PM Modi Birthday: ಸೆ.17ರಂದು ಮನೆಗಳಲ್ಲಿ ‘ಆಶೀರ್ವಾದದ ದೀಪ’ ಬೆಳಗಿಸಿ: ನಿತಿನ್ ನಬಿನ್ ಕರೆ, ರಾಜ್ಯಾದ್ಯಂತ ವಿಶೇಷ ಅಭಿಯಾನ

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಕ್ಕೆ ಸಂಬಂಧಿಸಿದಂತೆ ದೇಶದಾದ್ಯಂತ ಭರ್ಜರಿ ಸಿದ್ಧತೆ ಪ್ರಾರಂಭವಾಗಿದೆ. 'ಜನಸೇವೆಯಿಂದ ದೇಶಸೇವೆ' ಎಂಬುದು ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜೀವನದ ಮೂಲ ಧ್ಯೇಯವಾಗಿದೆ. ಅವರು ದೇಶದ ನಾಯಕತ್ವ ವಹಿಸಿಕೊಂಡ ಸಂದರ್ಭದಲ್ಲಿ ಭಾರತ ಅನೇಕ ವಿಷಮ ಪರಿಸ್ಥಿತಿಗಳನ್ನು ಎದುರಿಸುತ್ತಿತ್ತು. ಆ ಸಮಯದಲ್ಲಿ ಅವರು ದೇಶದ ಹಿತದೃಷ್ಟಿಯಿಂದ ಹೊಸ ನೀತಿಗಳನ್ನು ರೂಪಿಸಿ, ಹೊಸ ಕಾರ್ಯಕ್ರಮಗಳನ್ನು ಆರಂಭಿಸಿ, ಜನಸಾಮಾನ್ಯರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತಂದ ಅನೇಕ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿದರು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಹೇಳಿದ್ದಾರೆ.

ಸ್ಟಾರ್ಟ್‌ಅಪ್ ಇಂಡಿಯಾ ಯುವಜನತೆಗೆ ಸ್ವಾವಲಂಬಿಗಳಾಗಲು ಹೊಸ ಅವಕಾಶಗಳನ್ನು ಕಲ್ಪಿಸಿತು. ಶೌಚಾಲಯ ನಿರ್ಮಾಣ ಮಹಿಳೆಯರಿಗೆ ಗೌರವ ಮತ್ತು ಘನತೆಯ ಬದುಕನ್ನು ನೀಡಿದರೆ, ಲಖಪತಿ ದೀದಿ ಯೋಜನೆ ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿಸಿದೆ. ಇಂದು ನಮ್ಮ ಮಹಿಳೆಯರು ಸ್ವಾವಲಂಬಿಗಳಾಗಿ ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ.

PM Modi Birthday Light a Blessing Lamp at Home on Sept 17 Nitin Nabin AppealsPM Modi Birthday Light a Blessing Lamp at Home on Sept 17 Nitin Nabin Appeals

ದೇಶವು ದೀರ್ಘಕಾಲ ನಕ್ಸಲವಾದದ ಹಿಂಸೆಯನ್ನು ಅನುಭವಿಸಿದೆ. ಒಂದು ಕಾಲದಲ್ಲಿ ನಕ್ಸಲವಾದದ ಬೇರುಗಳು 200ಕ್ಕೂ ಹೆಚ್ಚು ಜಿಲ್ಲೆಗಳಿಗೆ ವ್ಯಾಪಿಸಿದ್ದವು. ಆದರೆ ಇಂದು ಭಾರತ ನಕ್ಸಲವಾದದ ವಿರುದ್ಧ ನಿರ್ಣಾಯಕ ಯಶಸ್ಸಿನತ್ತ ಮುನ್ನಡೆಯುತ್ತಿದೆ. ದೇಶವು ದೀರ್ಘಕಾಲ ಭಯೋತ್ಪಾದನೆಯಿಂದಲೂ ತತ್ತರಿಸಿತ್ತು. ಆದರೆ ಪ್ರಧಾನಿ ಮೋದಿ ಅವರ ನಾಯಕತ್ವದಲ್ಲಿ ಭಯೋತ್ಪಾದನೆಗೆ ತಕ್ಕ ಉತ್ತರ ನೀಡಲಾಗಿದೆ. ಇಂದು ನಮ್ಮ ಗಡಿಗಳು ಮತ್ತಷ್ಟು ಸುರಕ್ಷಿತವಾಗಿದ್ದು, ದೇಶದತ್ತ ಕೆಟ್ಟ ದೃಷ್ಟಿ ಬೀರುವವರಿಗೆ ಮುಟ್ಟಿನೋಡುವಂತಹ ಪ್ರತ್ಯುತ್ತರ ನೀಡಲಾಗುತ್ತಿದೆ ಎಂದಿದ್ದಾರೆ.

ನರೇಂದ್ರ ಮೋದಿ ಜನ್ಮದಿನಕ್ಕೆ ವಿಶೇಷ ಸಿದ್ಧತೆ

ಪ್ರಧಾನಿ ಮೋದಿ ಅವರ ಅಭಿವೃದ್ಧಿಯ ಗುರಿಯ ಮೇಲೆ ದೇಶದ ಜನತೆಗೆ ಸಂಪೂರ್ಣ ವಿಶ್ವಾಸವಿದೆ. ನಮ್ಮೆಲ್ಲರ ಸಾಮೂಹಿಕ ಪ್ರಯತ್ನದಿಂದ 2047ರ ವೇಳೆಗೆ 'ವಿಕಸಿತ ಭಾರತ'ದ ಕನಸನ್ನು ನನಸಾಗಿಸೋಣ. ದೇಶದ ಪ್ರಗತಿಯ ಪಯಣಕ್ಕೆ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಯಶಸ್ವಿ ನಾಯಕತ್ವಕ್ಕೆ ಶುಭ ಹಾರೈಸುವ ಸಲುವಾಗಿ, ಮುಂಬರುವ ಸೆಪ್ಟೆಂಬರ್ 17ರಂದು ಪ್ರಧಾನಮಂತ್ರಿಗಳ ಜನ್ಮದಿನದ ಪ್ರಯುಕ್ತ ಸಂಜೆ 6ರಿಂದ 7 ಗಂಟೆಯ ನಡುವೆ ನಮ್ಮ-ನಮ್ಮ ಮನೆಗಳಲ್ಲಿ 'ಆಶೀರ್ವಾದದ ದೀಪ' ಬೆಳಗಿಸುವ ಅಭಿಯಾನ ನಡೆಸಲಾಗುತ್ತಿದೆ. ಅವರ ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸೋಣ ಎಂದೂ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್ ಅವರು ಕರೆ ನೀಡಿದ್ದಾರೆ.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ನಮ್ಮೆಲ್ಲರ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ತಮ್ಮ ಸಾರ್ವಜನಿಕ ಸೇವೆಯ ಮಹತ್ಕಾರ್ಯದಲ್ಲಿ 25 ವರ್ಷಗಳನ್ನು ಪೂರೈಸಿದ್ದಾರೆ. ಈ ಸುದೀರ್ಘ ಅವಧಿಯಲ್ಲಿ ಅವರು ಜನಸೇವೆ, ರಾಷ್ಟ್ರಸೇವೆ ಮತ್ತು ದಕ್ಷ ನಾಯಕತ್ವಕ್ಕೆ ಹೊಸ ಅರ್ಥವನ್ನು ನೀಡಿದ್ದಾರೆ.

ಅವರ ಜನಸೇವೆಯ ಪಯಣದಲ್ಲಿ 25 ವರ್ಷಗಳನ್ನು ಪೂರೈಸಿದ ಗೌರವಾರ್ಥ ದೇಶದಾದ್ಯಂತ ಸೆಪ್ಟೆಂಬರ್ 17 ರಿಂದ ಅಕ್ಟೋಬರ್‌ 17 ರ ವರೆಗೆ ಸೇವಾ ಸಂಕಲ್ಪ ಅಭಿಯಾನವನ್ನು ಆಯೋಜಿಸಲಾಗಿದೆ. ಪ್ರತಿಯೊಬ್ಬರೂ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸೇವಾ ಸಂಕಲ್ಪ ಅಭಿಯಾನವನ್ನು ಯಶಸ್ವಿಯಾಗಿಸಬೇಕೆಂದು ವಿನಂತಿಸುತ್ತೇನೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+