾ 'ಬೆನಿಫಿಶಿಯರಿ ಸ್ಟೇಟಸ್' ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ.

3. ಹೊಸ ಪುಟ ತೆರೆದುಕೊಳ್ಳುತ್ತದೆ. ಅಲ್ಲಿ ನಿಮ್ಮ ಪಿಎಂ ಕಿಸಾನ್ ನೋಂದಣಿ ಸಂಖ್ಯೆಯನ್ನು ನಮೂದಿಸಿ.

4. ಒಂದು ವೇಳೆ ನಿಮ್ಮ ನೋಂದಣಿ ಸಂಖ್ಯೆ ತಿಳಿದಿಲ್ಲದಿದ್ದರೆ ಮೇಲ್ಭಾಗದಲ್ಲಿರುವ 'Know your registration number' ಮೇಲೆ ಕ್ಲಿಕ್ ಮಾಡಿ, ನಿಮ್ಮ ಆಧಾರ್ ಸಂಖ್ಯೆ ಅಥವಾ ಮೊಬೈಲ್ ನಂಬರ್ ಹಾಕಿ ಅದನ್ನು ಸುಲಭವಾಗಿ ತಿಳಿದುಕೊಳ್ಳಬಹುದು.

5. ನೋಂದಣಿ ಸಂಖ್ಯೆ ಹಾಗೂ ಪರದೆಯ ಮೇಲೆ ಕಾಣುವ ಕ್ಯಾಪ್ಚಾ ಕೋಡ್ ಅನ್ನು ಸರಿಯಾಗಿ ನಮೂದಿಸಿ.

6. ಕೊನೆಯದಾಗಿ 'ಗೆಟ್ ಡೇಟಾ' ಬಟನ್ ಮೇಲೆ ಕ್ಲಿಕ್ ಮಾಡಿ.

ಈಗ ನಿಮ್ಮ ಪರದೆಯ ಮೇಲೆ ನಿಮ್ಮ ಖಾತೆಯ ಸಂಪೂರ್ಣ ವಿವರ ಕಾಣಿಸುತ್ತದೆ. ಇದರಲ್ಲಿ ನಿಮ್ಮ ಹೆಸರು, ಬ್ಯಾಂಕ್ ಖಾತೆಯ ವಿವರ, ಮತ್ತು ಹಿಂದಿನ ಕಂತುಗಳ ಮಾಹಿತಿಯ ಜೊತೆಗೆ ಹೊಸ ಕಂತಿನ ಹಣ ಜಮೆಯಾಗಿರುವ ಸ್ಟೇಟಸ್ ಕೂಡ ಲಭ್ಯವಾಗುತ್ತದೆ.

ಹಣ ಬಾರದಿದ್ದರೆ ಏನು ಮಾಡಬೇಕು?

ಪಿಎಂ ಕಿಸಾನ್ ಯೋಜನೆಯ ಹಣ ನಿರಂತರವಾಗಿ ಪಡೆಯಲು ರೈತರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಇದರ ಜೊತೆಗೆ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಆಗಿರಬೇಕು ಮತ್ತು ಜಮೀನಿನ ದಾಖಲೆಗಳು ಸರಿಯಾಗಿ ಪರಿಶೀಲನೆಯಾಗಿರಬೇಕು. ಈ ಮೂರರಲ್ಲಿ ಯಾವುದೇ ಪ್ರಕ್ರಿಯೆ ಬಾಕಿ ಇದ್ದರೂ ನಿಮ್ಮ ಖಾತೆಗೆ ಹಣ ಬರುವುದು ಸ್ಥಗಿತಗೊಳ್ಳಬಹುದು.

ಮೋದಿ ಕಾಲದಲ್ಲಿ ಇಳೀತು ಸ್ವಿಸ್ ಬ್ಯಾಂಕ್‌ನಲ್ಲಿ ಭಾರತೀಯರ ಹಣ! ಆದ್ರೂ ₹36 ಸಾವಿರ ಕೋಟಿ ಜಮೆ!
ಮೋದಿ ಕಾಲದಲ್ಲಿ ಇಳೀತು ಸ್ವಿಸ್ ಬ್ಯಾಂಕ್‌ನಲ್ಲಿ ಭಾರತೀಯರ ಹಣ! ಆದ್ರೂ ₹36 ಸಾವಿರ ಕೋಟಿ ಜಮೆ!

ಒಂದು ವೇಳೆ ನಿಮ್ಮ ಖಾತೆಗೆ ಹಣ ಬಾರದೆ ಹೋದರೆ ಅಥವಾ ಈ ಯೋಜನೆಗೆ ಸಂಬಂಧಿಸಿದಂತೆ ಏನಾದರೂ ತಾಂತ್ರಿಕ ಸಮಸ್ಯೆಗಳಿದ್ದರೆ, ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಸಹಾಯವಾಣಿ ಸಂಖ್ಯೆಗಳಾದ 155261, 1800115526 ಅಥವಾ 011-23381092 ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ದೋಷಗಳಿದ್ದರೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+