ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಮೋ ಆ್ಯಪ್ ಮೂಲಕ ಕರ್ನಾಟಕ ಬಿಜೆಪಿ ಜೊತೆ ಮೋದಿ ಸಂವಾದ

By Sachhidananda Acharya
|
Google Oneindia Kannada News

ಬೆಂಗಳೂರು, ಏಪ್ರಿಲ್ 26: ಕರ್ನಾಟಕದ ಬಿಜೆಪಿ ಘಟಕದ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಿಗ್ಗೆ ಸಂವಾದ ನಡೆಸಲಿದ್ದಾರೆ. ತಮ್ಮ ವಿಶಿಷ್ಟ ನಮೋ ಆ್ಯಪ್ ಮೂಲಕ ಅವರು ಸಂವಾದ ನಡೆಸಲಿದ್ದಾರೆ.

ಬಿಜೆಪಿಯ ಎಲ್ಲಾ ಅಭ್ಯರ್ಥಿಗಳು, ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರ ಜೊತೆಗೆ ಅವರು ಸಂವಾದ ನಡೆಸಲಿದ್ದಾರೆ.

ಸಂವಾದದ ಸಂದರ್ಭದಲ್ಲಿ ಅವರು ಪಕ್ಷದ ಕಾರ್ಯಕರ್ತರಿಗೆ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಳ್ಳುವಂತೆ ಹುರಿದುಂಬಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕರು, ಸಂಸದರು ಮತ್ತು ಶಾಸಕರಿಗೆ ಅವರು ಸಲಹೆ, ಮಾರ್ಗದರ್ಶನವನ್ನೂ ನೀಡಲಿದ್ದಾರೆ.

PM Modi to interact with Karnataka BJP faction today

ಕರ್ನಾಟಕದಲ್ಲಿ ಚುನಾವಣೆ ಘೋಷಣೆಯಾಗಿದ್ದರೂ ಪ್ರಧಾನಿ ನರೇಂದ್ರ ಮೋದಿ ಇನ್ನೂ ಪ್ರಚಾರಕ್ಕೆ ಇಳಿದಿಲ್ಲ. ಮೇ 1ರಂದು ಅವರು ಉಡುಪಿಗೆ ಭೇಟಿ ನೀಡಲಿದ್ದು ಶ್ರೀ ಕೃಷ್ಣನ ದರ್ಶನ ಪಡೆಯಲಿದ್ದಾರೆ. ನಂತರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಮೂಲಕ ಅಧಿಕೃತವಾಗಿ ಕರ್ನಾಟಕದ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಅವರು ಕಾಲಿಡಲಿದ್ದಾರೆ.

English summary
Karnataka assembly elections 2018: Prime Minister Narendra Modi is scheduled to interact with the Karnataka faction of the Bharatiya Janata Party (BJP) on Thursday morning.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X