• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೈ ನಾಯಕರ ಸಲಹೆಯಂತೆ ಕೃಷಿ ಕಾಯ್ದೆ ತಿದ್ದುಪಡಿ: ಬಿ.ಸಿ. ಪಾಟೀಲ್!

|

ಬೆಂಗಳೂರು, ಸೆ. 28: ಕಾಂಗ್ರೆಸ್ ಈಗ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

ಹಾವೇರಿ ಜಿಲ್ಲೆ ಹಿರೇ ಕೆರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಹೇಳುವುದೊಂದು ಮಾಡುವುದು ಇನ್ನೊಂದು. 2019 ರಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯಿದೆ ತಿದ್ದುಪಡಿ ಬಗ್ಗೆ ಸ್ಪಷ್ಟವಾಗಿ ಹೇಳಿತ್ತು. ಅಲ್ಲದೇ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ಮಾಡುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಆರ್.ವಿ. ದೇಶಪಾಂಡೆ, ಮಲ್ಲಿಕಾರ್ಜುನ ಖರ್ಗೆ ಅವರೇ ಹೇಳಿದ್ದರು. ಅವರು ಹೇಳಿದಂತೆಯೇ ಈಗ ಕಾಯಿದೆಯನ್ನು ತಿದ್ದುಪಡಿ ಮಾಡಲಾಗಿದೆ.

 Karnataka Bandh Live Updates: ಕರ್ನಾಟಕ ಬಂದ್: ಕೃಷಿ ವಿರೋಧಿ ನೀತಿಗೆ ರೈತರ ಆಕ್ರೋಶ Karnataka Bandh Live Updates: ಕರ್ನಾಟಕ ಬಂದ್: ಕೃಷಿ ವಿರೋಧಿ ನೀತಿಗೆ ರೈತರ ಆಕ್ರೋಶ

ಕಾಂಗ್ರೆಸ್ ನಾಯಕರೇ 79 ಎ ಮತ್ತು ಬಿಯನ್ನು ಅನ್ನು ಕೈಬಿಡಬೇಕೆಂದು ವಿಧಾನಸಭೆಯಲ್ಲಿಯೇ ಹೇಳಿದ್ದರು. ಅದು ವಿಧಾನಸಭೆಯಲ್ಲಿ ದಾಖಲೆಯೂ ಆಗಿದೆ. ಆದರೆ ಈಗ ರಾಜಕೀಯ ದುರುದ್ದೇಶಕ್ಕಾಗಿ ವಿರೋಧಿಸುತ್ತಿದೆ. ಕಾಂಗ್ರೆಸ್ ಮಾಡುತ್ತಿರುವುದು ನಿಜಕ್ಕೂ ಒಳ್ಳೆಯ ಬೆಳವಣಿಗೆಯಲ್ಲ ಎಂದರು. ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ಸಣ್ಣ ರೈತನಿಗೂ ಸಹ ಅನುಕೂಲವಾಗುವಂತೆ ಕೃಷಿಕಾಯಿದೆಗಳನ್ನು ತಂದಿದ್ದಾರೆ. ಆದರೆ ವಿನಾಕಾರಣ ರಾಜಕೀಯ ದುರುದ್ದೇಶಕ್ಕಾಗಿ ಇದನ್ನು ಕಾಂಗ್ರೆಸ್ ಜೆಡಿಎಸ್ ವಿರೋಧಿಸುತ್ತಿವೆ ಎಂದರು.

   ರೈತರ ಪ್ರತಿಭಟನೆ ಕುರಿತು C.M BSY ಹೇಳಿದ್ದೇನು | Oneindia Kannada

   ಭೂ ಸುಧಾರಣೆ ಕಾಯಿದೆ ತಿದ್ದುಪಡಿಯಿಂದ ರಾಜ್ಯದಲ್ಲಿ ಪಾಳುಬಿದ್ದಿರುವ 30-40 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಕೃಷಿ ಚಟುವಟಿಕೆ ನಡೆಯಲು ಸಾಧ್ಯವಾಗುತ್ತದೆ. ಕೃಷಿಗೆ ಉತ್ತೇಜನ ನೀಡಲು ಭೂಕಾಯಿದೆಗೆ ತಿದ್ದುಪಡಿಯಾಗಿದೆ. ಇದರಿಂದ ಯುವಕರಿಗೆ ಉದ್ಯೋಗವಕಾಶಗಳು ಹೆಚ್ಚಾಗಲಿವೆ ಎಂದು ಬಿ.ಸಿ. ಪಾಟೀಲ ಅವರು ಹೇಳಿದ್ದಾರೆ.

   English summary
   Prime Minister Narendra Modi has amendment to agricultural acts to benefit the common small farmer said B.C Patil in Haveri
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X