ಸುಳ್ಳಿನ ಸರದಾರ ಪ್ರಧಾನಿ ಮೋದಿಗೆ ಸ್ವಾಗತ ಎಂದ ಸಿದ್ದರಾಮಯ್ಯ: ಬಿಜೆಪಿ ಮುಂದಿಟ್ಟ ಪ್ರಶ್ನೆಗಳೇನು?

ಬೆಂಗಳೂರು, ಏಪ್ರಿಲ್ 28: ಕರ್ನಾಟಕದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಗಾಗಿ ಪ್ರಧಾನಿ ನರೇಂದ್ರ ಮೋದಿಯವರು ಉತ್ತರ ಕರ್ನಾಟಕಕ್ಕೆ ಇಂದು ಭಾನುವಾರ ಆಗಮಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಸಾಲು ಸಾಲು ಪ್ರಶ್ನೆಗಳನ್ನು ಕೇಳಿ ವಾಗ್ದಾಳಿ ನಡೆಸಿದ್ದಾರೆ. ಉತ್ತರ ನೀಡಿ ಪ್ರಧಾನಿ ಮೋದಿಯವರೇ ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರಧಾನಿಯವರ ಸುಳ್ಳು ಆರೋಪಗಳು, ತೆರಿಗೆ, ಸಾಲಮನ್ನಾ, ಆಸ್ತಿ ಸಮಾನ ಹಂಚಿಕೆ, ಅಭಿವೃದ್ಧಿ ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.

PM Modi Visit Karnataka CM Siddaramaiah Asked Many Questions Then Slams Central BJP

''ಸತ್ಯದ ನಾಡಾಗಿರುವ ಕರ್ನಾಟಕಕ್ಕೆ ಆಗಮಿಸಲಿರುವ ಸುಳ್ಳಿನ ಸರದಾರರಾದ ಪ್ರಧಾನಿ ನರೇಂದ್ರ ಮೋದಿಯವರಿಗೆ ಸ್ವಾಗತ. ಕಾನೂನು ಪ್ರಕಾರ ಶಿಕ್ಷಾರ್ಹವಾಗಿರುವ ನಿಮ್ಮ ಸುಳ್ಳುಗಳ ಬಗ್ಗೆ ಯಾರೂ ಯಾವುದೇ ಕ್ರಮ ಕೈಗೊಳ್ಳುವ ಪರಿಸ್ಥಿತಿಯಲ್ಲಿ ಇಲ್ಲವಾದರೆ ನಮಗೂ ಗೊತ್ತಾಗುತ್ತದೆ. ಆದ್ದರಿಂದ ನಿಮಗೆ ಆತ್ಮಸಾಕ್ಷಿ ಇದ್ದರೆ ಆತ್ಮಾವಲೋಕನ ಮಾಡಿಕೊಳ್ಳಿ ಎಂದಿದ್ದಾರೆ.

ಇಂದಿನಿ ನಿಮ್ಮ ಭಾಷಣಗಳಲ್ಲಿ ಉತ್ತರಿಸಿ

ನಿಮ್ಮ ಅತಿದೊಡ್ಡ ಸುಳ್ಳುಗಳ ಬಗ್ಗೆ ಕೆಲವು ಪ್ರಶ್ನೆಗಳನ್ನು ನಿಮಗೆ ಕೇಳಬೇಕೆಂದಿದ್ದೇನೆ. ಇಂದಿನ ಭಾಷಣದಲ್ಲಿ ಆ ಪ್ರಶ್ನೆಗಳಿಗೆ ಉತ್ತರಿಸುವಿರಿ ಎಂದು ನಂಬಿದ್ದೇನೆ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರೇ 'ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತಿನ ಸಮೀಕ್ಷೆ ನಡೆಸಿ ಹಿಂದೂಗಳ ಸಂಪತ್ತನ್ನು ಏಳು ಮಕ್ಕಳು ಹುಟ್ಟಿಸುವ ಮುಸ್ಲಿಮರಿಗೆ ಹಂಚಿಕೆ ಮಾಡುತ್ತಾರೆ' ಎಂಬ ಅಪ್ಪಟ ಸುಳ್ಳನ್ನು ನಿರ್ಲಕ್ಷಿಸಿ ಸಾರ್ವಜನಿಕ ಭಾಷಣದಲ್ಲಿ ಹೇಳಿದ್ದೀರಿ. ಇದಕ್ಕೆ ನಿಮ್ಮಲ್ಲಿ ಆಧಾರ ಏನಿದೆ?.

PM Modi Visit Karnataka CM Siddaramaiah Asked Many Questions Then Slams Central BJP

ಪಿತ್ರಾರ್ಜಿತ ಆಸ್ತಿ ತೆರಿಗೆ ಬಗ್ಗೆ ಕಾಂಗ್ರೆಸ್ ಹೇಳಿಲ್ಲ

ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದ ಪ್ರಣಾಳಿಕೆಯ ಯಾವ ಪುಟದಲ್ಲಿ ಈ ಭರವಸೆ ಇದೆ? ಯಾವ ಹಿರಿಯ ನಾಯಕರು ಇದನ್ನು ಹೇಳಿದ್ದಾರೆ? ದಯವಿಟ್ಟು ತಿಳಿಸಿ ಇಲ್ಲದಿದ್ದರೆ ಸುಳ್ಳು ಆರೋಪಕ್ಕಾಗಿ ಕನಿಷ್ಠ ವಿಷಾದವನ್ನಾದರೂ ಸೂಚಿಸಿ ಎಂದು ಅವರು ಆಗ್ರಹಿಸಿದರು.

ಸ್ಯಾಮ್ ಪಿತ್ರೋಡಾ ಹೇಳಿಕೆ ವೈಯಕ್ತಿಕ ಅಭಿಪ್ರಾಯ

ಪ್ರಧಾನಿ ನರೇಂದ್ರ ಮೋದಿಯವರೇ, ಪಿತ್ರಾರ್ಜಿತ ಆಸ್ತಿ ತೆರಿಗೆ ಹೇರುವ ಬಗ್ಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಾಣಾಳಿಕೆಯಲ್ಲಿ ಎಲ್ಲಿಯೂ ಹೇಳಿಲ್ಲ. ಪಕ್ಷದ ವೇದಿಕೆಯಲ್ಲಿಯೂ ಚರ್ಚೆಯಾಗಿಲ್ಲ. ಆ ಚರ್ಚೆಯನ್ನು ಪಕ್ಷ ನಡೆಸಿದ್ದರೆ ಅದಕ್ಕೆ ಆಧಾರ ಕೊಡಿ. ಸ್ಯಾಮ್ ಪಿತ್ರೋಡಾ ಅವರು ಇದನ್ನು ಪ್ರಸ್ತಾಪಿಸಿ ಈ ಬಗ್ಗೆ ಚರ್ಚೆಯಾಗಬೇಕೆಂದು ಹೇಳಿರುವುದು ನಿಜ, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿತ್ತು ಎಂದು ಸ್ಪಷ್ಟಪಡಿಸಿದರು.

ದೇಶದ್ರೋಹಿ ಪಟ್ಟಿಗೆ ಸೇರಿಸುವಿರಾ?

ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರದ ಚರ್ಚೆ ಶುರು ಮಾಡುವುದೇ ನಿಮ್ಮ ಸಹದ್ಯೋಗಿಯಾಗಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್. 2019ರ ಬಜೆಟ್ ನಲ್ಲಿ ಇದನ್ನು ಸೇರಿಸುವ ಬಗ್ಗೆ ಚರ್ಚೆ ನಡೆದಿರುವುದಕ್ಕೆ ಆ ಕಾಲದ ಪತ್ರಿಕೆಗಳ ವರದಿಗಳೇ ಸಾಕ್ಷಿ. ಇದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಈಗ ನಿರ್ಮಲಾ ಸೀತಾರಾಮನ್ ಅವರನ್ನೂ ದೇಶದ್ರೋಹಿ ಪಟ್ಟಿಗೆ ಸೇರಿಸುವಿರಾ? ಎಂದು ತಿರುಗೇಟು ಕೊಟ್ಟರು.

ಆಸ್ತಿ ಸಮಾನ ಹಂಚಿಕೆ ಸಂವಿಧಾನದ ಆಶಯ

ಪ್ರಧಾನಿ ನರೇಂದ್ರ ಮೋದಿಯವರೇ, ಸಂಪತ್ತಿನ ಸಮಾನ ಹಂಚಿಕೆ ಎನ್ನವುದು ಒಂದು ಉದಾತ್ತ ಚಿಂತನೆಯಾಗಿದೆ. ಇದು ನಮ್ಮ ಸಂವಿಧಾನದ ಆಶಯವೂ ಆಗಿದೆ. ನಮ್ಮ ದೇಶದಲ್ಲಿ 1953ರಲ್ಲಿಯೇ ಎಸ್ಟೇಟ್ ತೆರಿಗೆ ಹೇರಲಾಗಿದೆ. ಅದನ್ನು ರದ್ದು ಮಾಡಿದವರು ದಿವಂಗತ ಪ್ರಧಾನಿ ರಾಜೀವ್ ಗಾಂಧಿಯವರು. 1998ರ ವರೆಗೆ ಚಾಲ್ತಿಯಲ್ಲಿದ್ದ ಗಿಫ್ಟ್ ತೆರಿಗೆಯನ್ನು ರದ್ದು ಮಾಡಿದವರು ಆಗಿನ ಪ್ರಧಾನಿ ಹೆಚ್.ಡಿ.ದೇವೇಗೌಡರು ಎಂದು ತಿಳಿಸಿದರು.

2015ರ ಲ್ಲಿದ್ದ ನಿಮ್ಮದೇ ಸರ್ಕಾರ ಸಂಪತ್ತಿನ ಮೇಲಿನ ತೆರಿಗೆಯನ್ನೂ ರದ್ದು ಮಾಡಿದೆ. ಇದು ನಿಮ್ಮ ಗಮನಕ್ಕೆ ಬಂದಿಲ್ಲವೇ? ಮೋದಿಯವರೇ ನಿಮ್ಮದು ಸೂಟುಬೂಟು ಸರ್ಕಾರ, ಶ್ರೀಮಂತರ ಪರ ಮತ್ತು ಬಡವರ ವಿರೋಧಿ ಸರ್ಕಾರ ಎನ್ನುವ ನಮ್ಮ ಆರೋಪ ಆಧಾರ ರಹಿತವಾದುದೇನಲ್ಲ.

ಕಾರ್ಪೋರೇಟ್ ತೆರಿಗೆ 30ರಿಂದ 22ಕ್ಕೆ ಇಳಿಸಿದ್ದು ಬಿಜೆಪಿ

2019ರಲ್ಲಿ ನಿಮ್ಮದೇ ಸರ್ಕಾರ ಶೇಕಡಾ 30ರಷ್ಟಿದ್ದ ಕಾರ್ಪೋರೇಟ್ ತೆರಿಗೆಯನ್ನು ಶೇಕಡಾ 22ಕ್ಕೆ ಇಳಿಸಿದೆ ಎಂದು ನಿಮಗೆ ತಿಳಿದಿರಲಿ. ಈ ಮೂರ್ಖತನದ ನಿರ್ಧಾರದಿಂದಾಗಿ ಎರಡು ವರ್ಷಗಳ ಸರ್ಕಾರ ಕಳೆದುಕೊಂಡ ಆದಾಯ 1.81 ಲಕ್ಷ ಕೋಟಿ ರೂಪಾಯಿ. ದೇಶದ ಬಡವರ ಕಲ್ಯಾಣಕ್ಕಾಗಿ ವ್ಯಯವಾಗಬೇಕಾಗಿದ್ದ ಈ ಹಣ ಕಾರ್ಪೋರೇಟ್ ದೊರೆಗಳ ಜೇಬಿಗೆ ಸೇರಿದೆ. ಅವರ ಲಾಭದಲ್ಲಿ ಯಾರ ಪಾಲು ಎಷ್ಟು? ಎಂದು ಕೇಳಿದರು.

ಇದೇನಾ ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ? ಸಂಪತ್ತಿನ ಸಮಾನ ಹಂಚಿಕೆಯಾಗಬೇಕೆಂಬುದು ನಮ್ಮ ಸಂವಿಧಾನದ ಆಶಯವೂ ಆಗಿದೆ. ಈ ಕರ್ನಾಟಕದಲ್ಲಿ ನಡೆಸಿದಂತೆ ದೇಶದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುವುದಕ್ಕೆ ನಮ್ಮ ಪಕ್ಷಬದ್ಧವಾಗಿದೆ.

ರಾಜಕೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗಬೇಕೆಂಬುದು ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ಖಚಿತ ಅಭಿಪ್ರಾಯವಾಗಿತ್ತು. ನೀವು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಧೈರ್ಯದಿಂದ ಹಾಗೆಂದು ಹೇಳಿಬಿಡಿ. ಇದು ನಿಮ್ಮಿಂದ ಸಾಧ್ಯವೇ?.

ಸಂಪತ್ತಿನ ಸಮಾನ ಹಂಚಿಕೆಯ ನಮ್ಮ ಆಶಯವನ್ನೇ ತಿರುಚಿ ಅದಕ್ಕೆ ಕೋಮುವಾದಿ ಬಣ್ಣ ಬಳಿಯಲು ಮುಂದಾಗಿರುವ ಜಾಣ ನೀವು. ಕೆಲವು ಕುಟುಂಬಗಳ ಕೈಯಲ್ಲಿರುವ ದೇಶದ ಸಂಪತ್ತನ್ನು ಸಮಾನವಾಗಿ ಹಂಚಿದ್ದಾರೆಂದು ರಾಹುಲ್ ಗಾಂಧಿಯವರು ಹೇಳಿದ ಕೂಡಲೇ ನಿಮ್ಮ ಹೊಟ್ಟೆ ಉರಿಯುತ್ತಿರುವುದು ಯಾಕೆ?.

ಕೇಂದ್ರ ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ

ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ಕೋಟಿ ರೂಪಾಯಿ ಸಾಲವನ್ನು ಪಾವತಿ ಮಾಡದೆ ನಿಮ್ಮ ಉದ್ಯಮ ಮಿತ್ರರು ವಿದೇಶಕ್ಕೆ ಪರಾರಿಯಾದಾಗ ನಿಮಗೆ ಹೊಟ್ಟೆ ಉರಿಯಲಿಲ್ಲವೇ? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದ ರೈತರು ಬ್ಯಾಂಕಿನಲ್ಲಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕಳೆದ ಹತ್ತು ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಒತ್ತಾಯಿಸಲಾಗುತ್ತಿದೆ. ಬೇಡಿಕೆಯನ್ನು ತಳ್ಳಿ ಹಾಕುತ್ತಲೇ ಬಂದಿರುವ ಪ್ರಧಾನಿ ಅವರು ಉದ್ಯಮಿಗಳಿಗೆ ಸೇರಿರುವ 16 ಲಕ್ಷ ಕೋಟಿ ರೂಪಾಯಿಯನ್ನು ಒಂದೇ ಏಟಿಗೆ ಮನ್ನಾ ಮಾಡಿದಾಗ ದೇಶದ ಆಸ್ತಿಯನ್ನು ಸಮಾನ ಹಂಚಿಕೆ ಮಾಡಲು ನಿಮಗೆ ಅನಿಸಲಿಲ್ಲವೇ? ಎಂದು ಕಿಡಿ ಕಾರಿದರು.

ಸಾರ್ವಜನಿಕ ಸ್ವಾಮ್ಯದ ಸಂಸ್ಥೆ ಖಾಸಗಿಗೆ ನೀಡಿದ್ಧೀರಿ

ದೇಶದ ಹಿಂದಿನ ಪ್ರಧಾನಿಗಳಾಗಿದ್ದ ಜವಾಹರಲಾಲ್ ನೆಹರೂ 33, ಲಾಲ್ ಬಹದ್ದೂರ್ ಶಾಸ್ತ್ರಿ 5, ಇಂದಿರಾ ಗಾಂಧಿಯವರು 66, ರಾಜೀವ್ ಗಾಂಧಿಯವರು 16, ವಿ.ಪಿ.ಸಿಂಗ್ ಅವರು 2, ಐ.ಕೆ.ಗುಜ್ರಾಲ್ ಅವರು 3, ವಾಜಪೇಯಿ ಅವರು 17 ಮತ್ತು ಮನಮೋಹನ್ ಸಿಂಗ್ ಅವರು 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಸ್ಥಾಪಿಸಿದ್ದರು.

ನೀವು ಒಂದೇ ಒಂದು ಸಾರ್ವಜನಿಕ ಸ್ವಾಮ್ಯದ ಸಂಸ್ಥೆಯನ್ನು ಸ್ಥಾಪಿಸಿಲ್ಲ. ನಿಮ್ಮ ಹತ್ತು ವರ್ಷಗಳ ಆಡಳಿತಾವಧಿಯಲ್ಲಿ 23 ಸಾರ್ವಜನಿಕ ಸ್ವಾಮ್ಯದ ಸಂಸ್ಥೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಿದ್ದೀರಿ. ನಿಮ್ಮ ಕಲ್ಪನೆಯ ಸಮಾನ ಆಸ್ತಿ ಹಂಚಿಕೆ ಎಂದರೆ ಇದೆನಾ?

ಕಾಂಗ್ರೆಸ್ ಆಡಳಿತ ವಿವವರಿಸಿದ ಸಿದ್ದರಾಮಯ್ಯ

ಪ್ರಧಾನಿಯವರೇ, ನಮ್ಮ ಕಾಂಗ್ರೆಸ್ ಪಕ್ಷ ಭೂ ಸುಧಾರಣೆ ಕಾಯ್ದೆಯ ಮೂಲಕ ಉಳುವವನನ್ನೇ ಭೂಮಿಯ ಒಡೆಯ ಮಾಡಿ ಭೂ ರಹಿತರಿಗೆ ಭೂಮಿ ಹಂಚಿಕೆ ಮಾಡಿತು. ಮನೆ ಇಲ್ಲದವರಿಗೆ ಮನೆ, ಶಿಕ್ಷಣಕ್ಕಾಗಿ ಶಾಲೆ, ಆನಾರೋಗ್ಯ ಹೋಗಲಾಡಿಸಲು ಆಸ್ಪತ್ರೆಗಳನ್ನು ನಿರ್ಮಿಸಲಾಯಿತು.

ನಿಮ್ಮ 10 ವರ್ಷಗಳಲ್ಲಿ ನೀವು ಆಸ್ತಿಮಾಡಿಕೊಟ್ಟಿದ್ದು ಅದಾನಿ-ಅಂಬಾನಿಗಳಿಗೆ ಮಾತ್ರ ಅಲ್ಲವೇ? ವಿಮಾನ ನಿಲ್ದಾಣಗಳು, ವಿಮಾನ ನಿಲ್ದಾಣಗಳು, ಕಲ್ಲಿದ್ದಲು ಗಣಿಗಳು, ಅನಿಲ-ತೈಲ ನಿಕ್ಷೇಪಗಳು, ರಸ್ತೆ ಬಂದ ಟೋಲುಗಳು, ವಿದ್ಯುತ್ ನಿಗಮಗಳು ಒಂದೇ ಎರಡೇ ಇವೆಲ್ಲವೂ ನಿಮ್ಮ ಕಾಲದಲ್ಲಿಯೇ ಅಲ್ಲವೇ ಅದಾನಿ-ಅಂಬಾನಿ ಮಡಿಲು ಸೇರಿದ್ದು? ಇದೇನಾ ನಿಮ್ಮ ಸಮಾನ ಆಸ್ತಿ ಹಂಚಿಕೆ? ಎಂದು ಸಿದ್ದರಾಮಯ್ಯ ಅವರು ಸಾಲು ಸಾಲು ಪ್ರಶ್ನೆಗಳ್ನು ಪ್ರಧಾನಿ ಮುಂದಿಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+