Breaking: ಕಿಸಾನ್ ಸಮ್ಮಾನ್: ರಾಜ್ಯದ 50.36 ಲಕ್ಷ ರೈತರ ಖಾತೆಗೆ ಸಾವಿರ ಕೋಟಿ ಬಿಡುಗಡೆ

ಬೆಂಗಳೂರು, ಅ.17: ಪ್ರಧಾನಿ ನರೇಂದ್ರ ಮೋದಿ ಸೋಮವಾರ ದೆಹಲಿಯಲ್ಲಿ ಕಿಸಾನ್ ಸಮ್ಮಾನ್ ಸಮ್ಮೇಳನ 2022 ಅನ್ನು ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರ್ಚುವಲ್ ಆಗಿ ಭಾಗವಹಿಸಿದರು.

ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯಲ್ಲಿ ನಡೆಯಲಿರುವ ಎರಡು ದಿನಗಳ ಈ ಕಾರ್ಯಕ್ರಮ ದೇಶಾದ್ಯಂತ 13,500 ಕ್ಕೂ ಹೆಚ್ಚು ರೈತರು ಮತ್ತು ಸುಮಾರು 1,500 ಅಗ್ರಿ ಸ್ಟಾರ್ಟ್‌ಅಪ್‌ಗಳನ್ನು ಒಟ್ಟುಗೂಡಿಸುತ್ತದೆ ಎನ್ನಲಾಗಿದೆ.

ಸಮ್ಮೆಳನದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12 ನೇ ಕಂತಿನ ಮೂಲಕ 16 ಸಾವಿರ ಕೋಟಿ ರೂ.ಗಳ ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ರಾಜ್ಯದ 50. 36 ಲಕ್ಷ ರೈತರ ಖಾತೆಗೆ 1007.26 ಕೋಟಿ ರೂ. ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಗಿದೆ.

PM Kisan Samman Sammelan 2022; CM Basavaraj Bommai joined virtually

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆಗೆ ಸಚಿವ ಸಂಪುಟದ ಸದಸ್ಯರು, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲಾಧಿಕಾರಿಗಳು ಕಾರ್ಯಕ್ರಮವನ್ನು ವೀಕ್ಷಿಸಿದರು.

PM Kisan Samman Sammelan 2022; CM Basavaraj Bommai joined virtually

ಪ್ರಧಾನಿ ಸೋಮವಾರ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನದಲ್ಲಿ 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು ಉದ್ಘಾಟಿಸಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 12 ನೇ ಕಂತಿನ ಹಣವನ್ನು ಫಲಾನುಭವಿ ಕೃಷಿಕರಿಗೆ ವರ್ಗಾಯಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+