Dhan Dhanya Krishi Yojana: ಕೇಂದ್ರದಿಂದ ಕರ್ನಾಟಕದ ಈ 2 ಜಿಲ್ಲೆಗಳಿಗೆ ಬಂಪರ್ ಸುದ್ದಿ
ಹಾವೇರಿ/ಗದಗ, ಅಕ್ಟೋಬರ್ 11: ವಿಧಾನಸಭಾ ಕ್ಷೇತ್ರಗಳಲ್ಲಿ ಹಾವೇರಿ ಮತ್ತು ಗದಗ ಎರಡು ಪ್ರತ್ಯೇಕ ಕ್ಷೇತ್ರಗಳಗಿವೆ. ಲೋಕಸಭೆ ವಿಚಾರದ ಮಟ್ಟಿಗೆ ಈ ಎರಡು ಜಿಲ್ಲೆಗಳು ಒಂದೇ ಆಗಿವೆ. ಕೇಂದ್ರ ಸರ್ಕಾರ ಇವೆರಡು ಜಿಲ್ಲೆಗಳಿಗೆ ಕೇಂದ್ರ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿಯವರು "ಪ್ರಧಾನಮಂತ್ರಿ ಧನ ಧಾನ್ಯ ಕೃಷಿ ಯೋಜನೆ' (PM Dhan Dhanya Krishi Yojana) ಜಾರಿಗೆ ತರುತ್ತಿದೆ. ಇಂದು ಅಕ್ಟೋಬರ್ 11ರಂದು ದೇಶದ 100 ಜಿಲ್ಲೆಗಳಲ್ಲಿ ಅನುಷ್ಠಾನವಾಗುವಂತೆ ಪ್ರಧಾನಿ ಲೋಕಾರ್ಪಣೆಗೊಳಿಸಲಿದ್ದಾರೆ.
ಈ ಆಧುನಿಕ ಕೃಷಿ ಯೋಜನೆ ಇಂದಿನಿಂದ ಜಾರಿಯಾಗುವ ದೇಶದ 100 ಜಿಲ್ಲೆಗಳಲ್ಲಿ ಹಾವೇರಿ, ಗದಗ ಜಿಲ್ಲೆಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಸೇರ್ಪಡೆಗೆ ಕೇಂದ್ರ ಸಚಿವ ಶಿವರಾಜ್ ಚೌವ್ಹಾಣ್ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಬಸವರಾಜ ಬೊಮ್ಮಾಯಿ ಅವರು, ಈ "ಧನ ಧಾನ್ಯ ಕೃಷಿ ಯೋಜನೆ'ಯಿಂದ ಕೃಷಿಗೆ, ರೈತರಿಗೆ ಒಂದಷ್ಟು ಪ್ರಯೋಜನೆವಾಗಲಿವೆ. ಕೃಷಿ ಉತ್ಪಾದನೆ ಹೆಚ್ಚಳವಾಗಲಿದೆ. ನೀರಾವರಿ ಸೌಲಭ್ಯ, ಅಲ್ಪಾವಧಿ ಹಾಗೂ ದೀರ್ಘಾವಧಿ ಹಣಕಾಸು ನೆರವು ನೀಡುವ ಯೋಜನೆ ಇದಾಗಿದೆ. ಪಂಚಾಯತ್ ಮತ್ತು ಬ್ಲಾಕ್ ಕೇಂದ್ರಗಳಲ್ಲಿ ದಾಸ್ತಾನು ಘಟಕಗಳ ನಿರ್ಮಾಣ ಮಾಡಲಾಗುತ್ತದೆ ಎಂದು ತಿಳಿಸಿದರು.
ಈ ಮಹತ್ವಾಕಾಂಕ್ಷಿ ಯೋಜನೆಯನ್ನು ನಮ್ಮ ಉತ್ತರ ಕರ್ನಾಟಕದ ಹಾವೇರಿ ಮತ್ತು ಗದಗ ಜಿಲ್ಲೆಗಳಿಗೆ ಕೊಡುಗೆಯಾಗಿ ನೀಡಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿ ಜೀ ಅವರಿಂದ ವರ್ಚ್ಯುಯಲ್ ಮೂಲಕ ಯೋಜನೆಯ ಲೋಕಾರ್ಪಣೆ ಮಾಡಲಿದ್ದಾರೆ.
ಏನಿದು ಯೋಜನೆ? ಇದರ ಉದ್ದೇಶವೇನು?
ಭಾರತದಲ್ಲಿ ಈ ಆಧುನಿಕ ಕೃಷಿ ಯೋಜನೆಯನ್ನು ಕೇಂದ್ರ ಸರ್ಕಾರ "ಕೃಷಿಯಲ್ಲಿ ಹೂಡಿಕೆ ಹೆಚ್ಚಿಸಲು, ರೈತರ ಆದಾಯ ಹೆಚ್ಚಿಸಲು, ಒಟ್ಟಾರೆ ವ್ಯವಸಾಯ ಕ್ಷೇತ್ರ ಉತ್ತೇಜಿಸಲು ಆಹಾರ ಸರಬರಾಜು ವ್ಯವಸ್ಥೆ ಸುಧಾರಿಸಲು, ಹೊಸ ಹೊಸ ತಂತ್ರಜ್ಞಾನ ಪರಿಚಯಿಸುವುದು, ಕೃಷಿ ಉತ್ಪಾದನೆ ಹೆಚ್ಚಿಸುವುದು, ರೈತರ ಉತ್ಪನ್ನಗಳನ್ನು ಪರಿಣಾಮಕಾರಿಯಾಗಿ ಮಾರಾಟ ಮಾಡುವುದು' ಸೇರಿದಂತೆ ಮಹತ್ತರ ಉದ್ದೇಶದಿಂದ ಈ ಜಾರಿಗೆ ತರಲಾಗುತ್ತಿದೆ.
ಈ ಯೋಜನೆ ಜಾರಿಯಿಂದ 1.7 ರೈತರಿಗೆ ಪ್ರಯೋಜನವಾಗಲಿದೆ. ನೀರಾವರಿಗೆ ಉತ್ತೇಜಿಸುವ ಕಾರಣ ಉತ್ತಮ ಗುಣಮಟ್ಟದ ಬೀಜ, ರಸಗೊಬ್ಬರಗಳ ಲಭ್ಯವಾಗುತ್ತದೆ. ಬಂಜರು ಭೂಮಿಯ ಫಲವತ್ತತೆ ಹೆಚ್ಚಳ ಮಾಡುವ ಅಂಶವು ಇದರಲ್ಲಿದೆ. ರೈತರು ಪಡೆಯುವ ಸಾಲ, ಸಬ್ಸಿಡಿಗಳಿಗೆ ಈ ಯೋಜನೆ ಪೂರಕವಾಗಿದೆ. ಹೀಗೆ ಅನೇಕ ಪ್ರಯೋಜನಗಳನ್ನು ದೇಶದ ರೈತರು ಪಡೆಯಲಿದ್ದಾರೆ. ಮುಂದಿನ ದಿನಗಳಲ್ಲಿ ಈ ಯೋಜನೆ 100 ಜಿಲ್ಲೆಗಳಿಗಿಂತಲೂ ಹೆಚ್ಚಿನ ರಾಜ್ಯಗಳಿಗೆ ವಿಸ್ತರಣೆ ಆಗುವ ನಿರೀಕ್ಷೆ ಇದೆ.
ಹಾವೇರಿ - ಗದಗ ಜಿಲ್ಲೆಗಳಿಗೆ ಬಂಪರ್ ಕೊಡುಗೆ ನೀಡಿದ ಪ್ರಧಾನಮಂತ್ರಿ @narendramodi ಸರ್ಕಾರ!
— Basavaraj S Bommai (@BSBommai) October 10, 2025
ದೇಶದ 100 ಜಿಲ್ಲೆಗಳಲ್ಲಿ ಜಾರಿಯಾಗುತ್ತಿರುವ ಪ್ರಧಾನಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗೆ ಹಾವೇರಿ - ಗದಗ ಜಿಲ್ಲೆಗಳ ಸೇರ್ಪಡೆ.
ಯೋಜನೆಯ ಪ್ರಯೋಜನಗಳು:
1️⃣ ಕೃಷಿ ಉತ್ಪಾದನೆ ಹೆಚ್ಚಳ, ನೀರಾವರಿ ಸೌಲಭ್ಯ, ಅಲ್ಪಾವಧಿ ಹಾಗೂ ದೀರ್ಘಾವಧಿ ಹಣಕಾಸು… pic.twitter.com/WBOk0kLQPl
ಕೃಷಿ ಯೋಜನೆ ಲೋಕಾರ್ಪಣೆ ಸಮಾರಂಭ
ಇಂದು (ಶನಿವಾರ) ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಪ್ರಧಾನಮಂತ್ರಿ ಧನ - ಧಾನ್ಯ ಕೃಷಿ ಯೋಜನೆ ಉದ್ಘಾಟನೆಯ ಕಾರ್ಯಕ್ರಮ ನಡೆಯಿತು. ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿರವರು ವರ್ಚುವಲ್ ಮೂಲಕ ಭಾಗವಹಿಸಿದ್ದರು. ಜಿಲ್ಲಾಧಿಕಾರಿ ಡಾ ವಿಜಯಮಹಾಂತೇಶ ದಾನಮ್ಮನವರ, ಮಾಜಿ ಶಾಸಕ ವೀರುಪಾಕ್ಷಪ್ಪ ಬಳ್ಳಾರಿ, ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯ ವೀರನಗೌಡ ಪುಟ್ಟನಗೌಡ್ರ, ಜಂಟೀ ಕೃಷಿ ನಿರ್ದೇಶಕ ಡಾ.ಮಲ್ಲಿಕಾರ್ಜುನ, ಹನುಮನಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಡೀನ್ ಡಾ ಕೆ.ವಿ ಬಸವಕುಮಾರ ಅವರು ಹೊಸ ಯೋಜನೆ ಚಾಲನೆಗೆ ಸಾಕ್ಷಿಯಾದರು.
ಯೋಜನೆಗಳು ಗ್ರಾಮೀಣ ಆರ್ಥಿಕ ಬೆಳವಣಿಗೆಗೆ ಸಹಕಾರಿ
ಪ್ರಧಾನಿಯ ದೂರದೃಷ್ಟಿ ಪರಿಣಾಮವಾಗಿ ಭಾರತವು ತನ್ನ ಕೃಷಿ ಭೂದೃಶ್ಯವನ್ನು ಪರಿವರ್ತಿಸುವತ್ತ ಐತಿಹಾಸಿಕ ಹೆಜ್ಜೆ ಇಟ್ಟಿದೆ. ರೈತರ ಕಲ್ಯಾಣ ಮತ್ತು ಗ್ರಾಮೀಣ ಸಮೃದ್ಧಿಗೆ ಸರ್ಕಾರದ ಅಚಲ ಬದ್ಧತೆಯನ್ನು ಪುನರುಚ್ಚರಿಸಿದೆ ಎಂದು ಕೇಂದ್ರ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಉದ್ಯಮಗಳ ಖಾತೆ (MSME) ಸಚಿವೆ ಶೋಭಾ ಕರಂದ್ಲಾಜೆ ಅವರು ತಿಳಿಸಿದ್ದಾರೆ.
ಹೊಸ ಕೃಷಿ ಯೋಜನೆ ಬಗ್ಗೆ ಎಕ್ಸ್ ಪೋಸ್ಟ್ ಮಾಡಿರುವ ಅವರು, ₹24,000 ಕೋಟಿ ಪ್ರಧಾನ ಮಂತ್ರಿ ಧನ್ ಧಾನ್ಯ ಕೃಷಿ ಯೋಜನೆ ಮತ್ತು ₹11,440 ಕೋಟಿ ದ್ವಿದಳ ಧಾನ್ಯಗಳ ವಲಯದಲ್ಲಿ ಸ್ವಾವಲಂಬನೆಗಾಗಿ ಮಿಷನ್‌ನ ಪ್ರಾರಂಭವಾಗಿದೆ. ಇದು ಅನ್ನದಾತರಿಗೆ ಸಬಲೀಕರಣದ ಹೊಸ ಯುಗದತ್ತ ಕೊಂಡೊಯ್ಯಲಿದೆ. ಇನ್ನೂ ₹5,450 ಕೋಟಿಗೂ ಹೆಚ್ಚು ಮೌಲ್ಯದ ಯೋಜನೆಗಳ ಸಮರ್ಪಣೆ ಮತ್ತು ಕೃಷಿ, ಪಶುಸಂಗೋಪನೆ, ಮೀನುಗಾರಿಕೆ ಮತ್ತು ಆಹಾರ ಸಂಸ್ಕರಣೆಯಲ್ಲಿ ₹815 ಕೋಟಿ ಮೌಲ್ಯದ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿದ್ದು ಸಹ ಗ್ರಾಮೀಣ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿದೆ ಎಂದು ಹೇಳಿದರು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications