ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿ ಮೋದಿ ಕರೆ

|
Google Oneindia Kannada News

ಬೆಂಗಳೂರು, ಏಪ್ರಿಲ್ 11; ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಮುಖ್ಯಮಂತ್ರಿಗಳು ಮಾಹಿತಿ ನೀಡಿದ್ದಾರೆ.

ಭಾನುವಾರ ಯಡಿಯೂರಪ್ಪಗೆ ಕರೆ ಮಾಡಿದ್ದ ಪ್ರಧಾನಿ ಮೋದಿ ಕೋವಿಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ಪಡೆದರು. ರಾಜ್ಯ ಕೈಗೊಂಡ ಕ್ರಮಗಳ ಬಗ್ಗೆ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಯಡಿಯೂರಪ್ಪ ಟ್ವೀಟ್‌ನಲ್ಲಿ ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಇಂದಿನಿಂದ ಲಸಿಕಾ ಉತ್ಸವ; ಅರ್ಹರಿಗೆ ಕೋವಿಡ್ ಲಸಿಕೆ ದೇಶದಲ್ಲಿ ಇಂದಿನಿಂದ ಲಸಿಕಾ ಉತ್ಸವ; ಅರ್ಹರಿಗೆ ಕೋವಿಡ್ ಲಸಿಕೆ

PM Modi Made A Phone Call To CM Yediyurappa

ಮೈಕ್ರೋಕಂಟೈನ್ಮೆಂಟ್ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಸಲಹೆಯನ್ನು ನೀಡಿದ್ದಾರೆ. ಗುರುವಾರ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಮೋದಿ ಸಭೆಯನ್ನು ನಡೆಸಿದ್ದರು.

ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಶನಿವಾರ 6,955 ಹೊಸ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 61,653.

ಕರ್ನಾಟಕದಲ್ಲಿ ರಾತ್ರಿ ಕರ್ಫ್ಯೂ; ಮಾರ್ಗಸೂಚಿ ಪ್ರಕಟ,ಯಾವುದಕ್ಕೆ ಅನುಮತಿ? ಕರ್ನಾಟಕದಲ್ಲಿ ರಾತ್ರಿ ಕರ್ಫ್ಯೂ; ಮಾರ್ಗಸೂಚಿ ಪ್ರಕಟ,ಯಾವುದಕ್ಕೆ ಅನುಮತಿ?

ಕರ್ನಾಟಕ ಸರ್ಕಾರ ಕೋವಿಡ್ ಸೋಂಕು ಹೆಚ್ಚಿರುವ ಬೆಂಗಳೂರು ನಗರ, ಮೈಸೂರು, ಮಂಗಳೂರು, ಉಡುಪಿ-ಮಣಿಪಾಲ, ಬೀದರ್, ಕಲಬುರಗಿ ಮತ್ತು ತುಮಕೂರು ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಘೋಷಣೆ ಮಾಡಿದೆ.

ಬೆಂಗಳೂರಲ್ಲಿ ನಕಲಿ ಕೋವಿಡ್ ಟೆಸ್ಟ್; ಇಬ್ಬರ ವಿರುದ್ಧ ಎಫ್‌ಐಆರ್ ಬೆಂಗಳೂರಲ್ಲಿ ನಕಲಿ ಕೋವಿಡ್ ಟೆಸ್ಟ್; ಇಬ್ಬರ ವಿರುದ್ಧ ಎಫ್‌ಐಆರ್

Recommended Video

ಈ ದೇಶದಲ್ಲಿ ಕೊರೊನ ರೋಗಿಗೆ ಬೆಡ್ ಇಲ್ವಂತೆ !! | Oneindia Kannada

ಏಪ್ರಿಲ್ 10ರ ಶನಿವಾರದಿಂದ ಏಪ್ರಿಲ್ 20ರ ತನಕ ರಾತ್ರಿ ಕರ್ಫ್ಯೂ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯ ತನಕ ಜಾರಿಯಲ್ಲಿರುತ್ತದೆ. ಬೆಂಗಳೂರು ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.

English summary
Prime Minister of India Narendra Modi made a phone call to Karnataka chief minister B. S. Yediyurappa and discuss about covid situation in state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X