ಕನ್ನಡ ರಾಜ್ಯೋತ್ಸವ; ಕನ್ನಡದಲ್ಲೇ ಶುಭಾಶಯ ಕೋರಿದ ಮೋದಿ

ಬೆಂಗಳೂರು, ನವೆಂಬರ್ 01 : 65ನೇ ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಜನರಿಗೆ ಶುಭಾಶಯಗಳನ್ನು ಕೋರಿದ್ದಾರೆ. ಕನ್ನಡದಲ್ಲಿಯೇ ಅವರು ಟ್ವೀಟ್ ಮಾಡಿದ್ದಾರೆ.

ಭಾನುವಾರ ಬೆಳಗ್ಗೆ ಟ್ವೀಟ್ ಮಾಡಿರುವ ನರೇಂದ್ರ ಮೋದಿ, "ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು" ಎಂದು ಹೇಳಿದ್ದಾರೆ.

"ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ" ಎಂದು ಹಾರೈಸಿದ್ದಾರೆ.

PM Modi

ಭಾನುವಾರ 65ನೇ ಕನ್ನಡ ರಾಜ್ಯೋತ್ಸವ ವಿವಿಧ ಪಕ್ಷದ ನಾಯಕರು ಟ್ವಿಟರ್ ಮೂಲಕ ಕನ್ನಡಿಗರಿಗೆ ಶುಭಾಶಯಗಳನ್ನು ಹೇಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಶುಭಾಶಯ ಕೋರಿದ್ದಾರೆ.

ಮುಖ್ಯಮಂತ್ರಿಗಳ ಶುಭಾಶಯ : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹ ರಾಜ್ಯದ ಜನರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಿದ್ದಾರೆ. "ನಾಡಿನ ಸಮಸ್ತ ಜನತೆಗೆ 65ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ಕನ್ನಡ ಭಾಷೆ, ಸಂಸ್ಕೃತಿಗಳ ರಕ್ಷಣೆಯ ಜೊತೆಗೆ ಸಮೃದ್ಧ, ಆರೋಗ್ಯಪೂರ್ಣ, ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣದ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ, ಉಸಿರಾಗಲಿ ಕನ್ನಡ!" ಎಂದು ಅವರು ಟ್ವೀಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+