PM Modi Security Breach: ಪಿಎಂ ಮೋದಿ, ಹುಬ್ಬಳ್ಳಿ ರೋಡ್ ಶೋನಲ್ಲಿ ಭದ್ರತಾ ಲೋಪ
ಹುಬ್ಬಳ್ಳಿ, ಜನವರಿ 12: ವಾಣಿಜ್ಯನಗರಿ ಹುಬ್ಬಳ್ಳಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಸೇರಿದಂತೆ ಬಹುತೇಕ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಿ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಆದರೆ ಈ ವೇಳೆ ಭದ್ರತಾ ಲೋಪವೊಂದು ಕಂಡು ಬಂದಿದ್ದು, ಬಾಲಕನೊಬ್ಬ ಬ್ಯಾರಿಕೇಡ್ ದಾಟಿ ಪ್ರಧಾನಮಂತ್ರಿಗೆ ಹೂವಿನ ಹಾರ ಹಾಕಲು ಓಡಿ ಬಂದ ಘಟನೆ ನಡೆದಿದೆ.
ಹೌದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೋದಿ ಭರ್ಜರಿ ರೋಡ್ ಶೋ ನಡೆಸಿ ಅಭಿಮಾನಿತಗಳತ್ತ ಕೈ ಬೀಸಿ ಮೆರವಣಿಗೆ ನಡೆಸುತ್ತಿದ್ದ ವೇಳೆ ಭದ್ರತಾ ಲೋಪವಾಗಿದೆ. ಬ್ಯಾರಿಕೇಡ್ ಹಾರಿ ಮೋದಿ ಕಾರಿನತ್ತ ನುಗ್ಗಿದ ಬಾಲಕ ಮೋದಿಗೆ ಹೂವಿನ ಹಾರ ಹಾಕಲು ಯತ್ನಿಸಿದ್ದಾನೆ. ಇದನ್ನು ನೋಡಿದ ಪ್ರಧಾನಿ ನರೇಂದ್ರ ಮೋದಿಯವರು ಬಾಲಕನ ಕೈಯಲ್ಲಿದ್ದ ಹೂವಿನ ಹಾರ ತೆಗೆದುಕೊಂಡು ತಮ್ಮ ಭದ್ರತಾ ಸಿಬ್ಬಂದಿ ಕೈ ಗೆ ನೀಡಿದ್ದಾರೆ.

ಇನ್ನೂ ಖುದ್ದು ಮೋದಿ ಕೈಗೆ ಹೂವಿನ ಹಾರ ಕೊಡಲು ಯತ್ನಿಸಿದ್ದ ಎನ್ನಲಾಗಿದೆ. ಬಳಿಕ ಭದ್ರತಾ ಸಿಬ್ಬಂದಿ ಹಾಗೂ ನಿಯೋಜಿತ ಪೊಲೀಸ್ ಸಿಬ್ಬಂದಿ ಬಾಲಕನ್ನು ಎಳೆದೊಯ್ದಿದ್ದಾರೆ. ಪೊಲೀಸರ ಕರ್ತವ್ಯ ಲೋಪ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಪೊಲೀಸರಿಂದ ವಿಚಾರಣೆ
ಪ್ರಧಾನಿ ಮೋದಿ ರೋಡ್ ಶೋ ವೇಳೆ ಹೂ ಹಾರ ಹಾಕಲು ಓಡಿ ಬಾಲಕನ ಬಳಿ ಮಾಹಿತಿ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ರೋಡ್ ಶೋ ಬಳಿಕ ಹತ್ತು ವರ್ಷದ ಬಾಲಕನ ಪೋಷಕರನ್ನು ಠಾಣೆಗೆ ಕರೆಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಎಸ್‌ಪಿಜಿ ಮತ್ತು ಪೊಲೀಸ್ ಬಿಗಿ ಭದ್ರತೆ ನಡುವೆಯು ರೋಡ್ ಶೋ ವೇಳೆ ಭದ್ರತಾ ಲೋಪ ನಡೆದಿದೆ. ಇದನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
#WATCH | Karnataka: A young man breaches security cover of PM Modi to give him a garland, pulled away by security personnel, during his roadshow in Hubballi.
— ANI (@ANI) January 12, 2023
(Source: DD) pic.twitter.com/NRK22vn23S












Click it and Unblock the Notifications