ಬಿಜೆಪಿಗೆ ಸ್ಪಷ್ಟ ಬಹುಮತ: ಮೇ 13ರವರೆಗೂ ಕಾಯೋಣ ಎಂದ ಸಿಎಂ ಬೊಮ್ಮಾಯಿ
ಹುಬ್ಬಳ್ಳಿ, ಮೇ 11: ಚುನಾವಣೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯದಲ್ಲಿ ಪ್ರಚಾರ ಮಾಡಿದ್ದರು. ಅವರ ಪ್ರಚಾರದಿಂದ ರಾಜ್ಯ ಬಿಜೆಪಿಗೆ ಲಾಭವಾಗಿದ್ದು, ಆಡಳಿತ ಪಕ್ಷದ ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗುರುವಾರ ಹುಬ್ಬಳ್ಳಿ ನಿವಾಸದ ಸಮೀಪ ಅವರು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಶಿಗ್ಗಾವಿ ಜನತೆ ತೋರಿದ ಪ್ರೀತಿಗೆ ನಾನು ಚಿರಋಣಿ. ಚುನಾವಣೆಯನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಿದರು. ಚುನಾವಣೆಗು ಮೊದಲು ನನ್ನ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಮಾಡಲಾಗಿತ್ತು. ಆದರೆ ಅದು ನಿನ್ನೆಗೆ ಮುಗಿದಿದೆ. ನಾನು ಶಿಗ್ಗಾಂವಿಯಲ್ಲಿ ದೊಡ್ಡ ಬಹುಮತದಿಂದ ಗೆಲ್ಲುತ್ತೇನೆ ಎಂದು ಹೇಳಿದರು.

ಮತದಾನೋತ್ತರ ಸಮೀಕ್ಷೆಗಳು ಕಳೆದ ಬಾರಿ ಕಾಂಗ್ರೆಸ್ 107ಕ್ಕೂ ಅಧಿಕ ಸ್ಥಾನ ಅಂತ ಹೇಳಿದ್ದವು. ಆದರೆ ಫಲಿತಾಂಶದ ದಿನ ಅದು ಉಲ್ಟಾ ಆಯಿತು. ಈಗಲೂ ಅದೇ ನಂಬಿಕೆ ಇದೆ. ಪ್ರಧಾನಿ ಮೋದಿಯವರ ಪ್ರಚಾರ ನಮಗೆ ಪ್ಲಸ್ ಆಗಿದೆ. ಯುವಕರು ಮತ್ತು ಮಹಿಳೆಯರು ನಮ್ಮ ಪರವಾಗಿ ಮತದಾನ ಮಾಡಿದ್ದಾರೆ. ನನಗೆ ವಿಶ್ವಾಸವಿದೆ ಬಿಜೆಪಿ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದರು.
ಅತಂತ್ರ ಎಂಬ ಪ್ರಶ್ನೆ ಉತ್ತರ ನೀಡುವುದಿಲ್ಲ. ಬಿಜೆಪಿ 150 ಸೀಟು ಗಳಿಸಲಿದೆ ಎಂದು ನಾನು ಎಲ್ಲಿಯೂ ಹೇಳಿಲ್ಲ. ಆದರೆ ಸ್ಪಷ್ಟ ಬಹುಮತ ಬರುವುಆಗಿ ಹೇಳಿದ್ದೇನೆ. ಈಗಲೂ ನನ್ನ ಹೇಳಿಕೆಗೆ ಬದ್ಧವಾಗಿದ್ದೇನೆ ಎಂದು ಹೇಳಿದರು.

ಮೇ 13ರವರೆಗೆ ಕಾಯೋಣ: ರೆಸಾರ್ಟ್ ರಾಜಕೀಯ ಇಲ್ಲ
ಚುನಾವಣೆ ದಿನ ಹಾವೇರಿಯಲ್ಲಿ ಪ್ರತಿಕ್ರಿಯಿಸಿದ್ದ ಸಿಎಂ ಬೊಮ್ಮಾಯಿಯವರು, ನಮ್ಮ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್ ಮೂಲಕ ನಾವು ಸಂಪೂರ್ಣ ಬಹುಮತ ಪಡೆಯುತ್ತೇವೆ. ಚುನಾವಣೋತ್ತರ ಸಮೀಕ್ಷೆ (Exit Poll) ಒಂದೇ ರೀತಿಯಾಗಿ ಇರಲ್ಲ. ಆದ್ದರಿಂದ ಚುನಾವಣಾ ಫಲಿತಾಂಶಕ್ಕಾಗಿ ಮೇ 13ರವರೆಗೆ ಕಾಯೋಣ ಎಂದು ತಿಳಿಸಿದರು.
ಚುನಾವಣೋತ್ತರ ಸಮೀಕ್ಷೆ ನೂರಕ್ಕೆ ನೂರರಷ್ಟು ನಿಖರವಾಗಿರುವುದಿಲ್ಲ. ಶೇಕಡಾ 5 ರಿಂದ 10ರಷ್ಟು ಹೆಚ್ಚು ಕಮ್ಮಿ ಆಗುತ್ತಿರುತ್ತದೆ. ಒಂದೊಂದು ಸಂಸ್ಥೆ ಒಂದೊಂದು ರೀತಿ ತೋರಿಸುತ್ತಿದೆ, ಯಾವುದು ಸ್ಥಿರವಾಗಿಲ್ಲ. ನಮಗೆ ಸಂಪೂರ್ಣ ಗ್ರೌಂಡ್ ರಿಪೋರ್ಟ್ ಇದೆ
ಚುನಾವಣೆಯ ನಿಜವಾದ ಫಲಿತಾಂಶಕ್ಕೆ ಮೇ 13ರವರೆಗೆ ಕಾಯೋಣ. ರೆಸಾರ್ಟ್ ರಾಜಕೀಯ ಇಲ್ಲ. ಯಾವುದೇ ರೆಸಾರ್ಟ್ ಆಗುವುದಿಲ್ಲ. ಈ ಬಾರಿ ಆ ಪ್ರಶ್ನೆಯೇ ಇಲ್ಲ. ಬಿಜೆಪಿಗೆ ಸಂಪೂರ್ಣ ಬಹುಮತ ಬರುತ್ತದೆ. ಜೆಡಿಎಸ್ ಕಿಂಗ್ ಮೇಕರ್ ಆಗುವ ಅವಶ್ಯಕತೆಯೇ ಇಲ್ಲ ಎಂದರು.












Click it and Unblock the Notifications