ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೈತರ ಆದಾಯ ದ್ವಿಗುಣಗೊಳಿಸುವುದು ಪ್ರಧಾನಿ ನರೇಂದ್ರ ಮೋದಿ ಆಶಯ

|
Google Oneindia Kannada News

ಬೆಂಗಳೂರು, ಜ. 02: ರೈತರ ಆದಾಯವನ್ನು ದ್ವಿಗುಣಗೊಳಿಸುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಪೂರಕ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರೈತರಿಗೆ ಭರವಸೆ ನೀಡಿದ್ದಾರೆ. ಬಾಗಲಕೋಟೆ ತೋಟಗಾರಿಕಾ ವಿಶ್ವವಿದ್ಯಾಲಯದ ತೋಟಗಾರಿಕಾ ಮೇಳವನ್ನು ಆನ್‌ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದ್ದಾರೆ.

ಸಿಎಫ್‌ಟಿಆರ್‌ಐ ಹಾಗೂ ಭಾರತೀಯ ತೋಟಗಾರಿಕಾ ಸಂಸ್ಥೆಯ ಸಹಭಾಗಿತ್ವದೊಂದಿಗೆ ತೋಟಗಾರಿಕಾ ಉತ್ಪನ್ನಗಳ ಮೌಲ್ಯವರ್ಧನೆ, ಸಂಸ್ಕರಣೆ, ದಾಸ್ತಾನು ಮತ್ತು ಪ್ಯಾಕೇಜಿಂಗ್ ಗಳ ಬಗ್ಗೆ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಉದ್ದೇಶಿಸಲಾಗಿದೆ. ಒಟ್ಟಾರೆ ತೋಟಗಾರಿಕೆಯನ್ನು ಉದ್ದಿಮೆಯಾಗಿ ಪರಿಗಣಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಸಿಎಂ ಯಡಿಯೂರಪ್ಪ ಅವರು ಇದೇ ಸಂದರ್ಭದಲ್ಲಿ ರೈತರಿಗೆ ಮಹತ್ವದ ಭರವಸೆ ನೀಡಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ತಮಗೆ ತಾವೇ ಪ್ರಮಾಣ ಪತ್ರ ಕೊಟ್ಟುಕೊಳ್ಳುತ್ತಿರುವುದೇಕೆ? ಮುಖ್ಯಮಂತ್ರಿ ಯಡಿಯೂರಪ್ಪ ತಮಗೆ ತಾವೇ ಪ್ರಮಾಣ ಪತ್ರ ಕೊಟ್ಟುಕೊಳ್ಳುತ್ತಿರುವುದೇಕೆ?

ಕಿಸಾನ್ ರೈಲು ಯೋಜನೆ

ಕಿಸಾನ್ ರೈಲು ಯೋಜನೆ

ಪ್ರಧಾನ ಮಂತ್ರಿಯವರು 100ನೇ ಕಿಸಾನ್ ರೈಲಿಗೆ ಇತ್ತೀಚೆಗಷ್ಟೇ ಚಾಲನೆ ನೀಡಿದ್ದಾರೆ. ಮೂರು ತಿಂಗಳ ಅವಧಿಯಲ್ಲಿ ಕಿಸಾನ್ ರೈಲುಗಳ ಮೂಲಕ 27 ಸಾವಿರ ಟನ್ ಕೃಷಿ ಉತ್ಪನ್ನಗಳನ್ನು ಸಾಗಿಸಲಾಗಿದೆ. ಶೀಘ್ರವಾಗಿ ಕೊಳೆತು ಹೋಗಬಹುದಾದ ದಾಳಿಂಬೆ, ಕಿತ್ತಳೆ ಹಾಗೂ ಇತರ ತೋಟಗಾರಿಕಾ ಬೆಳೆಗಳನ್ನು ಇತರ ರಾಜ್ಯಗಳಿಗೆ ಸಾಗಿಸಲು ಕೃಷಿ ರೈಲ್ ಯೋಜನೆಯ ಸೌಲಭ್ಯವನ್ನು ಬಳಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಸಂಶೋಧನೆಗೆ ಸರ್ಕಾರದ ಸಹಾಯ

ಸಂಶೋಧನೆಗೆ ಸರ್ಕಾರದ ಸಹಾಯ

ತೋಟಗಾರಿಕಾ ಬೆಳೆ ಬೆಳೆಯುವುದರಲ್ಲಿ ರಾಜ್ಯವು ಮುಂಚೂಣಿಯಲ್ಲಿದೆ. ಅದರೊಂದಿಗೆ ತನ್ನ ಸ್ಥಾನವನ್ನು ಕಾಯ್ದುಕೊಂಡು ಇನ್ನೂ ಹೆಚ್ಚಿನ ಸಾಧನೆ ಮಾಡಲು ಪೂರಕ ಸಂಶೋಧನೆ ಅಗತ್ಯ. ಹೀಗಾಗಿ ತೋಟಗಾರಿಕಾ ಕ್ಷೇತ್ರದಲ್ಲಿ ನಡೆಯುವ ಸಂಶೋಧನೆಗೆ ಹಾಗೂ ಇತರ ಮೂಲಕಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ಎಲ್ಲ ಸಹಾಯ-ಸಹಕಾರವನ್ನು ರಾಜ್ಯ ಸರ್ಕಾರ ಕೊಡಲಿದೆ ಎಂದು ಯಡುಯೂರಪ್ಪ ಇದೇ ಸಂದರ್ಭದಲ್ಲಿ ಭರವಸೆ ನೀಡಿದ್ದಾರೆ.

ಲಾಭದಾಯಕ ತೋಟಗಾರಿಕೆ

ಲಾಭದಾಯಕ ತೋಟಗಾರಿಕೆ

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಡತನಾಡಿದ ಡಿಸಿಎಂ ಗೋವಿಂದ ಕಾರಜೋಳ ಅವರು, ತೋಟಗಾರಿಕಾ ಪ್ರದೇಶ ವಿಸ್ತರಣೆಯಾಗುತ್ತಿದೆ. ಅದಕ್ಕೆ ಕಾರಣ ತೋಟಗಾರಿಕೆ ಲಾಭದಾಯಕ ಎಂಬುದು. ವಿಜ್ಞಾನಿಗಳು ರೈತರಿಗೆ ಇನ್ನೂ ಹೆಚ್ಚು ಹೆಚ್ಚು ಲಾಭ ತರುವ ತಳಿಗಳನ್ನು ಸಂಶೋಧಿಸಿ, ರೈತರ ಬದುಕು ಹಸನುಗೊಳಿಸಬೇಕು ಎಂದು ಸಲಹೆ ನೀಡಿದರು. ಈ ನಿಟ್ಟಿನಲ್ಲಿ ತೋಟಗಾರಿಕಾ ವಿವಿಯು ರೈತರಿಗೆ ಹಮ್ಮಿಕೊಳ್ಳುತ್ತಿರುವ ತರಬೇತಿ ಕಾರ್ಯಕ್ರಮಗಳು ಶ್ಲಾಘನೀಯ ಎಂದರು.

ತೋಟಗಾರಿಕೆ ಉತ್ತೇಜನಕ್ಕೆ ಕ್ರಮ

ತೋಟಗಾರಿಕೆ ಉತ್ತೇಜನಕ್ಕೆ ಕ್ರಮ

ತೋಟಗಾರಿಕಾ ಸಚಿವ ಡಾ. ನಾರಾಯಣಗೌಡ ಅವರು ಮಾತನಾಡಿ, ರಾಜ್ಯದಲ್ಲಿ ತೋಟಗಾರಿಕೆ ಉತ್ತೇಜನಕ್ಕೆ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ತೋಟಗಾರಿಕೆ ಉತ್ಪನ್ನಗಳ ರಫ್ತು ಪ್ರಮಾಣ ಶೇ. 2.5 ರಿಂದ ಶೇ. 5ಕ್ಕೇರಿದೆ. ಮುಂದಿನ ದಿನಗಳಲ್ಲಿ ಇದನ್ನು ಇನ್ನಷ್ಟು ಹೆಚ್ಚಿಸಲು ರೈತರಿಗೆ ಅಗತ್ಯ ಬೆಂಬಲ ನೀಡಲಾಗುವುದು ಎಂದರು. ಬಾಗಲಕೋಟೆ ಶಾಸಕ ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಿದ್ದರು, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಎಸ್. ಆರ್. ಪಾಟೀಲ, ತೋಟಗಾರಿಕಾ ವಿವಿಯ ಕುಲಪತಿ ಡಾ. ಇಂದ್ರೇಶ್ ಮತ್ತು ಇತರರು ಉಪಸ್ಥಿತರಿದ್ದರು.

Recommended Video

Sreesanth was seen on the field after 8 years | Oneindia Kannada

English summary
Yediyurappa assured the farmers that Prime Minister Narendra Modi's wish to double the income of the farmers is being taken up by the state government. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X