ಕಾಂಗ್ರೆಸ್ ಪಕ್ಷದ ಮೇಲೆ ಜನತೆಗೆ ನಂಬಿಕೆ ಇಲ್ಲ : ಮೋದಿ

Posted By: Gururaj
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 29 : 'ಕರ್ನಾಟಕದ ಜನರು ಚುನಾವಣೆಗೂ ಮೊದಲೇ ವಿಕಾಸ ಪಥವನ್ನು ಸೇರಲು ಕಾತರರಾಗಿದ್ದಾರೆ. ಕರ್ನಾಟಕದವೂ ಅಭಿವೃದ್ಧಿ ಪಥದಲ್ಲಿ ಸಾಗಲಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಸೌಂದರ್ಯಲಹರೀ ಮಹಾಸಮರ್ಪಣೆ ಕಾರ್ಯಕ್ರಮದಲ್ಲಿ ಮೋದಿ

ಭಾನುವಾರ ಮಧ್ಯಾಹ್ನ ಧರ್ಮಸ್ಥಳದ ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಲವು ಬಿಜೆಪಿ ನಾಯಕರು ನರೇಂದ್ರ ಮೋದಿಯವರನ್ನು ಬರಮಾಡಿಕೊಂಡರು.

PM Narendra Modi addresses BJP workers in Bengaluru

ವಿಮಾನ ನಿಲ್ದಾಣದ ಹೊರಗೆ ಆಯೋಜಿಸಿದ್ದ ಸಮಾವೇಶದಲ್ಲಿ ಮೋದಿ ಪಾಲ್ಗೊಂಡು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ತಮ್ಮ ಭಾಷಣದ ಉದ್ದಕ್ಕೂ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. 'ಜನರಿಗೆ ಕಾಂಗ್ರೆಸ್ ಪಕ್ಷದ ಮೇಲೆ ಯಾವುದೇ ನಂಬಿಕೆ ಇಲ್ಲ' ಎಂದು ಟೀಕಿಸಿದರು.

ಚಿತ್ರಗಳು : ಧರ್ಮಸ್ಥಳದಲ್ಲಿ ಪ್ರಧಾನಿ ನರೇಂದ್ರ ಮೋದಿ

PM Narendra Modi addresses BJP workers in Bengaluru

* ಕಾಶ್ಮೀರಕ್ಕಾಗಿ ದೇಶದ ಎಲ್ಲಾ ರಾಜ್ಯದ ಜನರು ಬಲಿದಾನ ನೀಡಿದ್ದಾರೆ. ದೇಶಕ್ಕಾಗಿ ಬಲಿಯಾದವರ ವಿಚಾರದಲ್ಲಿ ರಾಜಕೀಯ ಮಾಡುವುದು ಎಷ್ಟು ಸರಿ?. ಅಂಥವರಿಂದ ದೇಶ ಅಭಿವೃದ್ಧಿಯಾಗುವುದಿಲ್ಲ ಎಂದರು.

ವೀರೇಂದ್ರ ಹೆಗ್ಗಡೆ ಕಾರ್ಯಗಳನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

* ಭಾರತದ ಶಿಸ್ತು, ಸಂಯಮ, ಧೈರ್ಯವನ್ನು ಡೋಕ್ಲಾಂ ಘಟನೆಯಿಂದ ವಿಶ್ವವೇ ನೋಡಿದೆ. ಕಾಂಗ್ರೆಸ್ ಡೋಕ್ಲಾಂ ಬಗ್ಗೆ ಸುಳ್ಳು ಸುದ್ದಿಯನ್ನು ಹಬ್ಬಿಸಿತ್ತು. ಕಾಂಗ್ರೆಸ್ ಪಕ್ಷ ತನ್ನ ಪ್ರತಿ ಹೇಳಿಕೆಗೂ ದೇಶದ ಜನರಿಗೆ ಉತ್ತರ ನೀಡಬೇಕಾಗಿದೆ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Prime Minister Narendra Modi addressed BJP workers rally in HAL airport, Bengaluru on October 29, 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ